ಬೆಂಗಳೂರು: ರಾಜ್ಯ ಚುನಾವಣೆ ಮಾರ್ಗಸೂಚಿಯಂತೆ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿಯಾಗಿದ್ದು, 13 ಐಪಿಎಸ್ ಅಧಿಕಾರಿಗಳು ಹಾಗೂ 74 ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ವಿಧಾನ ಸಭಾ ಚುನಾವಣೆ ಸಮೀಪ ಬರುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆ ಆಯೋಗದ ನಿರ್ದೇಶನದಂತೆ ಐಪಿಎಸ್ ಅಧಿಕಾರಿಗಳು ಹಾಗೂ ಡಿವೈಎಸ್ಪಿಗಳನ್ನು ವರ್ಗಾವನೆ ಮಾಡಲಾಗಿದೆ. ಸದ್ಯದಲ್ಲೇ ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಬೀಳುವ ಸಾಧ್ಯತೆಯಿದೆ.
ವರ್ಗಾವಣೆಯಾದ ಐಪಿಎಸ್ ಅಧಿಕಾರಿಗಳು : ಕಾರ್ತಿಕ್ ರೆಡ್ಡಿ - ರಾಮನಗರ ಎಸ್ಪಿ, ವಿನಾಯಕ್ ಪಾಟೀಲ್ - ಅಸಿಸ್ಟೆಂಟ್ ಇನ್‌ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್, ಪೊಲೀಸ್ ಜನರಲ್, ಸಂತೋಷ್ ಬಾಬು - ಇಂಟೆಲಿಜೆನ್ಸ್. ದೇವರಾಜ್ - ಉತ್ತರ ವಿಭಾಗ ಬೆಂಗಳೂರು ನಗರ, ಸಿರಿಗೌರಿ - ಇಂಟರ್ನಲ್ ಸೆಕ್ಯೂರಿಟಿ ಡಿವಿಷನ್ (ಐಎಸ್ ಡಿ) ಟಿ.ಪಿ ಶಿವಕುಮಾರ್ - ಕೆಪಿಟಿಸಿಎಲ್, ಶೇಖರ್ ಎಚ್ - ಎಸ್ಪಿ, ಕಾನೂನು ಸುವ್ಯವಸ್ಥೆ ಬೆಳಗಾವಿ ಸಿಟಿ. ಪದ್ಮಿನಿ ಸಾಹೋ - ಚಾಮರಾಜನಗರ ಎಸ್ಪಿ, ಪ್ರದೀಪ್ ಗುಂಟಿ - ಕಾರಾಗೃಹ ಇಲಾಖೆ, ಗೀತಾ ಎಂ. ಎಸ್ - ಟ್ರೈನಿಂಗ್ ಸ್ಕೂಲ್ ಮೈಸೂರು. ರಾಮರಾಜನ್ - ಕೊಡಗು - ಮಡಿಕೇರಿ ಎಸ್ಪಿ, ರವೀಂದ್ರ ಕಾಶಿನಾಥ್ - ಕಮ್ಯಾಂಡ್ ಸೆಂಟರ್ ಬೆಂಗಳೂರು ನಗರ ಹಾಗೂ ಅಯ್ಯಪ್ಪ ಎಂ. ಎ. ಇಂಟೆಲಿಜೆನ್ಸ್- ಈ ವಿಭಾಗಗಳಿಂದ ಇಷ್ಟು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಸಾಂಟ್ರೋ ರವಿ ಪತ್ನಿ ನೀಡಿದ ದೂರಿನ ಪ್ರಕರಣ ತನಿಖಾಧಿಕಾರಿ ವರ್ಗ: ಇನ್ನೂ 74 ಮಂದಿ ಡಿವೈಎಸ್ಪಿ ಅಧಿಕಾರಿಗಳನ್ನೂ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ಸೇರಿ ರಾಜ್ಯ ಪೊಲೀಸ್ ಇಲಾಖೆಯ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿವೈಎಸ್ಪಿ ಮಟ್ಟದ ಅಧಿಕಾರಿಗಳನ್ನು ಚುನಾವಣಾ ಆಯೋಗದ ಗೈಡ್ ಲೆನ್ಸ್ ಪ್ರಕಾರ ವರ್ಗಾವಣೆ ಮಾಡಲಾಗಿದೆ. ಸ್ಯಾಂಟ್ರೋ ರವಿ ವಿರುದ್ಧ ಆತನ ಪತ್ನಿ ನೀಡಿದ್ದ ಆತ್ಯಾಚಾರ ಆರೋಪದ ದೂರಿನ ಪ್ರಕರಣವನ್ನು ತನಿಖೆ ಮಾಡುತ್ತಿದ್ದ ಅಧಿಕಾರಿಯನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಸ್ಯಾಂಟ್ರೋ ರವಿ ಪತ್ನಿ ವಿರುದ್ಧ ಸುಳ್ಳು ಕೇಸ್ ದಾಖಲಿಸಿದ್ದ ಕಾಟನ್‌ಪೇಟೆ ಇನ್‌ಸ್ಪೆಕ್ಟರ್ ಪ್ರವೀಣ್ ಪ್ರಕರಣ ಸಂಬಂಧ ಸಿಸಿಬಿಗೆ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರು ತನಿಖೆ ನಡೆಸುವಂತೆ ಆದೇಶ ನೀಡಿದ್ದರು. ಇದರಂತೆ ಎಸಿಪಿ ಎಚ್. ಎನ್. ಧರ್ಮೇಂದ್ರ ಅವರು ತನಿಖೆ ಉಸ್ತುವಾರಿ ವಹಿಸಿಕೊಂಡಿದ್ದರು. ಆವರು ಸ್ಯಾಂಟ್ರೊ ರವಿ ಪತ್ನಿ ಹಾಗೂ ಅಮಾನತುಗೊಂಡಿದ್ದ ಇನ್‌ಸ್ಪೆಕ್ಟರ್ ಪ್ರವೀಣ್ ಅವರನ್ನು ವಿಚಾರಣೆಗೊಳಪಡಿಸಿದ್ದರು. ಎಸಿಪಿ ಎಚ್ ಎನ್ ಧರ್ಮೇಂದ್ರ ಅವರನ್ನೂ ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ಸದ್ಯ ಐಪಿಎಸ್ ಅಧಿಕಾರಿ ಹಾಗೂ ಡಿವೈಎಸ್ಪಿಗಳನ್ನು ವರ್ಗಗೊಳಿಸಲಾಗಿದ್ದು, ಇಂದೇ ಇನ್ಸ್ಪೆಕ್ಟರ್ಗಳ ವರ್ಗಾವಣೆ ಆದೇಶ ಹೊರಬೀಳುವ ಸಾಧ್ಯತೆಯಿದೆ.
ಇದನ್ನೂ ಓದಿ: ಬಿಜೆಪಿಯಿಂದ ಚುನಾವಣಾ ಅಕ್ರಮ ತಡೆಯುವಂತೆ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಮನವಿ