ಬೆಂಗಳೂರು: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಪ್ರೈ. ಲಿಮಿಟೆಡ್ ವತಿಯಿಂದ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿಯಡಿಯಲ್ಲಿ 79 ಆಕ್ಸಿಜನ್ ಕಾನ್ಸಂಟ್ರೇಟರ್ಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಬುಧವಾರ ಹಸ್ತಾಂತರಿಸಲಾಯಿತು.
ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ ಟೊಯೊಟಾ ಕಿರ್ಲೋಸ್ಕರ್ ಸಂಸ್ಥೆಯ ಜನರಲ್ ಮ್ಯಾನೇಜರ್ ರಾಜೇಂದ್ರ ಹೆಗಡೆ ಮತ್ತಿತರರು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಸಮ್ಮುಖದಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್ಗಳನ್ನು ಹಸ್ತಾಂತರ ಮಾಡಿದರು.
ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಸರ್ಕಾರದ ಜೊತೆ ಉದ್ಯಮಗಳು ಸಹಕಾರ ನೀಡಬೇಕು ಎನ್ನುವ ಸಿಎಂ ಯಡಿಯೂರಪ್ಪ ಕರೆಗೆ ಹಲವು ಸಂಘ, ಸಂಸ್ಥೆಗಳು, ಉದ್ಯಮಗಳು ಈಗಾಗಲೇ ಸಾಥ್ ನೀಡಿ, ವೈದ್ಯಕೀಯ ಪರಿಕರಗಳನ್ನು ನೀಡಿದ್ದು, ಇಂದು ಟೊಯೊಟಾ ಕಿರ್ಲೋಸ್ಕರ್ ಸಂಸ್ಥೆ ಕೂಡ ಬೆಂಬಲಸ ಸೂಚಿಸಿದೆ.
ಇದನ್ನು ಓದಿ:ನಗರದ ವಿವಿಧೆಡೆ ಬಡವರಿಗೆ ಆಹಾರದ ಕಿಟ್ ವಿತರಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ