ETV Bharat / state

ಇಂದು, ನಾಳೆ ಬೆಂಗಳೂರಿನಲ್ಲಿ ಭಾರೀ ಮಳೆ‌ ಸಾಧ್ಯತೆ: ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ಬೆಂಗಳೂರಿನಲ್ಲಿ ಇಂದು ಮತ್ತೆ ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

Bangalore
ಇಂದು, ನಾಳೆ ಬೆಂಗಳೂರಿನಲ್ಲಿ ಭಾರೀ ಮಳೆ‌ ಸಾಧ್ಯತೆ..
author img

By

Published : Aug 9, 2020, 1:40 PM IST

Updated : Aug 9, 2020, 2:08 PM IST

ಬೆಂಗಳೂರು: ರಾಜ್ಯದಲ್ಲಿ ಮಾನ್ಸೂನ್ ಚುರುಕಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಹೊನ್ನಾವರದಲ್ಲಿ 14 ಸೆಂ.ಮೀ ಹಾಗೂ ಕುಂದಾಪುರದಲ್ಲಿ 11 ಸೆಂ.ಮೀ ಮಳೆಯಾಗಿದೆ ಎಂದು ಹವಾಮಾನ ನಿರ್ದೇಶಕ ಸಿ.ಎಸ್. ಪಾಟೀಲ್ ಹೇಳಿದ್ದಾರೆ.

ಹವಾಮಾನ ತಜ್ಞ ಸಿ.ಎಸ್. ಪಾಟೀಲ್

ಉತ್ತರ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದ್ದು ಮಾನ್ಸೂನ್ ದುರ್ಬಲವಾಗಿದೆ. ಅಲ್ಲದೆ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದ್ದು, ಕೊಡಗಿನಲ್ಲಿ 17 ಸೆಂ.ಮೀ. ಹಾಗೂ ಆಗುಂಬೆಯಲ್ಲಿ 9 ಸೆಂ.ಮೀ. ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಆ.9 ರಿಂದ 13ರ ವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದ್ದು, ಆ.9 ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಗೆ ಉತ್ತರ ಕನ್ನಡ ಜಿಲ್ಲೆಯಲ್ಲೂ ಅರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನಲ್ಲಿ ಆ. 9ರಿಂದ 13 ರವರೆಗೆ ಎಲ್ಲಾ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ ಜಿಲ್ಲೆಯಲ್ಲಿಯೂ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ಅಲ್ಲದೆ ಬೆಂಗಳೂರಿನಲ್ಲೂ ಇಂದು ಮತ್ತೆ ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಕರ್ನಾಟಕದ ಕರಾವಳಿಯಲ್ಲಿ ಗಾಳಿಯ ವೇಗ ಹೆಚ್ಚಾಗಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿದಂತೆ ಎಚ್ಚರಿಕೆ ನೀಡಿದ್ದಾರೆ.

Last Updated : Aug 9, 2020, 2:08 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.