ಬೆಂಗಳೂರು: ನಾಳೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಬೆಂಗಳೂರಿಗೆ ಆಗಮಿಸಲಿದ್ದು, ಕೈ ಹಿರಿಯ ನಾಯಕರ ಜೊತೆ ಸಭೆ ನಡೆಸಲಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿರುವ ಕೈ ನಾಯಕರ ಸಭೆಯಲ್ಲಿ ಉಪಚುನಾವಣೆ ತಯಾರಿ ಸಂಬಂಧ ಸಮಾಲೋಚನೆ ನಡೆಸಲಿದ್ದಾರೆ. 15 ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ಕನಿಷ್ಠ 12 ಕ್ಷೇತ್ರ ಗೆಲ್ಲುವುದು ಕಾಂಗ್ರೆಸ್ನ ಗುರಿಯಾಗಿದ್ದು, ಸಮರ್ಥವಾಗಿ ಬಿಜೆಪಿ, ಜೆಡಿಎಸ್ ಅನ್ನು ಎದುರಿಸುವ ನಿಟ್ಟಿನಲ್ಲಿ ಕೈ ನಾಯಕರು ಕಾರ್ಯತಂತ್ರ ರೂಪಿಸಲಿದ್ದಾರೆ ಎನ್ನಲಾಗ್ತಿದೆ.
ಸಭೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಸಂಸದ ಕೆ.ಹೆಚ್. ಮುನಿಯಪ್ಪ, ಬಿ.ಕೆ. ಹರಿಪ್ರಸಾದ್, ಹೆಚ್.ಕೆ. ಪಾಟೀಲ್, ರಮೇಶ್ ಕುಮಾರ್, ವೀರಪ್ಪ ಮೊಯ್ಲಿ ಸೇರಿದಂತೆ ಹಿರಿಯ ನಾಯಕರ ಜತೆ ಸಭೆ ನಡೆಸಿ, ಉಪಚುನಾವಣೆ ಸಂಬಂಧ ಚರ್ಚಿಸಲಿದ್ದಾರೆ. ಇನ್ನು ಬಿಜೆಪಿ ಅತೃಪ್ತ ನಾಯಕರ ಬಗ್ಗೆಯೂ ಸಮಾಲೋಚನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.