ಬೆಂಗಳೂರು: ಐಎಎಸ್ ಅಧಿಕಾರಿಗಳಿಬ್ಬರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯ (ಇ-ಗವರ್ನನ್ಸ್) ನಿರ್ದೇಶಕರಾಗಿದ್ದ ಶಿಲ್ಪಾ ನಾಗ್ ಸಿ.ಟಿ. ಅವರನ್ನು ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಮೈಸೂರು ಪ್ರಾದೇಶಿಕ ಆಯುಕ್ತರಾಗಿದ್ದ ಗಾಯತ್ರಿ ಕೆ.ಎಂ. ಅವರನ್ನು ಅಬ್ದುಲ್ ನಜೀರ ಸಾಬ್ ಗ್ರಾಮೀಣಾಭಿವೃದ್ಧಿ ಕೇಂದ್ರದ ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.