ETV Bharat / state

ಬಿಜೆಪಿ ವಿಶ್ವಾಸಮತ ಹಿನ್ನೆಲೆ; ಸೋಮವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

ವಿಶ್ವಾಸಮತ ಸಾಬೀತುಪಡಿಸುವ ವೇಳೆ ಬಿಜೆಪಿ ವಿರುದ್ಧ ಮತ ಚಲಾಯಿಸುವಂತೆ ಶಾಸಕರಲ್ಲಿ ಮನವಿ ಮಾಡಿಕೊಳ್ಳುವುದು ಸೇರಿದಂತೆ ಹಲವು ವಿಷಯಗಳ ಕುರಿತು ಕಾಂಗ್ರೆಸ್​​ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ನಡೆಯಲಿದೆ.

congress
author img

By

Published : Jul 28, 2019, 6:39 PM IST

ಬೆಂಗಳೂರು: ನಾಳೆ ಬೆಳಿಗ್ಗೆ 9ಗಂಟೆಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿ ಇರುವ ಸಿ.ಎಲ್.ಪಿ. ಕಚೇರಿಯಲ್ಲಿ ಕಾಂಗ್ರೆಸ್​​ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸೋಮವಾರ ವಿಶ್ವಾಸಮತ ಸಾಬೀತುಪಡಿಸುವ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಸಭೆ ಕರೆದಿದೆ. ಸಿ.ಎಲ್​.ಪಿ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ.

ಎಲ್ಲರೂ ಸಭೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಪಕ್ಷದ ವತಿಯಿಂದ ಸೂಚನೆ ನೀಡಲಾಗಿದೆ. ಜೆಡಿಎಸ್​ ಮತ್ತು ಕಾಂಗ್ರೆಸ್​ನ 17 ಅತೃಪ್ತ ಶಾಸಕರನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದಾರೆ. ಇವರಲ್ಲಿ 13 ಮಂದಿ ಕಾಂಗ್ರೆಸ್ ಶಾಸಕರಿದ್ದಾರೆ. ಸದ್ಯ 79 ಸದಸ್ಯರ ಪೈಕಿ ಕಾಂಗ್ರೆಸ್ ಪ್ರಸ್ತುತ 66 ಮಂದಿಯನ್ನು ಹೊಂದಿದೆ. ಜೆಡಿಎಸ್​ ಶಾಸಕರೂ ಕಾಂಗ್ರೆಸ್​​ಗೆ ಬೆಂಬಲ ನೀಡಲಿದ್ದಾರೆ ಎನ್ನಲಾಗಿದೆ.

Intro:newsBody:ವಿಧಾನಸೌಧದಲ್ಲಿ ನಾಳೆ ಕಾಂಗ್ರೆಸ್ ಶಾಸಕಾಂಗ ಸಭೆ

ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ವಿಶ್ವಾಮತ ಸಾಬೀತು ನಾಳೆ ಇರುವ ಹಿನ್ನೆಲೆ ಕಾಂಗ್ರೆಸ್ ಪಕ್ಷ ಶಾಸಕಾಂಗ ಸಭೆ ಕರೆಯಲಾಗಿದೆ.
ನಾಳೆ ವಿಧಾನಸೌಧದಲ್ಲಿ ತುರ್ತು ವಿಧಾನ ಮಂಡಲ ಅಧಿವೇಶನ ಕರೆದಿರುವ ಹಿನ್ನೆಲೆ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದೆ. ನಾಳೆ ಬೆಳಿಗ್ಗೆ 9ಕ್ಕೆ ವಿಧಾನಸೌಧ ಮೊದಲ ಮಹಡಿಯಲ್ಲಿರುವ ಸಿ.ಎಲ್.ಪಿ. ಕಚೇರಿಯಲ್ಲಿ ಸಭೆ ನಡೆಯಲಿದೆ.
ಎಲ್ಲರೂ ಸಭೆಯಲ್ಲಿ ಪಾಲ್ಗೊಳ್ಳುವವಂತೆ ಪಕ್ಷದ ವತಿಯಿಂದ ಸೂಚನೆ ನೀಡಲಾಗಿದೆ. ಸದ್ಯ 79 ಸದಸ್ಯ ಬಲ ಹೊಂದಿದ್ದ ಕಾಂಗ್ರೆಸ್ ಪ್ರಸ್ತುತ 66ಕ್ಕೆ ಕುಸಿದಿದೆ. ಒಟ್ಟು 17 ಶಾಸಕರನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದಾರೆ. ಇವರಲ್ಲಿ 13 ಮಂದಿ ಕಾಂಗ್ರೆಸ್ ಶಾಸಕರೇ ಅನರ್ಹಗೊಂಡಿದ್ದಾರೆ. ಇದರಿಂದ ಸಂಖ್ಯಾಬಲ ಕುಸಿದಿದೆ. ಇವರನ್ನಾದರೂ ನಾಳೆ ಉಳಿಸಿಕೊಂಡು ಬಿಜೆಪಿ ಸರ್ಕಾರದ ವಿರುದ್ಧ ಮತ ಚಲಾಯಿಸುವಂತೆ ಮನವಿ ಮಾಡಿಕೊಳ್ಳಲಾಗುವುದು. ಜೆಡಿಎಸ್ ನಾಳೆ ತಮ್ಮ ಬೆಂಬಲಕ್ಕೆ ನಿಲ್ಲಿದೆ ಎನ್ನುವ ವಿಶ್ವಾಸ ಹೊಂದಲಾಗಿದೆ.
Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.