ಬೆಂಗಳೂರು: ಸಿದ್ದಾಮಯ್ಯ ಅವರ ಟೀಕೆಗಳಿಗೆ ನಾಳೆ ಪತ್ರಿಕಾಗೋಷ್ಠಿ ಕರೆದು ಪ್ರತಿಕ್ರಿಯೆ ನೀಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯನವರ ಏಟಿಗೆ ಎದುರೇಟು ನೀಡಲು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ.
ಸಂದರ್ಶನವೊಂದರಲ್ಲಿ ಮೈತ್ರಿ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣವೆಂದು ದೇವೇಗೌಡರು ನೇರವಾಗಿಯೇ ಆರೋಪಿಸಿದ್ದರು. ಪ್ರತಿಕ್ರಿಯಿಸಿದ ಸಿದ್ದರಾಮಯ್ಯನವರು ಸರ್ಕಾರ ಉರುಳಲು ಕುಮಾರಸ್ವಾಮಿ, ರೇವಣ್ಣ, ದೇವೇಗೌಡರು ಕಾರಣ. ಅವರ ಆರೋಪಗಳು ಎಂದು ಪ್ರತಿಕ್ರಿಯಿಸಿದ್ದರು.
ಕಾಂಗ್ರೆಸ್ ನಾಯಕರ ವಿರುದ್ಧ ಯಾವ ಬಾಂಬ್ ಸಿಡಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.