ETV Bharat / state

ಸಾರಿಗೆ ಸಿಬ್ಬಂದಿ ಕೆಲಸದಿಂದ ವಂಚಿತರಾಗದಂತೆ ರೊಟೇಷನ್​ ಆಧಾರದಲ್ಲಿ ನಿಯೋಜನೆ: ಸಚಿವ ಸವದಿ - ಬೆಂಗಳೂರು ಸಾರಿಗೆ

ಸಾರಿಗೆ ಸಿಬ್ಬಂದಿ ಕೊರೊನಾ ಭಯದ ಈ ದಿನಗಳಲ್ಲಿಯೂ ಸಹ ಅತ್ಯಂತ ಕಾಳಜಿಯಿಂದ ಮತ್ತು ದಿಟ್ಟತನದಿಂದ ತಮ್ಮ ಸೇವೆಸಲ್ಲಿಸುತ್ತಿರುವುದನ್ನು ಗಮನಿಸಿ 55 ವರ್ಷ ಮೇಲ್ಪಟ್ಟ ಸಿಬ್ಬಂದಿಗೆ ಅವರ ಆರೋಗ್ಯದ ಆಧಾರದ ಮೇಲೆ ಉದಾರವಾಗಿ ರಜೆ ಮಂಜೂರು ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Transport personnel to work deprivation based on rotation: Minister Sawadi
ಸಾರಿಗೆ ಸಿಬ್ಬಂದಿ ಕೆಲಸದಿಂದ ವಂಚಿತರಾಗದಂತೆ ರೊಟೇಷನ್​ ಆಧಾರದಲ್ಲಿ ನಿಯೋಜನೆ: ಸಚಿವ ಸವದಿ
author img

By

Published : Jun 26, 2020, 8:38 PM IST

ಬೆಂಗಳೂರು: ಕೊರೊನಾ ಭಯದ ಹಿನ್ನೆಲೆ ಪ್ರಯಾಣಿಕರ ಸಂಖ್ಯೆ ತೀವ್ರ ಇಳಿಮುಖವಾಗಿರುವ ಕಾರಣದಿಂದ ಸಾರಿಗೆ ಸಂಸ್ಥೆಯ ಆದಾಯದಲ್ಲಿ ತೀವ್ರ ಕುಸಿತ ಉಂಟಾಗುತ್ತಿದೆ.

ಆದ್ದರಿಂದ ಮುಂದಿನ ದಿನಗಳಲ್ಲಿ ಸಾರಿಗೆ ಸಂಸ್ಥೆಗಳಲ್ಲಿ ಸಿಬ್ಬಂದಿಗೆ ಯಾವುದೇ ಅನಾನುಕೂಲತೆ ಆಗದ ರೀತಿಯಲ್ಲಿ ಅನಗತ್ಯ ವೆಚ್ಚಗಳನ್ನು ಕಡಿಮೆಗೊಳಿಸುವ ಸಂಬಂಧ ಹಲವಾರು ಆಡಳಿತಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

ಬಿಎಂಟಿಸಿ, ಕೆಎಸ್ಆರ್​​​​ಟಿಸಿ ಈಶಾನ್ಯ ಸಾರಿಗೆ ಸಂಸ್ಥೆ ಮತ್ತು ವಾಯುವ್ಯ ಸಾರಿಗೆ ಸಂಸ್ಥೆಗಳಲ್ಲಿ ಈ ಬಗ್ಗೆ ಯಾವ ರೀತಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂಬುದನ್ನು ಚರ್ಚಿಸಲು ಏರ್ಪಡಿಸಲಾಗಿದ್ದ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ರೂಪುರೇಷೆ ಅಂತಿಮಗೊಳಿಸಲಾಗಿದೆ ಎಂದು ಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರಿಗೆ ಸಂಸ್ಥೆಗಳಲ್ಲಿ ಯಾರೊಬ್ಬರೂ ಕರ್ತವ್ಯದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಹಾಗೂ ಎಲ್ಲರಿಗೂ ಕರ್ತವ್ಯ ನಿರ್ವಹಿಸಲು ಅವಕಾಶ ನೀಡುವಂತಾಗಲು ರೊಟೇಷನ್ ಆಧಾರದಲ್ಲಿ ಸಿಬ್ಬಂದಿಯನ್ನು ಇದೇ ಮೊದಲ ಬಾರಿಗೆ ಕರ್ತವ್ಯಕ್ಕೆ ನಿಯೋಜಿಸಲಾಗುತ್ತಿದೆ ಎಂದರು.

ಹೋಂ ಗಾರ್ಡ್ಸ್ (ಗೃಹ ರಕ್ಷಕ) ಸಿಬ್ಬಂದಿ ಬದಲಿಗೆ ಸಾರಿಗೆ ಸಂಸ್ಥೆಗಳಲ್ಲಿ ಆಸಕ್ತಿ ಹೊಂದಿರುವಂತಹ ಸಿಬ್ಬಂದಿಯನ್ನು ಭದ್ರತಾ ರಕ್ಷಕ ಹುದ್ದೆಗಳಿಗೆ ಉಪಯೋಗಿಸಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಅಷ್ಟೇ ಅಲ್ಲದೆ, ಇದರಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಾಜಿ ಸೈನಿಕರುಗಳಿಗೆ ಪ್ರಥಮ ಆದ್ಯತೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಸಾರಿಗೆ ಸಿಬ್ಬಂದಿ ಕೊರೊನಾ ಭಯದ ಈ ದಿನಗಳಲ್ಲಿಯೂ ಸಹ ಅತ್ಯಂತ ಕಾಳಜಿಯಿಂದ ಮತ್ತು ದಿಟ್ಟತನದಿಂದ ತಮ್ಮ ಸೇವೆ ಸಲ್ಲಿಸುತ್ತಿರುವುದನ್ನು ಗಮನಿಸಿ 55 ವರ್ಷ ಮೇಲ್ಪಟ್ಟ ಸಿಬ್ಬಂದಿಗೆ ಅವರ ಆರೋಗ್ಯದ ಆಧಾರದ ಮೇಲೆ ಉದಾರವಾಗಿ ರಜೆ ಮಂಜೂರು ಮಾಡಲಾಗುವುದು.

ಅಷ್ಟೇ ಅಲ್ಲದೆ ಹೃದಯಬೇನೆ, ರಕ್ತದ ಒತ್ತಡಗಳಂತಹ ಕಾಯಿಲೆ ಇರುವರಿಗೆ ಅಗತ್ಯ ವಿಶ್ರಾಂತಿಗೆ ಅವಕಾಶ ಕಲ್ಪಿಸಲಾಗುವುದು. ಗರ್ಭಿಣಿ ಸಿಬ್ಬಂದಿಯನ್ನು ಲಘು ಕರ್ತವ್ಯದ ಮೇಲೆ ನಿಯೋಜಿಸಲು ಆದೇಶ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಅನಗತ್ಯವಾಗಿ ಹೆಚ್ಚುವರಿಯಾಗಿದ್ದ ಕೆಲವು ಹೊರಗುತ್ತಿಗೆ ಸಿಬ್ಬಂದಿಯನ್ನು ಕಡಿಮೆ ಮಾಡಲು ಆಡಳಿತಾತ್ಮಕ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಸಾರಿಗೆ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುವ ಸಿಬ್ಬಂದಿ ಆರೋಗ್ಯ ರಕ್ಷಣೆಗೂ ಪ್ರಥಮ ಆದ್ಯತೆ ನೀಡಲಾಗುತ್ತಿದ್ದು, ಯಾವುದೇ ಸಿಬ್ಬಂದಿಯಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದರೆ ಅವರ ಸಂಪೂರ್ಣ ಆರೈಕೆವರೆಗೆ ಎಲ್ಲ ಅಗತ್ಯ ಜವಾಬ್ದಾರಿಗಳ ಬಗ್ಗೆ ಸಾರಿಗೆ ಸಂಸ್ಥೆಯಿಂದ ಕ್ರಮ ವಹಿಸಲಾಗುತ್ತಿದೆ. ಅಷ್ಟೇ ಅಲ್ಲದೆ ಎಲ್ಲಾ ಸಾರಿಗೆ ಸಿಬ್ಬಂದಿಗೆ ಕೊರೊನಾ ಪರೀಕ್ಷೆಗಳನ್ನು ಘಟಕಗಳ ಮಟ್ಟದಲ್ಲಿಯೇ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಬಸ್ ಸಂಚಾರಗಳು ಮತ್ತು ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿರುವುದರಿಂದ ತಮಗೆ ಆದಾಯ ಕೂಡ ಇಳಿಮುಖವಾಗಿದೆ. ಆದ್ದರಿಂದ ಬಸ್ ನಿಲ್ದಾಣಗಳಲ್ಲಿ ಇರುವ ವಾಣಿಜ್ಯ ಮಳಿಗೆಗಳ ಬಾಡಿಗೆದಾರರು ಒಂದು ತಿಂಗಳ ಬಾಡಿಗೆಯನ್ನು ಶೇ. 50ರಷ್ಟು ರಿಯಾಯಿತಿ ದರದಲ್ಲಿ ನೀಡುವಂತೆ ಕೋರಿರುತ್ತಾರೆ. ಇದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಎಸ್ಎಸ್ಎಲ್​​ಸಿ ವಿದ್ಯಾರ್ಥಿಗಳಿಗೆ ಬಸ್ ಸೌಕರ್ಯ ಕಲ್ಪಿಸುವ ವ್ಯವಸ್ಥೆಯನ್ನು ನಮ್ಮ ಸಾರಿಗೆ ಸಂಸ್ಥೆಗಳಿಂದ ಮಾಡಲಾಗುತ್ತಿದೆ. ಈ ಬಗ್ಗೆ ಯಾವುದೇ ಕುಂದುಕೊರತೆಗಳಿದ್ದಲ್ಲಿ ಸಾರಿಗೆ ಸಂಸ್ಥೆಯ ಅಧಿಕಾರಿಗಳ ಗಮನಕ್ಕೆ ತರಬೇಕೆಂದು ಸಚಿವರು ಮನವಿ ಮಾಡಿದ್ದಾರೆ.

ನಮ್ಮ ಸಾರಿಗೆ ಸಂಸ್ಥೆಯ ಬಸ್​​​ಗಳಲ್ಲಿ ಸ್ಯಾನಿಟೈಸ್ ಸೇರಿದಂತೆ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿರುವುದರಿಂದ ಪ್ರಯಾಣಿಕರು ಯಾವುದೇ ಭಯ ಇಲ್ಲದೆ ಮುಕ್ತವಾಗಿ ಸಂಚರಿಸಬಹುದಾಗಿದೆ. ಈ ಬಗ್ಗೆ ಯಾರೂ ಅನಗತ್ಯವಾಗಿ ಭಯಪಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.