ETV Bharat / state

ಬೆಂಗಳೂರಲ್ಲಿ ಮತ್ತೆ ಟೋಯಿಂಗ್ ಜಾರಿ ಮಾಡಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು ನಗರದಲ್ಲಿ ಸಾರ್ವಜನಿಕ ಸ್ನೇಹಿ ಮತ್ತು ಸುಗಮ ವಾಹನ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ವಿಸ್ತೃತವಾದ ಚರ್ಚೆ ನಡೆಸಿ ಹಾಗೂ ತಜ್ಞರ ಸಲಹೆ ಪಡೆದು ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

author img

By

Published : Sep 17, 2022, 12:58 PM IST

ಬೆಂಗಳೂರಲ್ಲಿ ಮತ್ತೆ ಟೋಯಿಂಗ್ ಜಾರಿ ಮಾಡಲ್ಲ
towing-will-not-be-implemented

ಬೆಂಗಳೂರು: ನಗರದಲ್ಲಿ ಸ್ಥಗಿತಗೊಳಿಸಲಾಗಿರುವ ಟೋಯಿಂಗ್ ವ್ಯವಸ್ಥೆಯನ್ನು ಪುನಃ ಜಾರಿಗೊಳಿಸುವ ಯಾವುದೇ ಪ್ರಸ್ತಾವನೆ ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಸಚಿವರು, ನಗರದಲ್ಲಿ ಸಾರ್ವಜನಿಕ ಸ್ನೇಹಿ ಮತ್ತು ಸುಗಮ ವಾಹನ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ವಿಸ್ತೃತವಾದ ಚರ್ಚೆ ನಡೆಸಿ ಹಾಗೂ ತಜ್ಞರ ಸಲಹೆ ಪಡೆದು ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಈ ಬಗ್ಗೆ ಚರ್ಚೆ ನಡೆಸಿದ್ದು, ಟೋಯಿಂಗ್ ಬಗ್ಗೆ ಯಾವುದೇ ಅಂತಿಮ ತೀರ್ಮಾನವಾಗಿಲ್ಲ ಎಂದು ತಿಳಿಸಿದ್ದಾರೆ. ಸಾರ್ವಜನಿಕರಲ್ಲಿ ಟೋಯಿಂಗ್ ವ್ಯವಸ್ಥೆ ಬಗ್ಗೆ ಇದ್ದ ಜನಾಕ್ರೋಶ ಹಾಗೂ ಕಿರುಕುಳಗಳ ಬಗ್ಗೆ ಬಂದ ದೂರುಗಳ ಹಿನ್ನೆಲೆಯಲ್ಲಿ ಟೋಯಿಂಗ್ ಸ್ಥಗಿತಗೊಳಿಸಲಾಗಿತ್ತು ಎಂದು ನೆನಪಿಸಿದ ಸಚಿವರು, ಹಳೆಯ ವ್ಯವಸ್ಥೆಯನ್ನು ಪುನಃ ಜಾರಿಗೊಳಿಸಲಾಗುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿದ 32 ಟೋಯಿಂಗ್ ವಾಹನಗಳ ಲೈಸನ್ಸ್ ರದ್ದು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.