ETV Bharat / state

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೈನ್... ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

author img

By

Published : Mar 11, 2019, 3:46 PM IST

ವಿದ್ಯುತ್ ಕಂಬಕ್ಕೆ ಕ್ರೈನ್ ಡಿಕ್ಕಿ ಹೊಡೆದ ಪರಿಣಾಮ ನೆಲಮಂಗಲ ರಾಷ್ಟ್ರೀಯ ಹೆದ್ದಾರಿಗೆ ಅಡ್ಡವಾಗಿ ವಿದ್ಯುತ್ ಕಂಬ ಮುರಿದು ಬಿದ್ದು, ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡಿದರು.

ಟ್ರಾಫಿಕ್ ಜಾಮ್​

ನೆಲಮಂಗಲ: ನಗರದ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ವಿದ್ಯುತ್ ಕಂಬಕ್ಕೆ ಕ್ರೈನ್ ಡಿಕ್ಕಿ ಹೊಡೆದು ವಿದ್ಯುತ್ ಕಂಬ ಮುರಿದು ಬಿದ್ದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್​ನಿಂದ ವಾಹನ ಸವಾರರು ಪರದಾಡುವಂತಾಯಿತು.

ಟ್ರಾಫಿಕ್ ಜಾಮ್​

ನೆಲಮಂಗಲ ಸಮೀಪದ ಜಾಸ್ ಟೋಲ್ ಬಳಿ ಈ ಘಟನೆ ನಡೆದಿದ್ದು, ವಿದ್ಯುತ್ ಕಂಬಕ್ಕೆ ಕ್ರೈನ್ ಡಿಕ್ಕಿ ಹೊಡೆದ ಪರಿಣಾಮ ರಾಷ್ಟ್ರೀಯ ಹೆದ್ದಾರಿಗೆ ಅಡ್ಡವಾಗಿ ವಿದ್ಯುತ್ ಕಂಬ ಮುರಿದು ಬಿದ್ದಿದೆ.ಪರಿಣಾಮ ಕೈಗೆಟಕುವ ರೀತಿಯಲ್ಲಿ ವಿದ್ಯುತ್ ತಂತಿಗಳು ಜೋತು ಬಿದ್ದಿತ್ತು. ಇದರಿಂದ ವಾಹನ ಸವಾರರು ಪರದಾಡುವಂತಾಯಿತು.

ವಿದ್ಯುತ್ ಕಂಬ ತೆರವು ಮಾಡುವ ಕಾರ್ಯಕ್ಕೆ ಬೆಸ್ಕಾಂ ಸಿಬ್ಬಂದಿಗಳು ಬಾರದೆ ಇದ್ದಿದ್ದರಿಂದ ಸಾರ್ವಜನಿಕರೇ ವಿದ್ಯುತ್ ಕಂಬ ತೆರವು ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಕೆಲಕಾಲ ರಾಷ್ಟ್ರೀಯ ಹೆದ್ದಾರಿ 4ರ ಎರಡು ಕಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಘಟನಾ ಸ್ಥಳಕ್ಕೆ ಆಗಮಿಸಿದ ನೆಲಮಂಗಲ ಸಂಚಾರಿ ಪೊಲೀಸರು ಟ್ರಾಫಿಕ್ ಜಾಮ್ ತೆರವು ಮಾಡಿದರು.

sample description
ETV Bharat Logo

Copyright © 2024 Ushodaya Enterprises Pvt. Ltd., All Rights Reserved.