ETV Bharat / state

ಬೆಂಗಳೂರಿನಲ್ಲಿ ಅಬ್ಬರಿಸಿದ ವರುಣ.. ಹಲವೆಡೆ ಟ್ರಾಫಿಕ್ ಜಾಮ್, ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು..

ಭಾರಿ ಮಳೆಗೆ ಮಲ್ಲೇಶ್ವರ, ಮೈಸೂರು ರಸ್ತೆ, ರಾಜಭವನ ರಸ್ತೆ, ಶಿವಾಜಿನಗರ, ರಾಜಾಜಿನಗರ, ಪ್ಯಾಲೇಸ್​ ಗುಟ್ಟಹಳ್ಳಿ, ಹಲಸೂರು, ಶಿವಾನಂದ ವೃತ್ತ, ಕೆ. ಆರ್ ಪುರ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಅರ್ಧ ಅಡಿಯಷ್ಟು ನೀರು ನಿಂತಿದೆ. ಕೇವಲ ಅರ್ಧ ಗಂಟೆ ಸುರಿದ ಮಳೆಗೆ ಸ್ಮಾರ್ಟ್ ಸಿಟಿ ಯೋಜನೆಯಿಂದ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿ ಸ್ಥಳಗಳಲ್ಲಿ ನೀರು ನಿಂತಿದ್ದು, ಸಾಕಷ್ಟು ಟ್ರಾಫಿಕ್ ಸಮಸ್ಯೆ ಕೂಡ ಉಂಟಾಯಿತು..

rain
ಮಳೆ
author img

By

Published : Sep 28, 2021, 9:07 PM IST

Updated : Sep 28, 2021, 10:41 PM IST

ಬೆಂಗಳೂರು : ನಗರದ ಹಲವು ಭಾಗಗಳಲ್ಲಿ ಇಂದು (ಮಂಗಳವಾರ) 3 ಗಂಟೆಯಿಂದ 3.30ರವರೆಗೆ ಭಾರಿ ಮಳೆಯಾಗಿದೆ. ಕೆಲವೆಡೆ ಮರಗಳು ನೆಲಕ್ಕುರುಳಿವೆ. ನಗರದ ಹಲವೆಡೆ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಜನರು ಸಾಕಷ್ಟು ಪರದಾಡುವಂತಾಗಿದೆ. ವಾಹನ ಸವಾರರು ಟ್ರಾಫಿಕ್ ಜಾಮ್​ನಲ್ಲಿ ಪರದಾಡುವಂತಾಯಿತು. ಸಂಜೆ ಕೂಡ ಮಳೆಯಾಗಲಿದ್ದು, ರಾತ್ರಿಯವರೆಗೆ ಸುರಿಯುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಕೂಡ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಅಬ್ಬರಿಸಿದ ವರುಣ

ಹಲವೆಡೆ ಮಳೆ : ನಗರದ ಆರ್. ಆರ್ ನಗರ, ಅಂಜನಪುರ, ಬೇಗೂರು, ಯಲಹಂಕ, ವಿದ್ಯಾರಣ್ಯಪುರ, ಮಹದೇವಪುರ, ಹೊರಮಾವು, ಪ್ಯಾಲೇಸ್​ ಗುಟ್ಟಹಳ್ಳಿ, ಮಲ್ಲೇಶ್ವರ, ವಿಧಾನಸೌಧ, ಪುಲಕೇಶಿನಗರ, ನಾಗರಬಾವಿ, ಕೋರಮಂಗಲ, ನಾಯಂಡಹಳ್ಳಿ, ಲಕ್ಕಸಂದ್ರ, ವಿದ್ಯಾಪೀಠ, ಕೆಂಗೇರಿ ಸೇರಿ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಸದಾಶಿವನಗರ, ಯಶವಂತಪುರ, ಹೂಡಿ, ವಿಶ್ವನಾಥನಾಗೇನಹಳ್ಳಿ, ರಾಮಮೂರ್ತಿನಗರ, ಕಾಡುಗೋಡಿ ಸೇರಿ ಬಹುತೇಕ ಕಡೆ ಕೂಡ ಮಳೆಯಾಗಿರುವ ವರದಿಯಾಗಿದೆ.

ಪ್ರಮುಖ ರಸ್ತೆಗಳಲ್ಲಿ ನೀರು : ಭಾರಿ ಮಳೆಗೆ ಮಲ್ಲೇಶ್ವರ, ಮೈಸೂರು ರಸ್ತೆ, ರಾಜಭವನ ರಸ್ತೆ, ಶಿವಾಜಿನಗರ, ರಾಜಾಜಿನಗರ, ಪ್ಯಾಲೇಸ್​ ಗುಟ್ಟಹಳ್ಳಿ, ಹಲಸೂರು, ಶಿವಾನಂದ ವೃತ್ತ, ಕೆ. ಆರ್ ಪುರ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಅರ್ಧ ಅಡಿಯಷ್ಟು ನೀರು ನಿಂತಿದೆ. ಕೇವಲ ಅರ್ಧ ಗಂಟೆ ಸುರಿದ ಮಳೆಗೆ ಸ್ಮಾರ್ಟ್ ಸಿಟಿ ಯೋಜನೆಯಿಂದ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿ ಸ್ಥಳಗಳಲ್ಲಿ ನೀರು ನಿಂತಿದ್ದು, ಸಾಕಷ್ಟು ಟ್ರಾಫಿಕ್ ಸಮಸ್ಯೆ ಕೂಡ ಉಂಟಾಯಿತು.

ಓದಿ: ಕೃಷ್ಣಾ ಮೇಲ್ದಂಡೆ ಯೋಜನೆಗೆ ಕಾನೂನು ಕೋಶ ಬಲಿಷ್ಠಗೊಳಿಸಲು ಸಿಎಂ ಸೂಚನೆ!

Last Updated : Sep 28, 2021, 10:41 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.