ETV Bharat / state

ನಾಳೆ ಬೆಂಗಳೂರಿಗೆ ಮೋದಿ ಆಗಮನ: ಕೆಲ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ - Bangalore traffic route change

ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಕಾರಣ ಭದ್ರತಾ ದೃಷ್ಟಿಯಿಂದ ನಾಳೆ ಬೆಳಗ್ಗೆ 6 ರಿಂದ ಮಧ್ಯಾಹ್ನ 2ರ ವರೆಗೆ ಕೆಲ ರಸ್ತೆಗಳಲ್ಲಿ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಿ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ನಗರ ಪೊಲೀಸ್ ಜಂಟಿ ಆಯುಕ್ತ ಬಿ ಆರ್ ರವಿಕಾಂತೇಗೌಡ ತಿಳಿಸಿದ್ದಾರೆ.

traffic
ಬಿ ಆರ್ ರವಿಕಾಂತೇಗೌಡ
author img

By

Published : Nov 10, 2022, 1:37 PM IST

ಬೆಂಗಳೂರು: ವಿವಿಧ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಲುವಾಗಿ ನಾಳೆ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಕಾರಣ ಸುಗಮ ಸಂಚಾರ ವ್ಯವಸ್ಥೆಗೆ ಅಡಚಣೆಯಾಗದಂತೆ ಹಾಗೂ ಭದ್ರತಾ ದೃಷ್ಟಿಯಿಂದ ವಿಧಾನಸೌಧ, ರಾಜಭವನ ಸೇರಿದಂತೆ ಹಲವು ರಸ್ತೆಗಳಲ್ಲಿ ಸಂಚಾರವನ್ನು ನಿಷೇಧಿಸಲಾಗಿದೆ.

ರಾಜಧಾನಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ನಾಳೆ ಬೆಳಗ್ಗೆ 6 ರಿಂದ ಮಧ್ಯಾಹ್ನ 2ರ ವರೆಗೆ ಈ ರಸ್ತೆಗಳಲ್ಲಿ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಿ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ನಗರ ಪೊಲೀಸ್ ಜಂಟಿ ಆಯುಕ್ತ ಬಿ.ಆರ್. ರವಿಕಾಂತೇಗೌಡ ತಿಳಿಸಿದ್ದಾರೆ.

ಇದನ್ನೂ ಓದಿ: ಮೈಸೂರಲ್ಲಿ ಪ್ರಧಾನಿ ಮೋದಿಗಾಗಿ ಸಿದ್ಧವಾಗಿದೆ ವಿಶೇಷ ಬನಾರಸ್ ಪೇಟ..

ಮೊದಲು ಶಾಸಕರ ಭವನದಲ್ಲಿ ಕನಕದಾಸ ಮತ್ತು ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಿರುವ ಮೋದಿ, ಆನಂತರ ಸಂಗೊಳ್ಳಿರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್‌ ರೈಲು ಉದ್ಘಾಟನೆ ಮಾಡಲಿದ್ದಾರೆ. ಬಳಿಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್‌-2 ಉದ್ಘಾಟನೆ ಮತ್ತು ಕೆಂಪೇಗೌಡ ಪ್ರತಿಮೆಯ ಅನಾವರಣ ಮಾಡಲಿದ್ದಾರೆ.

ಮಾರ್ಗ ಬದಲಾವಣೆ ಕುರಿತು ಮಾಹಿತಿ ನೀಡಿದ ನಗರ ಪೊಲೀಸ್ ಜಂಟಿ ಆಯುಕ್ತ ಬಿ ಆರ್ ರವಿಕಾಂತೇಗೌಡ

ಇದನ್ನೂ ಓದಿ: ಕೆಂಪೇಗೌಡರ ಪ್ರತಿಮೆ ಜಗತ್ತಿನ ಎತ್ತರದ ಕಂಚಿನ ಪ್ರತಿಮೆ.. ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ನಿಂದ ಪ್ರಮಾಣಪತ್ರ

ಈ ಹಿನ್ನೆಲೆ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲವಾಗಲು ಹಾಗೂ ಪ್ರಧಾನ ಮಂತ್ರಿಗಳ ಸಂಚಾರ ಮತ್ತು ಭದ್ರತಾ ದೃಷ್ಟಿಯಿಂದ ಸಿಟಿಒ ಜಂಕ್ಷನ್, ಪೊಲೀಸ್ ತಿಮ್ಮಯ್ಯ ಜಂಕ್ಷನ್, ರಾಜಭವನ ರಸ್ತೆ, ಬಸವೇಶ್ವರ ವೃತ್ತ, ಅರಮನೆ ರಸ್ತೆ, ರೇಸ್ ಕೋರ್ಸ್ ರಸ್ತೆ, ಸ್ಯಾಂಕಿ ರಸ್ತೆ, ಕ್ಲೀನ್ಸ್ ರಸ್ತೆ, ಒಳ್ಳಾರಿ ರಸ್ತೆ, ಎ‌ರ್ ಪೋರ್ಟ್ ಎಲಿವೇಟೆಡ್ ಕಾರಿಡಾರ್ ರಸ್ತೆ, ಶೇಷಾದ್ರಿ, ರಸ್ತೆ, ಕೆ.ಜಿ ರಸ್ತೆ, ವಾಟಾಳ್ ನಾಗರಾಜ್ ರಸ್ತೆ, ಇಂಟರ್ ನ್ಯಾಷನಲ್ ಸ‌ಪೋರ್ಟ್​ನ ಸುತ್ತಮುತ್ತಲಿನ ರಸ್ತೆಗಳನ್ನು ಸಂಚಾರಕ್ಕಾಗಿ ಬಳಸದೇ ಬದಲಿ ರಸ್ತೆಗಳಾದ ಮೈಸೂರು ಬ್ಯಾಂಕ್ ವೃತ್ತ, ಎಲ್‌ಆರ್‌ಡಿಐ ಜಂಕ್ಷನ್, ಟ್ರಿಲೈಟ್ ಜಂಕ್ಷನ್, ರೇಸ್‌ ವ್ಯೂವ್ ಜಂಕ್ಷನ್, ಮಾರಮ್ಮ ವೃತ್ತ, ಭಾಷ್ಯಂ ವೃತ್ತ, ಕ್ಲೀನ್ ವೃತ್ತ, ಬಾಳೇಕುಂದ್ರಿ ಜಂಕ್ಷನ್, ಕೆಆರ್ ಪುರಂ-ಬಾಣಸವಾಡಿ, ಮಡಿವಾಳ-ವೈಟ್‌ಫೀಲ್ಡ್, ಬನಶಂಕರಿ- ಕೆಂಗೇರಿ-ಮಾಗಡಿ ರಸ್ತೆ, ತುಮಕೂರು ರಸ್ತೆ-ಪೀಣ್ಯ-ಯಶವಂತಪುರ, ಹೊಸುರು-ಆನೇಕಲ್ -ಕನಕಪುರ-ರಾಮನಗರ-ಮಾಗಡಿ, ಜಯನಗರ-ಬಸವನಗುಡಿ, ಹಲಸೂರು, ಶಿವಾಜಿನಗರ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.