ಬೆಂಗಳೂರು: ರಾಜಧಾನಿಯಲ್ಲಿ ಕೋವಿಡ್ ಸೋಂಕು ಪ್ರಕರಣಗಳು ದಿನೇ ದಿನೇ ಏರುಗತಿಯಲ್ಲಿ ಸಾಗುತ್ತಿರುವ ಬೆನ್ನಲ್ಲೇ, ಕೋವಿಡ್ ಚಿಕಿತ್ಸೆಗಾಗಿ ಕೆಲ ಖಾಸಗಿ ಆಸ್ಪತ್ರೆಗಳನ್ನು ಪೂರ್ಣಪ್ರಮಾಣದಲ್ಲಿ ಸಜ್ಜುಗೊಳಿಸಲು ಸರ್ಕಾರ ಮುಂದಾಗಿದೆ.
ಕೋವಿಡ್ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆ ವ್ಯವಸ್ಥೆ ಕಲ್ಪಿಸಲು ಎಲ್ಲಾ ವಿಧದ ಸೌಕರ್ಯಗಳನ್ನು ಮಾಡಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಖಾಸಗಿ ಆಸ್ಪತ್ರೆ ಹಾಗೂ ನರ್ಸಿಂಗ್ ಹೋಮ್ಸ್ ಅಸೋಸಿಯೇಷನ್ (ಫಾನಾ ) ಜತೆಗೆ ಸಭೆ ನಡೆಸಿದ್ದಾರೆ.
ಸದ್ಯ ಮೀಸಲಿಟ್ಟಿರುವ ಹಾಸಿಗೆಗಳ ವಿವರ ಪಡೆದಿರುವ ಸಚಿವರು, ಒಂದು ವೇಳೆ ಬೆಂಗಳೂರಿನಲ್ಲಿ ಪರಿಸ್ಥಿತಿ ಕೈಮೀರಿ ಹೋದರೆ ಪಟ್ಟಿ ಮಾಡಿರುವ ಆಸ್ಪತ್ರೆಗಳನ್ನು ಸಂಪೂರ್ಣ ಕೋವಿಡ್ ಆಸ್ಪತ್ರೆಯಾಗಿ ಮಾರ್ಪಾಡು ಮಾಡಿ ಚಿಕಿತ್ಸೆ ನೀಡಲು ಎಲ್ಲ ಸಿದ್ಧತೆ ನಡೆದಿದೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿಯಲ್ಲಿ ಸುಮಾರು 118 ಆಸ್ಪತ್ರೆಗಳನ್ನು ಈಗಾಗಲೇ ಗುರುತಿಸಿದ್ದು ಕೋವಿಡ್ ಚಿಕಿತ್ಸೆಗಾಗಿ ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ.