ಬೆಂಗಳೂರು: ಮಾಜಿ ಎಂಎಲ್ಸಿ ಬೆಮೆಲ್ ಕಾಂತರಾಜು ನಾಳೆ ಮಧ್ಯಾಹ್ನ 12 ಗಂಟೆಗೆ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ರಾಜ್ಯದಲ್ಲಿ ಕೊರೊನಾ ನಿಯಮಾವಳಿ ಕಟ್ಟುನಿಟ್ಟಾಗಿ ಜಾರಿಯಲ್ಲಿರುವ ಹಿನ್ನೆಲೆ ಕಾರ್ಯಕರ್ತರು ಕಚೇರಿಗೆ ಬರಬಾರದು ಎಂದು ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಪದವಿ ಕಾಲೇಜುಗಳಲ್ಲಿ ಕಡ್ಡಾಯ ಕನ್ನಡ ಕಲಿಕೆ: ಜನವರಿ 31ಕ್ಕೆ ವಿಚಾರಣೆ
ಜವಾಬ್ದಾರಿಯುತ ಪಕ್ಷದ ಪ್ರತಿನಿಧಿಗಳಾಗಿ ಕೊರೊನಾ ನಿಯಮಗಳ ಪಾಲನೆ ನಮ್ಮೆಲ್ಲರ ಕರ್ತವ್ಯವಾಗಿದೆ. ಕಾರ್ಯಕರ್ತರು ಹಾಗೂ ಜನರ ಆರೋಗ್ಯದ ಹಿತದೃಷ್ಟಿಯಿಂದ ಈ ನನ್ನ ಮನವಿಗೆ ಸ್ಪಂದಿಸಬೇಕು. ಆಹ್ವಾನಿತ ಮುಖಂಡರನ್ನು ಹೊರತುಪಡಿಸಿ ಬೇರಾರೂ ಬರಕೂಡದು ಎಂದು ಮಾಧ್ಯಮ ಹೇಳಿಕೆ ಮೂಲಕ ಅವರು ತಿಳಿಸಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಬೆಮೆಲ್ ಕಾಂತರಾಜು ತುಮಕೂರಿನ ತುರುವೇಕೆರೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಜೆಡಿಎಸ್ನಿಂದ ವಿಧಾನಪರಿಷತ್ ಸದಸ್ಯರಾಗಿ ತಮ್ಮ ಅವಧಿ ಪೂರ್ಣಗೊಳಿಸಿರುವ ಬೆಮೆಲ್ ಕಾಂತರಾಜ್ ಅವಧಿಯನ್ನು ಪಕ್ಷ ನವೀಕರಿಸಿಲ್ಲ. ಈಗಾಗಲೇ ಹಲವು ಜೆಡಿಎಸ್ ನಾಯಕರು ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ಕಾಂಗ್ರೆಸ್ ನತ್ತ ಮುಖ ಮಾಡಿದ್ದು, ಇದೇ ರೀತಿ ಬೆಮೆಲ್ ಕಾಂತರಾಜು ಸಹ ಜೆಡಿಎಸ್ ತೊರೆದು ಕಾಂಗ್ರೆಸಿಗೆ ಸೇರ್ಪಡೆಯಾಗುತ್ತಿದ್ದಾರೆ. ನಾಳೆ ಸೇರ್ಪಡೆ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಇತರೆ ಕಾಂಗ್ರೆಸ್ ನಾಯಕರು ಉಪಸ್ಥಿತರಿರುತ್ತಾರೆ.