ಬೆಂಗಳೂರು: ಪುನೀತ್ ರಾಜ್ಕುಮಾರ್ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಿನ್ನೆಲೆ ಈಗಾಗಲೇ ವಿಧಾನಸೌಧ ಮುಂಭಾಗದಲ್ಲಿ ಸಕಾಲ ಸಿದ್ಧತೆ ಪೂರ್ಣಗೊಂಡಿದ್ದು, ಕೆಲವೇ ಗಂಟೆಗಳಲ್ಲಿ ಸಮಾರಂಭ ನಡೆಯಲಿದೆ. ಕಾರ್ಯಕ್ರಮಕ್ಕಾಗಿ ವಿಧಾನಸೌಧ ಮುಂಭಾಗ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.
ಹೆಚ್ಚು ಸಂಚಾರ ದಟ್ಟಣೆಯಾಗುವ ಹಿನ್ನೆಲೆಯಲ್ಲಿ ಬಾಳೆಕುಂದ್ರಿ ಸರ್ಕಲ್ ಹಾಗೂ ಮೀಸೆ ತಿಮ್ಮಯ್ಯ ಸರ್ಕಲ್ನಿಂದ ಕೆ.ಆರ್. ಸರ್ಕಲ್ವರೆಗೂ ವಾಹನ ಸಂಚಾರ ದಟ್ಟಣೆ ನಿಷೇಧಿಸಲಾಗಿದೆ. ಈ ಬಗ್ಗೆ ಟ್ರಾಫಿಕ್ ಕಮಿಷನರ್ ಡಾ.ಬಿ.ಆರ್.ರವಿಕಾಂತೇಗೌಡ ಮಾತನಾಡಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ವಿಧಾನಸೌಧ ಮುಂಭಾಗದ ರಸ್ತೆಗಳನ್ನು ಬ್ಲಾಕ್ ಮಾಡಲಾಗಿದೆ. ಸಮಾರಂಭದಲ್ಲಿ ಭಾಗಿಯಾಗಲು ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸುತ್ತಿರುವ ಅಭಿಮಾನಿಗಳ ಸಮೂಹ ಸಾರಿಗೆ ಬಳಸಬೇಕು. ಮೆಟ್ರೋ ಮೂಲಕ ಬಂದರೆ ಸುಲಭವಾಗಲಿದೆ. ವಾಹನಗಳನ್ನು ಪಾರ್ಕ್ ಮಾಡಲು ನಿಗದಿತ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ಥೆಯನ್ನೂ ಸಹ ಮಾಡಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ: ಕಾರ್ಯಕ್ರಮಕ್ಕಾಗಿ ಬೆಂಗಳೂರಿಗೆ ಆಗಮಿಸಿದ 'ತಲೈವಾ'