ETV Bharat / state

'ವರ್ಗಾವಣೆ ಬೆದರಿಕೆಗೆ ಬಗ್ಗಲ್ಲ': ಹೈಕೋರ್ಟ್ ನ್ಯಾಯಮೂರ್ತಿ ಹೆಚ್‌.ಪಿ.ಸಂದೇಶ್ ದಿಟ್ಟ ನುಡಿ

author img

By

Published : Jul 5, 2022, 7:15 AM IST

ಲಂಚ ಪ್ರಕರಣದ ವಿಚಾರಣೆಯ ವೇಳೆ ನ್ಯಾಯಾಲಯದ ಸಭಾಂಗಣದಲ್ಲೇ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್ ಅವರು ತಮಗೆ ಪರೋಕ್ಷವಾಗಿ ವರ್ಗಾವಣೆ ಬೆದರಿಕೆ ಬಂದಿರುವ ಸಂಗತಿ ತಿಳಿಸಿ ಆಕ್ರೋಶ ವ್ಯಕ್ತಪಡಿಸಿದರು.

High Court Justice Sandesh
ಹೈಕೋರ್ಟ್ ನ್ಯಾಯಮೂರ್ತಿ ಸಂದೇಶ್

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ ಎಸಿಬಿಯು 'ಕಲೆಕ್ಷನ್ ಸೆಂಟರ್' ಆಗಿದೆ, ಎಸಿಬಿ ಭ್ರಷ್ಟಾಚಾರದ ಕೂಪವಾಗಿದೆ, ಅದರ ಮುಖ್ಯಸ್ಥರೇ ಕಳಂಕಿತ ವ್ಯಕ್ತಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದ ಹೈಕೋರ್ಟ್ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್ ಈಗ ವರ್ಗಾವಣೆ ಬೆದರಿಕೆಗೆ ಹೆದರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಹೈಕೋರ್ಟ್​ನಲ್ಲಿ ಸೋಮವಾರ ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಯ ವಿರುದ್ಧದ ಲಂಚ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯದ ಸಭಾಂಗಣದಲ್ಲೇ ತಮಗೆ ಪರೋಕ್ಷವಾಗಿ ವರ್ಗಾವಣೆ ಬೆದರಿಕೆ ಬಂದಿರುವ ವಿಚಾರ ತಿಳಿಸಿ ಆಕ್ರೋಶ ವ್ಯಕ್ತಪಡಿಸಿದರು. ಸಾರ್ವಜನಿಕರ ಹಿತದೃಷ್ಟಿಯಿಂದ ವರ್ಗಾವಣೆ ಬೆದರಿಕೆ ಎದುರಿಸಲು ಸಿದ್ಧವಿರುವುದಾಗಿ ಹೇಳಿದರು.

1. ಎಸಿಬಿ ಪರ ವಕೀಲರಿಗೆ ಪ್ರಶ್ನೆ: ಲಂಚ ಪ್ರಕರಣದ ವಿಚಾರಣೆ ಆರಂಭವಾಗುತ್ತಿದ್ದಂತೆ ಎಸಿಬಿ ಪರ ವಕೀಲ ಪಿ.ಎನ್‌.ಮನಮೋಹನ್‌ ಅವರು, ಎಸಿಬಿ ರಚನೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಭಾಗೀಯ ಪೀಠದ ಮುಂದಿದ್ದು ಈಗಾಗಲೇ ಆ ಪೀಠಕ್ಕೆ ವರದಿ ಸಲ್ಲಿಸಲಾಗಿದೆ ಎಂದರು. ಅದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪೀಠವು ವಿಭಾಗೀಯ ಪೀಠಕ್ಕೆ ವರದಿ ಸಲ್ಲಿಸಿದ ಮಾತ್ರಕ್ಕೆ ಇಲ್ಲಿ ವರದಿ ನೀಡಬಾರದು ಎಂದರ್ಥವೇ? ಕಳೆದ ವಿಚಾರಣೆ ವೇಳೆ ವರದಿ ಸಲ್ಲಿಸುವುದಾಗಿ ನೀವೇ ಭರವಸೆ ನೀಡಿದ್ದೀರಿ. ಇದೀಗ ಬಂದು ಬೇರೆ ರೀತಿ ಹೇಳುತ್ತಿದ್ದೀರಿ. ನೀವು ಏನನ್ನು ಮುಚ್ಚಿಡಲು ಪ್ರಯತ್ನಿಸುತ್ತಿದ್ದೀರಿ? ಎಂದು ವಕೀಲರನ್ನು ಪ್ರಶ್ನಿಸಿತು.

2. ವರ್ಗಾವಣೆ ಬೆದರಿಕೆ: ನ್ಯಾಯಾಲಯಕ್ಕೆ ಬೆದರಿಕೆ ಹಾಕುವ ಪರಿಸ್ಥಿತಿ ಉದ್ಭವಿಸಿದೆ. ಎಸಿಬಿ ಎಡಿಜಿಪಿ ಬಹಳ ಪವರ್‌ಫುಲ್‌ ಆಗಿದ್ದಾರಂತೆ, ಓರ್ವ ವ್ಯಕ್ತಿ ಈ ವಿಚಾರವನ್ನು ನನ್ನ ಸಹೋದ್ಯೋಗಿ ನ್ಯಾಯಮೂರ್ತಿಯೊಬ್ಬರಿಗೆ ಹೇಳಿದ್ದಾರಂತೆ. ಅದನ್ನು ಆಧರಿಸಿ ನನ್ನ ಸಹೋದ್ಯೋಗಿ ನ್ಯಾಯಮೂರ್ತಿಗಳೇ ನನಗೆ ವರ್ಗಾವಣೆಯ ಬೆದರಿಕೆಯಿದೆ ಎಂದು ತಿಳಿಸಿದರು ಎಂದು ನ್ಯಾಯಮೂರ್ತಿಗಳು ಕಲಾಪ ಸಮಯದಲ್ಲಿ ಪ್ರಸ್ತಾಪಿಸಿದರು. ಈ ವರ್ಗಾವಣೆ ಬೆದರಿಕೆಯ ಬಗ್ಗೆಯೂ ಆದೇಶದಲ್ಲಿ ಬರೆಯುತ್ತೇನೆ. ಯಾವುದೇ ರೀತಿಯ ಬೆದರಿಕೆ ಎದುರಿಸಲು ಸಿದ್ಧ. ಜನರ ಒಳಿತಿಗಾಗಿ ವರ್ಗಾವಣೆಯಾಗಲೂ ಸಿದ್ಧ. ಯಾರ ಬಗ್ಗೆಯೂ ನನಗೆ ಭಯವಿಲ್ಲ. ಬೆಕ್ಕಿಗೆ ಗಂಟೆ ಕಟ್ಟಲು ನಾನು ಸಿದ್ಧನಿದ್ದೇನೆ ಎಂದು ಗರಂ ಆದರು.

3. ಉಳುಮೆ ಮಾಡಿ ಬದುಕುತ್ತೇನೆ: ಹೈಕೋರ್ಟ್ ನ್ಯಾಯಮೂರ್ತಿಯಾದ ಮೇಲೆ ಒಂದಿಂಚೂ ಆಸ್ತಿ ಮಾಡಿಲ್ಲ. ನನ್ನ ಹುದ್ದೆ ಹೋದರೂ ಚಿಂತೆಯಿಲ್ಲ. ನಾನು ರೈತನ ಮಗ. ನನ್ನ ತಂದೆ ನನಗಾಗಿ ಮಾಡಿರುವ ಭೂಮಿ ಇದೆ. ಅದನ್ನು ಉಳುಮೆ ಮಾಡಿಕೊಂಡು ಬದುಕಲೂ ಸಿದ್ಧನಿದ್ದೇನೆ. ನನಗೆ 500 ರೂಪಾಯಿಯಲ್ಲಿ ಜೀವನ ನಡೆಸುವುದೂ ಗೊತ್ತು, 5,000 ರೂಪಾಯಿಯಲ್ಲಿ ಬದುಕುವುದಕ್ಕೂ ಗೊತ್ತು. ನಾನು ಯಾವುದೇ ರಾಜಕೀಯ ಪಕ್ಷಕ್ಕೂ ಸೇರಿಲ್ಲ. ಯಾವುದೇ ಪಕ್ಷದ ಸಿದ್ಧಾಂತಕ್ಕೂ ಬದ್ಧನಾಗಿಲ್ಲ. ಸಂವಿಧಾನಕ್ಕೆ ಮಾತ್ರ ನಾನು ಬದ್ಧವೆಂದರು.

4. ಎಸಿಬಿ ಪರ ವಕೀಲರಿಗೆ ಕ್ಲಾಸ್: ಬಿ ರಿಪೋರ್ಟ್‌ ಕುರಿತು ಮಾಹಿತಿ ಒದಗಿಸದ ಹಿನ್ನೆಲೆಯಲ್ಲಿ ಎಸಿಬಿ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡ ಪೀಠವು "ನೀವು ಸಾರ್ವಜನಿಕರನ್ನು ರಕ್ಷಿಸುತ್ತಿದ್ದೀರಾ ಅಥವಾ ಕಳಂಕಿತರನ್ನು ರಕ್ಷಿಸುತ್ತಿದ್ದೀರಾ? ಭ್ರಷ್ಟಾಚಾರ ಕ್ಯಾನ್ಸರ್‌ನಂತಾಗಿದೆ. ಅದನ್ನು ಮೊದಲ ಅಥವಾ ಎರಡನೇ ಹಂತದಲ್ಲಿರುವಾಗಲೇ ಗುಣಪಡಿಸಬೇಕು. 4ನೇ ಹಂತಕ್ಕೆ ಹೋಗಲು ಬಿಡಬಾರದು. ಆದರೆ, ಬೇಲಿಯೇ ಎದ್ದು ಹೊಲ ಮೇಯ್ದರೆ ನಾವೇನು ಮಾಡುವುದು?. ಭ್ರಷ್ಟಾಚಾರಿಗಳ ವಿರುದ್ಧ ಸರ್ಚ್ ವಾರೆಂಟ್ ಹೊರಡಿಸಿ, ನಂತರ ಅದನ್ನು ಮುಂದಿಟ್ಟುಕೊಂಡು ವಸೂಲಿ ಮಾಡಲಾಗುತ್ತದೆ. ಆದರೆ ಸರ್ಚ್ ವಾರೆಂಟ್ ಅನ್ನು ಕಾರ್ಯರೂಪಕ್ಕೆ ತರುವುದೇ ಇಲ್ಲ. ರೆಡ್ ಹ್ಯಾಂಡ್ ಆಗಿ ಸಿಕ್ಕಬಿದ್ದವರಿಗೂ ಬಿ ರಿಪೋರ್ಟ್ ಹಾಕಲಾಗಿದೆ. ದಾಳಿ ವೇಳೆ ಲಂಚದ ಹಣ ಸಿಕ್ಕ ಪ್ರಕರಣಗಳಲ್ಲೂ ವಿಚಾರಣೆ ನಡೆಸದೇ ಬಿ ರಿಪೋರ್ಟ್ ಹಾಕಲು ಹೇಗೆ ಸಾಧ್ಯ" ಎಂದು ಕೋರ್ಟ್ ಪ್ರಶ್ನಿಸಿತು.

5. ಅಡ್ವೊಕೇಟ್‌ ಜನರಲ್‌ ಮಧ್ಯಪ್ರವೇಶ: ಭ್ರಷ್ಟಾಚಾರ ಪ್ರಕರಣಗಳಲ್ಲಿ ಎಸಿಬಿ ಸಲ್ಲಿಸಿರುವ ಬಿ ರಿಪೋರ್ಟ್ ಬಗ್ಗೆ ಮಾಹಿತಿ ನೀಡಿಲ್ಲವೇಕೆ? ಮಾಹಿತಿ ನೀಡಲು ಏಕೆ ಹಿಂಜರಿಯುತ್ತಿದ್ದೀರಿ? ಎಸಿಬಿ ಎಡಿಜಿಪಿಯ ಸರ್ವೀಸ್ ರೆಕಾರ್ಡ್ ಏಕೆ ಹಾಜರುಪಡಿಸಿಲ್ಲ? ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ವ್ಯಕ್ತಿ ಗುತ್ತಿಗೆ ನೌಕರನಾಗಿದ್ದಾನೆ. ಆತನನ್ನು ಯಾರು ನೇಮಕ ಮಾಡಿದ್ದು ಎಂಬ ಬಗ್ಗೆ ವಿವರವನ್ನೇಕೆ ನೀಡಿಲ್ಲ? ಎಂದು ಸರ್ಕಾರವನ್ನು ಹೈಕೋರ್ಟ್ ಖಾರವಾಗಿ ಪ್ರಶ್ನಿಸಿತು. ಎಸಿಬಿ ಎಡಿಜಿಪಿ ಸರ್ವೀಸ್ ರೆಕಾರ್ಡ್ ಹಾಜರುಪಡಿಸಲು ಡಿಪಿಎಎಆರ್ ಕಾರ್ಯದರ್ಶಿ ಮಧ್ಯಾಹ್ನ 2.30ಕ್ಕೆ(ನಿನ್ನೆ) ಖುದ್ದು ಹಾಜರಾಗಬೇಕೆಂದು ನಿರ್ದೇಶಿಸಿತ್ತು.

6. ಅಡ್ವೊಕೇಟ್ ಜನರಲ್ ಹೇಳಿದ್ದಿಷ್ಟು..: ವರ್ಗಾವಣೆ ಬೆದರಿಕೆ ಬಗ್ಗೆ ಮಧ್ಯಾಹ್ನದ ಕಲಾಪದ ಆದೇಶದಲ್ಲಿ ಬರೆಯಲಾಗುತ್ತದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ತಿಳಿಸಿದ್ದರಿಂದ ಪ್ರಕರಣದ ಗಂಭೀರತೆ ಅರಿತ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು ಮಧ್ಯಾಹ್ನದ ಕಲಾಪದಲ್ಲಿ ಹಾಜರಾಗಿ ಎಸಿಬಿ ಬಿ ರಿಪೋರ್ಟ್ ಬಗ್ಗೆ ಎಲ್ಲ ಮಾಹಿತಿಗಳನ್ನು ನ್ಯಾಯಪೀಠಕ್ಕೆ ಒದಗಿಸಲಾಗುವುದೆಂದು ತಿಳಿಸಿದರು. ಎಸಿಬಿ ಎಡಿಜಿಪಿಯ ಬಗ್ಗೆ ಮಾಹಿತಿ ನೀಡಿ ಸಂಜೆಯೊಳಗೆ ಸರ್ವೀಸ್ ರೆಕಾರ್ಡ್ ನೀಡುವುದಾಗಿ ತಿಳಿಸಿದರು.

ಡಿಸಿ ಕಚೇರಿಯ ಗುತ್ತಿಗೆ ನೌಕರನ ನೇಮಕಾತಿಗೆ ಸಂಬಂಧಿಸಿದ ಮಾಹಿತಿ ಏನಿದೆ? ಇಲ್ಲಿ ಏನು ನಡೆಯುತ್ತಿದೆ ಅಡ್ವೊಕೇಟ್ ಜನರಲ್ ಅವರೇ. ದುಡ್ಡು ವಸೂಲಿ ಮಾಡಲು ಖಾಸಗಿ ವ್ಯಕ್ತಿಯನ್ನು ನೇಮಕ ಮಾಡಲಾಗಿದೆ. ಫೋನ್‌ನಲ್ಲಿ ನಡೆಸಿರುವ ಸಂಭಾಷಣೆ ಕೂಡಾ ರೆಕಾರ್ಡ್ ಆಗಿದೆ. ಜಿಲ್ಲಾಧಿಕಾರಿ ಒಪ್ಪಿಗೆ ಇಲ್ಲದೇ ಆತ 5 ಲಕ್ಷ ರೂಪಾಯಿ ಲಂಚ ಪಡೆಯಲು ಸಾಧ್ಯವೇ? ಎಂದು ಪ್ರಶ್ನಿಸಿತು.

7. ಸಂಪೂರ್ಣ ಮಾಹಿತಿ ಕೇಳಿದ ನ್ಯಾಯಾಲಯ: ಅಡ್ವೊಕೇಟ್‌ ಜನರಲ್‌ ಅವರು ಎಸಿಬಿಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನೂ ಒದಗಿಸುತ್ತೇವೆ. ಬಿ ವರದಿಗಳ ಕುರಿತ ಸಂಪೂರ್ಣ ಮಾಹಿತಿ ನೀಡುತ್ತೇವೆ. ನ್ಯಾಯಾಲಯದ ಆದೇಶವನ್ನು ಸರ್ಕಾರ ಚಾಚೂ ತಪ್ಪದೇ ಪಾಲಿಸಲಿದೆ. ನನ್ನ ಈ ಹೇಳಿಕೆಯನ್ನು ನ್ಯಾಯಾಲಯ ದಾಖಲಿಸಿಕೊಳ್ಳಬಹುದು ಎಂದು ಪೀಠಕ್ಕೆ ಭರವಸೆ ನೀಡಿದರು. ಅದನ್ನು ದಾಖಲಿಸಿಕೊಂಡ ಪೀಠವು ಎಸಿಬಿ ಆರಂಭವಾದಾಗಿನಿಂದ ಇಲ್ಲಿಯವರೆಗೆ ಸಲ್ಲಿಸಿರುವ ಬಿ ರಿಪೋರ್ಟ್‌ಗಳೆಷ್ಟು, ಎಷ್ಟು ವರದಿಗಳು ಅಂಗೀಕೃತಗೊಂಡಿವೆ ಎಂಬ ಮಾಹಿತಿಯನ್ನು ಜುಲೈ 7ರೊಳಗೆ ಸಲ್ಲಿಸಬೇಕು ಎಂದು ಎಸಿಬಿಗೆ ತಾಕೀತು ಮಾಡಿ ಹೈಕೋರ್ಟ್ ವಿಚಾರಣೆ ಮುಂದೂಡಿತು.

8. ಜುಲೈ 7ಕ್ಕೆ 2 ಕೇಸ್​ನ ವಿಚಾರಣೆ: ಜುಲೈ 7ಕ್ಕೆ ಈ ಅರ್ಜಿ ವಿಚಾರಣೆಯನ್ನು ಮುಂದೂಡಿದಾಗ ಸರ್ಕಾರಿ ವಕೀಲರು, ಪಿಎಸ್‌ಐ ಅಕ್ರಮ ನೇಮಕಾತಿಗೆ ಸಂಬಂಧಿಸಿದ ಪ್ರಕರಣವೂ ಅಂದೇ ವಿಚಾರಣೆಗೆ ನಿಗದಿಯಾಗಿದೆ ಎಂದು ನ್ಯಾಯಮೂರ್ತಿಗಳ ಗಮನಕ್ಕೆ ತಂದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ಎರಡೂ ಅರ್ಜಿಗಳು ಒಟ್ಟಿದೆ ವಿಚಾರಣೆಗೆ ಬರಲಿ ಬಿಡಿ. ಆ ಪ್ರಕರಣದಲ್ಲೂ ಒಎಂಆರ್ ಶೀಟ್ ಮತ್ತು ಎಫ್‌ಎಸ್‌ಎಲ್ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ. ಆ ವರದಿಗಳು ಸಲ್ಲಿಕೆಯಾಗಲಿ ಎಂದರು.

9. ಲಂಚ ಕೊಟ್ಟು ಮುಂದೆ ವಸೂಲಿ ಮಾಡುತ್ತಾರೆ: ಈ ಸಂದರ್ಭದಲ್ಲಿ ಸರ್ಕಾರಿ ವಕೀಲರು, ಪಿಎಸ್ಐ ನೇಮಕಾತಿ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಎಡಿಜಿಪಿ ಅಮೃತ್ ಪೌಲ್ ಅವರನ್ನು ಇಂದು ಬಂಧಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಆಗ ಪೀಠವು 545 ಪಿಐಎಸ್ ಹುದ್ದೆಗಳಲ್ಲಿ ಕನಿಷ್ಠ 400 ಹುದ್ದೆಗಳು ಮಾರಾಟವಾಗಿವೆ. ಇವರೆಲ್ಲ ಪಿಎಸ್‌ಐಗಳಾಗಿ ಏನು ಮಾಡುತ್ತಾರೆ. ಹಣ ಹೂಡಿಕೆ ಮಾಡಿ ಹುದ್ದೆ ಪಡೆದವರು ಮುಂದೆ ಆ ಹಣ ವಸೂಲಿ ಮಾಡಲು ಜನರ ರಕ್ತ ಹೀರುತ್ತಾರಷ್ಟೆ. ಇದೇ ಕಾರಣಕ್ಕೆ ಹೇಳುತ್ತಿದ್ದೇನೆ. ಭ್ರಷ್ಟಾಚಾರ ಕ್ಯಾನ್ಸರ್‌ನಂತೆ ಹರಡುತ್ತಿದೆ. ನಾಲ್ಕನೇ ಹಂತ ತಲುಪಲು ಬಿಡಬಾರದು ಎಂದು ನುಡಿದರು.

10. ಐಎಎಸ್ ಲಾಬಿ: ಐಎಎಸ್ ಅಧಿಕಾರಿಯ ಲಾಬಿ ಬಗ್ಗೆ ನಿದರ್ಶನವೊಂದನ್ನು ಪ್ರಸ್ತಾಪಿಸಿದ ನ್ಯಾಯಮೂರ್ತಿಗಳು, ಐಎಎಸ್ ಅಧಿಕಾರಿಯೊಬ್ಬರ ಮೇಲೆ ನಡೆಸಿದ ದಾಳಿಯಲ್ಲಿ ನಾಲ್ಕೂವರೆ ಕೋಟಿ ಹಣ ಮತ್ತು 6 ಕೆ.ಜಿ ಚಿನ್ನ ಸಿಕ್ಕಿರುತ್ತದೆ. ಆದರೆ, ಎಸಿಬಿ ಮಾತ್ರ ಆ ಪ್ರಕರಣದಲ್ಲಿ ಬಿ ರಿಪೋರ್ಟ್ ಹಾಕಿದೆ. ಬಿ ರಿಪೋರ್ಟ್ ಹಾಕಿದ್ದೇಕೆ ಎಂದು ಪ್ರಶ್ನಿಸಿದ ನ್ಯಾಯಾಧೀಶರನ್ನೇ ವರ್ಗಾಯಿಸಲಾಗಿದೆ. ಬೇರೆ ನ್ಯಾಯಾಧೀಶರು ಬಂದ ನಂತರ ಬಿ ರಿಪೋರ್ಟ್ ಅಂಗೀಕರಿಸಲಾಗಿದೆ. ಇದನ್ನೆಲ್ಲಾ ನೋಡಿ ಕಣ್ಮುಚ್ಚಿ ಕೂರುವುದಾದರೂ ಹೇಗೆ? ವರ್ಗಾವಣೆ ಬೆದರಿಕೆ ಬಗ್ಗೆ ಹೇಳಿದವರ ಹೆಸರನ್ನೂ ಬಹಿರಂಗಪಡಿಸುತ್ತೇನೆ ಎಂದರು.

ಇದನ್ನೂ ಓದಿ: ಕೊಡಗು: ನಿರಂತರ ಮಳೆಗೆ ಗುಡ್ಡ ಕುಸಿತ ..ಆತಂಕದಲ್ಲಿ ಜನ

ಎಸಿಬಿಯ ಹಾಲಿ ಎಡಿಜಿಪಿ ಬಂದ ನಂತರ ಎಷ್ಟು ಬಿ ರಿಪೋರ್ಟ್ ಸಲ್ಲಿಕೆಯಾಗಿದೆ ಎಂದು ಕೇಳಿದ ನ್ಯಾಯಮೂರ್ತಿಗಳು, ಐಎಎಸ್, ಐಪಿಎಸ್ ಲಾಬಿಗೆ ಸರ್ಕಾರ ಒಳಗಾಗುತ್ತಿದೆ. ರಾಜ್ಯಕ್ಕೆ ಅವಮಾನವಾಗುತ್ತಿದ್ದರೂ ಕಳಂಕಿತ ಡಿಸಿಯನ್ನು ರಕ್ಷಿಸಲಾಗುತ್ತಿದೆ. ರಾಜ್ಯದಲ್ಲಿ ಅಧಿಕಾರಿಗಳಿಗೆ ದರ್ಬಾರ್ ನಡೆಸಲು ಬಿಡಲಾಗಿದೆ. ಆ ಮೂಲಕ ಸರ್ಕಾರವೂ ಅಪರಾಧದ ಭಾಗವಾಗಿರುವಂತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.