ಬೆಂಗಳೂರು: ಸಿಎಂ ಅಪರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಈ ಸಂಬಂಧ ಆದೇಶ ಹೊರಡಿಸಿರುವ ಸರ್ಕಾರ ಇ.ವಿ. ರಮಣ ರೆಡ್ಡಿಯವರನ್ನು ಸಿಎಂ ಅಪರ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾಯಿಸಿದೆ. ಇ.ವಿ. ರಮಣ ರೆಡ್ಡಿ ಐಟಿ, ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ಮುಂದುವರಿಯಲಿದ್ದಾರೆ.
![ಸರ್ಕಾರದ ಆದೇಶ ಪ್ರತಿ](https://etvbharatimages.akamaized.net/etvbharat/prod-images/kn-bng-03-transffer-ravikumar-script-7201951_31082020163803_3108f_1598872083_644.jpg)
ಇನ್ನು ಜಿ. ಕುಮಾರ್ ನಾಯಕ್ರನ್ನು ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಅವರು ವಾಣಿಜ್ಯ ಹಾಗೂ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಮುಂದುವರಿಯಲಿದ್ದಾರೆ.