ಬೆಂಗಳೂರು: ಸಾರಿಗೆ ನಿಗಮಗಳ ಕಾರ್ಮಿಕರಿಗೆ ಪೂರ್ಣ ವೇತನ ನೀಡಬೇಕು. ಕಾರ್ಮಿಕರ ಮೇಲೆ ಹೆಚ್ಚುತ್ತಿರುವ ಕಿರುಕುಳ, ದಾಳಿಗಳನ್ನು ನಿಲ್ಲಿಸುವಂತೆ ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಶನ್ ಮುಷ್ಕರಕ್ಕೆ ಕರೆ ನೀಡಿದೆ.
4 ಸಾರಿಗೆ ನಿಗಮಗಳ ಕಾರ್ಮಿಕರು ಮುಷ್ಕರಕ್ಕೆ ತಯಾರಿ ನಡೆಸಿದ್ದು, ನವೆಂಬರ್ 5ರಂದು ಅಂದ್ರೆ ನಾಳೆ ಫ್ರೀಡಂ ಪಾರ್ಕ್ನಲ್ಲಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ನೌಕರರ ಮುಷ್ಕರದಿಂದ ಸಾರಿಗೆಯಲ್ಲಿ ವ್ಯತ್ಯಯ ಆಗುವ ಸಾಧ್ಯತೆ ಇದೆ.
ಬೇಡಿಕೆಗಳೇನು?
- ಸಾರಿಗೆ ನಿಗಮಗಳಲ್ಲಿ ವಾಹನಗಳ ಕಾರ್ಯಾಚರಣೆ ಯಥಾಸ್ಥಿತಿಗೆ ಬರುವವರೆಗೂ ಕಾರ್ಮಿಕರಿಗೆ ಪೂರ್ಣ ವೇತನ ನೀಡಬೇಕು
- ಕಾರ್ಮಿಕರು ಗಳಿಸಿದ್ದ ರಜೆಗಳನ್ನು ಅವರ ಖಾತೆಗೆ ಪುನ: ವಾಪಸ್ ನೀಡಬೇಕು
- ಕೋವಿಡ್ ಪಾಸಿಟಿವ್ ಬಂದು ಕ್ವಾರಂಟೈನ್ ಆದ ಅವಧಿ ಹಾಗೂ ಚಿಕಿತ್ಸೆ ಪಡೆದ ಅವಧಿಯಲ್ಲಿ ವೇತನ ಸಹಿತ ರಜೆ ನೀಡುವ ಆದೇಶ ನೀಡಬೇಕು
- ಕೋವಿಡ್ನಿಂದ ನಿಧನರಾದ ಕುಟುಂಬದವರಿಗೆ 30 ಲಕ್ಷ ಹಣ ನೀಡಲು ಆದೇಶ ನೀಡಬೇಕು
- ಬಿಎಂಟಿಸಿ ನಿಗಮದಲ್ಲಿ ಪಾಳಿಯಲ್ಲಿ ಮಾರ್ಗ ಕಾರ್ಯಾಚರಣೆ ಮಾಡಲು ಆರಂಭಿಸಬೇಕು
- ನಿಗಮದಿಂದ ನಿಗಮಕ್ಕೆ ವರ್ಗಾವಣೆ ಮಾಡಬೇಕು
- ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪ್ಯಾಕೇಜ್ ರೂಪದಲ್ಲಿ ಸಾರಿಗೆ ನಿಗಮಗಳಿಗೆ ಹಣ ನೀಡಬೇಕು
- ಸಾರಿಗೆ ನಿಗಮಗಳಿಗೆ ಸರ್ಕಾರ ನೀಡಬೇಕಾಗಿರುವ ಬಾಕಿ ಹಣವನ್ನು ಕೂಡಲೇ ನೀಡಬೇಕು
- ಖಾಸಗಿ ಸಹಭಾಗಿತ್ವದ ಎಲೆಕ್ಟ್ರಿಕ್ ಬಸ್ಸುಗಳ ಕಾರ್ಯಾಚರಣೆ ರದ್ದು ಮಾಡಿ, ಸರ್ಕಾರದ ಒಡೆತನದಲ್ಲಿಯೇ ಎಲೆಕ್ಟ್ರಿಕ್ ಬಸ್ಸುಗಳ ಕಾರ್ಯಾಚರಣೆ ಮಾಡಿ ಕೋವಿಡ್ನಿಂದ ಮೃತಪಟ್ಟ ಕುಟುಂಬದವರಿಗೆ ಉದ್ಯೋಗ ನೀಡಬೇಕು