ETV Bharat / state

ಹಿರಿಯ IAS ಅಧಿಕಾರಿಗಳ ವರ್ಗಾವಣೆ..ರಾಜ್ಯ ಸರ್ಕಾರದಿಂದ ಆದೇಶ

ಪೊಲೀಸ್​ ಇಲಾಖೆಯಲ್ಲಿ ನಡೆದ ವರ್ಗಾವಣೆ ಪರ್ವದ ನಂತರ, ಸಚಿವ ಸಂಪುಟ ರಚನೆ ಬೆನ್ನಲ್ಲೇ ರಾಜ್ಯ ಸರ್ಕಾರ ಪ್ರಮುಖ ಹಿರಿಯ ಐಎಎಸ್​ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶಿಸಿದೆ.

transfer-of-senior-ias-officers
ಐಎಎಸ್​ ಅಧಿಕಾರಿಗಳ ವರ್ಗಾವಣೆ
author img

By

Published : Aug 5, 2021, 7:10 PM IST

Updated : Aug 5, 2021, 7:28 PM IST

ಬೆಂಗಳೂರು: ನೂತನ ಸಚಿವ ಸಂಪುಟ ರಚನೆ‌ ಆಗುತ್ತಿದ್ದಂತೆಯೇ ರಾಜ್ಯದ ಪ್ರಮುಖ ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ರಮಣ ರೆಡ್ಡಿ:

ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ರಮಣ ರೆಡ್ಡಿಯವರನ್ನು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಇದರ ಜೊತೆಗೆ ಹೆಚ್ಚುವರಿಯಾಗಿ ಐಟಿಬಿಟಿ ಇಲಾಖೆಯ ಹೊಣೆಯನ್ನೂ ನೀಡಲಾಗಿದೆ.

ಮಂಜುನಾಥ್​ ಪ್ರಸಾದ್​:

ಮಂಜುನಾಥ್ ಪ್ರಸಾದ್​ರನ್ನು ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಅದರ ಜೊತೆಗೆ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹೆಚ್ಚುವರಿ ಜವಾಬ್ದಾರಿಯನ್ನೂ ನೀಡಲಾಗಿದೆ.

ರಾಜ್‌ಕುಮಾರ್ ಖತ್ರಿ:

ರಾಜ್‌ಕುಮಾರ್ ಖತ್ರಿಯವರನ್ನು ಕೃಷಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಟ್ರಾನ್ಸ್​ಫರ್​ ಮಾಡಲಾಗಿದೆ. ಜಾವೇದ್ ಅಖ್ತರ್ ಅವರನ್ನು ಅರಣ್ಯ ಮತ್ತು ಪರಿಸರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಇದರ ಜೊತೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಹೊಣೆ ಹೊರಲಿದ್ದಾರೆ.

ತುಷಾರ್ ಗಿರಿನಾಥ್:

ತುಷಾರ್ ಗಿರಿನಾಥ್​ರನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಇದರ ಜೊತೆಗೆ ವಿಪತ್ತು ನಿರ್ವಹಣೆ, ಭೂಮಿಯ ಹೆಚ್ಚುವರಿ ಹೊಣೆಯನ್ನು ನಿಭಾಯಿಸಲಿದ್ದಾರೆ.

Last Updated : Aug 5, 2021, 7:28 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.