ಬೆಂಗಳೂರು: ಕನ್ನಡಿಗರಿಗೆ ಉದ್ಯೋಗ ನೀಡುವಂತೆ ರಾಜ್ಯ ಸರ್ಕಾರಕ್ಕೆ ಡಾ.ಸರೋಜಿನಿ ಮಹಿಷಿ ನೀಡಿದ್ದ ವರದಿ ಜಾರಿಗೆ ತರಲು ಒತ್ತಾಯಿಸಿ ನಾಳೆ ಬಂದ್‌ಗೆ ಕರೆ ನೀಡಿರುವ ಕನ್ನಡ ಪರ ಸಂಘಟನೆಗಳಿಗೆ ರಾಜ್ಯ ಸರ್ಕಾರಿ ನೌಕರರ ಸಂಘ ನೈತಿಕ ಬೆಂಬಲ ನೀಡಿದೆ.
ಉದ್ಯೋಗದಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಹಲವು ವರ್ಷಗಳ ಹಿಂದೆಯೇ ವರದಿ ನೀಡಿದ್ದರೂ ಈವರೆಗೂ ಅನುಷ್ಠಾನವಾಗಿಲ್ಲ. ಹೀಗಾಗಿ ಕನ್ನಡಿಗರಿಗೆ ಕೆಲಸ ಕೊಡಿಸುವ ವಿಚಾರವಾಗಿ ನಾಳೆ ನಡೆಯುತ್ತಿರುವ ಕರ್ನಾಟಕ ಬಂದ್‌ಗೆ ಬಾಹ್ಯ ಬೆಂಬಲ ನೀಡುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ನಾಳೆ ಎಲ್ಲ ಸರ್ಕಾರಿ ನೌಕರರು ಕೆಲಸಕ್ಕೆ ಹಾಜರಾಗಲಿದ್ದಾರೆ ಎಂದು ಸಂಘದ ಅಧ್ಯಕ್ಷ ಸಿ ಎಸ್ ಷಡಕ್ಷರಿ ತಿಳಿಸಿದ್ದಾರೆ.