ಬೆಂಗಳೂರು:ಸಂಚಾರ ನಿಯಮ ಉಲ್ಲಂಘನೆ ಸಂಬಂಧ ವಿಧಿಸುತ್ತಿರುವ ದುಬಾರಿ ದಂಡದ ಪ್ರಮಾಣವನ್ನು ಇಂದು ಸ್ವಲ್ಪಮಟ್ಟಿಗೆ ಇಳಿಕೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ದೇಶಾದ್ಯಂತ ಸಂಚಾರಿ ನಿಯಮ ಉಲ್ಲಂಘನೆಗೆ ದುಬಾರಿ ದಂಡ ವಿಧಿಸಿ ಕಾನೂನು ಜಾರಿಗೊಳಿಸಿದ್ದು, ಹಲವು ಕಡೆ ದಂಡದ ಮೊತ್ತ ಇಳಿಕೆಯ ಚರ್ಚೆ ನಡೆಯುತ್ತಿದೆ. ಅದೇ ರೀತಿ ರಾಜ್ಯದಲ್ಲೂ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಚರ್ಚೆ ನಡೀತಿದೆ. ಇಂದು ಈ ಸಂಬಂಧ ಸ್ವಲ್ಪ ಪ್ರಮಾಣದಲ್ಲಿ ಟ್ರಾಫಿಕ್ ಫೈನ್ ಇಳಿಸಿ ಆದೇಶ ಮಾಡುತ್ತೇವೆ ಎಂದರು.
ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಕಾರ್ಯಾಧ್ಯಕ್ಷ ಜೆ ಪಿ ನಡ್ಡಾ ಅವರ ಜೊತೆ ಮಧ್ಯಾದ್ನ 12.30ಕ್ಕೆ ಬಿಜೆಪಿ ಕಚೇರಿಯಲ್ಲಿ ವಿಡಿಯೋ ಸಂವಾದ ನಡೆಸಲಾಗುತ್ತದೆ. ಇಡೀ ದೇಶದಲ್ಲಿ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಅವರು ಮಾತನಾಡುತ್ತಾರೆ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಹಿನ್ನೆಲೆಯಲ್ಲಿ ಪಾದಯಾತ್ರೆ ಬಗ್ಗೆಯೂ ಮಾತಾಡ್ತಾರೆ ಎಂದರು.