ಬೆಂಗಳೂರು: ವಾಹನ ತಪಾಸಣೆ ನಡೆಸುತ್ತಿದ್ದ ಸಂಚಾರಿ ಪೊಲೀಸರನ್ನು ನೋಡಿ ಆತಂಕಕ್ಕೊಳಗಾದ ಬೈಕ್ ಸವಾರರು ಸೆಲ್ಫ್ ಆಕ್ಸಿಡೆಂಟ್ ಮಾಡಿಕೊಂಡು ಗಾಯಗೊಂಡಿರುವ ಘಟನೆ ಕಾಮಾಕ್ಷಿಪಾಳ್ಯ ಸಂಚಾರಿ ಠಾಣಾ ವ್ಯಾಪ್ತಿಯ ಸುಮನಹಳ್ಳಿ ರಿಂಗ್ ರಸ್ತೆಯಲ್ಲಿ ನಡೆದಿದೆ. ಮನೋಜ್ ಹಾಗೂ ಸೋಮು ಗಾಯಗೊಂಡವರು ಎಂದು ಗುರುತಿಸಲಾಗಿದ್ದು, ಸಂಚಾರಿ ಪೊಲೀಸರ ನೆರವಿನಿಂದ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಸುಮನಹಳ್ಳಿ ಜಂಕ್ಷನ್ ಬಳಿ ಇಂದು ಬೆಳಗ್ಗೆ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸರು ಸ್ಪಿಡ್ ಚೆಕ್ ಮಾಡುವ ವಾಹನ ನಿಲ್ಲಿಸಿಕೊಂಡು ತಪಾಸಣೆ ನಡೆಸುತ್ತಿದ್ದರು. ಈ ವೇಳೆ, ಅದೇ ದಾರಿಯಲ್ಲಿ ಬರುತ್ತಿದ್ದ ಸವಾರ ಮನೋಜ್ ಹಾಗೂ ಹಿಂಬದಿ ಸವಾರ ಸೋಮು ಪೊಲೀಸರನ್ನು ನೋಡಿ ಗಾಬರಿಯಾಗಿದ್ದಾರೆ. ವೇಗದಲ್ಲಿ ಬೈಕ್ ಚಲಾಯಿಸುತ್ತಿದ್ದ ಕಾರಣ ನಿಲ್ಲಿಸಲು ಸಾಧ್ಯವಾಗದೇ ಸ್ಥಳದಲ್ಲಿ ಬಿದ್ದು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯರ ನೆರವಿನಿಂದ ಪೊಲೀಸರೇ ಆಸ್ಪತ್ರೆಗೆ ಸೇರಿಸಿದ್ದಾರೆ.
ಇದನ್ನೂ ಓದಿ: ಟಿಪ್ಪರ್ ಲಾರಿ ಡಿಕ್ಕಿ : ಚಿಕಿತ್ಸೆ ಫಲಿಸದೇ ಬಿಬಿಎಂ ವಿದ್ಯಾರ್ಥಿನಿ ಸಾವು