ಬೆಂಗಳೂರು: ರಾಜ್ಯದಲ್ಲಿ ಮತ್ತೊಮ್ಮೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿ ಮುಷ್ಕರ ನಡೆಸಲು ಸಜ್ಜಾಗಿದ್ದಾರೆ. ಏಪ್ರಿಲ್ 07 ರಿಂದ ಮುಷ್ಕರ ನಡೆಸುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ) 4 ರಸ್ತೆ ಸಾರಿಗೆ ನಿಗಮಗಳಿಗೆ ಮತ್ತು ಸರ್ಕಾರಕ್ಕೆ ನೋಟಿಸ್ ನೀಡಿದೆ.
ಈ ಹಿನ್ನೆಲೆ ರಾಜ್ಯದಾದ್ಯಂತ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಸಾರಿಗೆ ಸೌಲಭ್ಯವನ್ನು ಒದಗಿಸಲು ಕರ್ನಾಟಕ ಸರ್ಕಾರ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಸಾರಿಗೆ ಇಲಾಖೆ ಮತ್ತು ಸಾರಿಗೆ ನಿಗಮಗಳ ವತಿಯಿಂದ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಂಡು ಸುಗಮ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ಸರ್ಕಾರ ದೃಢ ನಿಲುವನ್ನು ತೆಗೆದುಕೊಂಡಿದೆ ಎಂದು ಸಾರಿಗೆ ಇಲಾಖೆ ಆಯುಕ್ತರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಮೊದಲು ಉಪ ಚುನಾವಣೆಯಲ್ಲಿ ತಾಕತ್ತು ತೋರಿಸಿ : ಕಾಂಗ್ರೆಸ್ ಕಾಲೆಳೆದ ಬಿಜೆಪಿ
ಮುಷ್ಕರದ ಅವಧಿಯಲ್ಲಿ ಪ್ರಯಾಣಿಕರಿಗೆ ತೊಂದರೆಯಾಗದಂತೆ ಸಾರಿಗೆ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಒಪ್ಪಂದ ವಾಹನಗಳು (Contract Carriages), ಮ್ಯಾಕ್ಸಿ ಕ್ಯಾಬ್ಗಳು/ಮಿನಿ ಬಸ್‌ಗಳಿಗೆ ತಾತ್ಕಾಲಿಕ ರಹದಾರಿ ನೀಡಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ನಿರ್ಧರಿಸಲಾಗಿದೆ. ಹಾಗಾಗಿ ಆಸಕ್ತ ಮಿನಿ ಬಸ್, ಮ್ಯಾಕ್ಸಿ ಕ್ಯಾಬ್, ಬಸ್ ಮಾಲೀಕರು ಸಂಬಂಧಪಟ್ಟ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿಯವರನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸುವಂತೆ ಕೋರಿದ್ದಾರೆ.