ಬೆಂಗಳೂರು: ನಿವಾರ್ ಚಂಡಮಾರುತ ಪರಿಣಾಮ ಸಿಲಿಕಾನ್ ಸಿಟಿಯಲ್ಲಿ ಮುಂಜಾನೆಯಿಂದಲೇ ಜಿಟಿ ಜಿಟಿ ಮಳೆಯಾಗುತ್ತಿದ್ದು, ಟ್ರಾಫಿಕ್ ಜಾಮ್ ಉಂಟಾಗಿದೆ.
ನಗರದ ಹೆಬ್ಬಾಳ, ಕೋರಮಂಗಲ,ಮಲ್ಲೇಶ್ವರಂ, ಮೆಜೆಸ್ಟಿಕ್ ಹೀಗೆ ಪ್ರಮುಖ ಸ್ಥಳದಲ್ಲಿ ಮಳೆ ಹಾಗೂ ಗಾಳಿ ಬೀಸುತ್ತಿದ್ದು, ಇದರಿಂದ ವಾಹನ ಸವಾರರರು ನಿಧಾನಗತಿಯಲ್ಲಿ ತೆರಳುವುದು ಅನಿವಾರ್ಯವಾಗಿದೆ. ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸಂಚಾರಿ ಪೊಲೀಸರು ಟ್ರಾಫಿಕ್ ಕ್ಲಿಯರ್ ಮಾಡುವಲ್ಲಿ ನಿರತರಾಗಿದ್ದಾರೆ.
ಇನ್ನು ಕಾರ್ಮಿಕ ನೀತಿ ಕಾಯ್ದೆ ವಿರುದ್ಧ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಟೋಗಳು, ಇಂಡಸ್ಟ್ರಿಯಲ್ ನೌಕರರು ಪ್ರತಿಭಟನೆಗಿಳಿದಿದ್ದು, ಪರಿಣಾಮ ಮೆಜೆಸ್ಟಿಕ್ ಸುತ್ತಮುತ್ತ ಜನರು ಸಂಚರಿಸಲು ಪರದಾಡುತ್ತಿದ್ದಾರೆ.