ಬೆಂಗಳೂರು: ಐಎಎಸ್ ಅಧಿಕಾರಿ ಮಹೇಂದ್ರ ಜೈನ್ ಅವರನ್ನು ಕಂದಾಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಐಎಎಸ್ ಅಧಿಕಾರಿ ಮಹೇಶ್ವರ ರಾವ್ ಅವರು ಕೇಂದ್ರ ಸರ್ಕಾರದ ಸೇವೆಗೆ ತೆರಳಿರುವ ಕಾರಣ ಖಾಲಿಯಾದ ಸ್ಥಾನಕ್ಕೆ ಮಹೇಂದ್ರ ಜೈನ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಮಹೇಂದ್ರ ಜೈನ್, ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣ ಹಾಗೂ 2006-08ರ ಅವಧಿಯಲ್ಲಿ ಮೈಸೂರು ಮಿನರಲ್ಸ್ ವ್ಯಕವಸ್ಥಾಪಕ ನಿರ್ದೇಶಕರಾಗಿದ್ದ ಸಂದರ್ಭ ಅವರಿಂದ ಬೊಕ್ಕಸಕ್ಕೆ 300 ಕೋಟಿ ನಷ್ಟ ಉಂಟಾಗಿದೆ ಎಂಬ ಆರೋಪ ಎದುರಿಸಿದ್ದರು.
ಇದನ್ನೂ ಓದಿ: ಐಎಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ