ETV Bharat / state

ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ವರ್ಗಾವಣೆ : ಕೇಂದ್ರದ ಆದೇಶ ರದ್ದುಪಡಿಸಿದ ಹೈಕೋರ್ಟ್ - ಆರ್ ಆರ್ ಎಂ ಸಿ ಎಚ್

ಆರ್ ಆರ್ ಎಂ ಸಿ ಎಚ್ ಸಂಸ್ಥೆಯನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಯಿಂದ ಎಂಜಿಆರ್ ಶೈಕ್ಷಣಿಕ ಮತ್ತು ಸಂಶೋಧನಾ ಸಂಸ್ಥೆಗೆ ವರ್ಗಾಯಿಸಿದ ಕೇಂದ್ರ ಸರ್ಕಾರದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿತ್ತು. ಈ ಹಿನ್ನೆಲೆ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿ ತೀರ್ಪು ನೀಡಿದೆ.

Transfer of Rajarajeswari Medical College case
ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ವರ್ಗಾವಣೆ
author img

By

Published : Nov 10, 2020, 12:10 AM IST

ಬೆಂಗಳೂರು : ನಗರದ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ(ಆರ್ ಆರ್ ಎಂ ಸಿ ಎಚ್) ಯನ್ನು ಚೆನ್ನೈ ಮೂಲದ ಸ್ವಾಯತ್ತ ವಿವಿ ಡಾ. ಎಂಜಿಆರ್ ಶೈಕ್ಷಣಿಕ ಮತ್ತು ಸಂಶೋಧನಾ ಸಂಸ್ಥೆಗೆ ವರ್ಗಾಯಿಸಲು ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿ ತೀರ್ಪು ನೀಡಿದೆ.

ಆರ್ ಆರ್ ಎಂ ಸಿ ಎಚ್ ಸಂಸ್ಥೆಯನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಯಿಂದ ಎಂಜಿಆರ್ ಶೈಕ್ಷಣಿಕ ಮತ್ತು ಸಂಶೋಧನಾ ಸಂಸ್ಥೆಗೆ ವರ್ಗಾಯಿಸಿದ ಕೇಂದ್ರ ಸರ್ಕಾರದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಪೀಠ ಆರ್ ಆರ್ ಎಂ ಸಿ ಎಚ್ ಸಂಸ್ಥೆಯನ್ನು ಮತ್ತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ವ್ಯಾಪ್ತಿಗೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ.

ಪೀಠ ತನ್ನ ತೀರ್ಪಿನಲ್ಲಿ ಯುಜಿಸಿ ಶಿಫಾರಸು ಮೇರೆಗೆ ಕಾಲೇಜನ್ನು ಸ್ವಾಯತ್ತ ವಿವಿ ಜೊತೆಗೆ ಸೇರ್ಪಡೆಗೊಳಿಸುವ ವಿಚಾರವಾಗಿ ಕೇಂದ್ರ ಸರ್ಕಾರ ಆದೇಶ ಹೊರಡಿಸುವ ಮುನ್ನ ರಾಜ್ಯ ಸರ್ಕಾರದ ಆದೇಶವನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಕೇಂದ್ರ ಸರ್ಕಾರ 2019ರ ಫೆಬ್ರವರಿ 14ರಂದು ರಾಜರಾಜೇಶ್ವರಿ ವೈದ್ಯಕೀಯ ಕಾಲೇಜನ್ನು ಚೆನ್ನೈ ಮೂಲದ ಸ್ವಾಯತ್ತ ವಿವಿಗೆ ಹಸ್ತಾಂತರಿಸುವ ಆದೇಶ ಹೊರಡಿಸಿತ್ತು. ಇದಕ್ಕೂ ಮುನ್ನ ಕೇಂದ್ರದ ನಿರ್ಧಾರಕ್ಕೆ ರಾಜ್ಯ ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸಿತ್ತು.‌ ಅಲ್ಲದೆ ಕಾಲೇಜನ್ನು ತಮಿಳುನಾಡು ಮೂಲದ ವಿವಿಗೆ ಒಳಪಡಿಸಿದರೆ ರಾಜ್ಯದ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ ಎಂದು ಹೇಳಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.