ETV Bharat / state

3ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ ; ಕುಟುಂಬ ಸಮೇತ ಉಪವಾಸ ಸತ್ಯಾಗ್ರಹ! - ಪ್ರತಿಭಟನೆ ಅಪ್​ಡೇಟ್ಸ್

ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ಇಂದು ಕರ್ತವ್ಯಕ್ಕೆ ಹಾಜರಾಗಲು ನೌಕರರಿಗೆ ಸರ್ಕಾರ ಡೆಡ್‌ಲೈನ್ ನೀಡಿದೆ. ಕರ್ತವ್ಯಕ್ಕೆ ಹಾಜರಾಗದಿದ್ರೆ ನೌಕರರ ಮುಷ್ಕರ ಹತ್ತಿಕ್ಕಲು ಸರ್ಕಾರ ಮುಂದಾಗಿದೆ. ನಾಳೆಯಿಂದ ಖಾಸಗಿ ವಾಹನಗಳು ರಸ್ತೆಗಿಳಿಯಲಿವೆ..

transport staff protest continued today
ಮೂರನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ; ಕರ್ತವ್ಯಕ್ಕೆ‌ ಹಾಜರಾಗಲು ಇಂದು ಡೆಡ್‌ಲೈನ್
author img

By

Published : Dec 13, 2020, 8:59 AM IST

ಬೆಂಗಳೂರು : ರಾಜ್ಯದಲ್ಲಿ ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನಡೆಯುತ್ತಿರುವ ಸಾರಿಗೆ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಮುಷ್ಕರ ತೀವ್ರಗೊಳಿಸಲು ನಿರ್ಧಾರ ಮಾಡಲಾಗಿದೆ. ಸರ್ಕಾರ ಮುಷ್ಕರಕ್ಕೆ ಮಣಿಯದ ಕಾರಣ ಸಾರಿಗೆ ನೌಕರರು ಕುಟುಂಬ ಸಮೇತ ಉಪವಾಸ ಸತ್ಯಾಗ್ರಹ ಮಾಡಲಿದ್ದಾರೆ.

ಮೂರನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ

ರಾಜ್ಯಾದ್ಯಂತ ಡಿಪೋ ಹಾಗೂ ಗಾಂಧಿ ಪ್ರತಿಮೆ ಮುಂದೆ ಉಪವಾಸ ಸತ್ಯಾಗ್ರಹ ಮಾಡಲಿದ್ದು, ಬೆಂಗಳೂರಿನಲ್ಲಿ ಮೌರ್ಯ ಸರ್ಕಲ್ ಬಳಿ ಸತ್ಯಾಗ್ರಹ ನಡೆಯಲಿದೆ. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಲಾಗಿದೆ.

ಈ ಸುದ್ದಿಯನ್ನೂ ಓದಿ: ಸಾರಿಗೆ ಸಿಬ್ಬಂದಿಯನ್ನ ಸರ್ಕಾರಿ ನೌಕರರನ್ನಾಗಿ ಮಾಡಲು ಇರುವ ತೊಡಕುಗಳೇನು?

ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ಇಂದು ಕರ್ತವ್ಯಕ್ಕೆ ಹಾಜರಾಗಲು ನೌಕರರಿಗೆ ಸರ್ಕಾರ ಡೆಡ್‌ಲೈನ್ ನೀಡಿದೆ. ಕರ್ತವ್ಯಕ್ಕೆ ಹಾಜರಾಗದಿದ್ರೆ ನೌಕರರ ಮುಷ್ಕರ ಹತ್ತಿಕ್ಕಲು ಸರ್ಕಾರ ಮುಂದಾಗಿದೆ. ನಾಳೆಯಿಂದ ಖಾಸಗಿ ವಾಹನಗಳು ರಸ್ತೆಗಿಳಿಯಲಿವೆ.

ನಾಳೆಯಿಂದ ಖಾಸಗಿ ಬಸ್, ಖಾಸಗಿ ಟ್ಯಾಕ್ಸಿಗಳನ್ನು ಓಡಿಸಲು ಚಿಂತನೆ ಮಾಡಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಖಾಸಗಿ ಬಸ್ ಮೂಲಕ ಕಾರ್ಯಾಚರಣೆ ಮಾಡಿಸಲು ಯೋಜಿಸಿದೆ. ಇಂದು ಖಾಸಗಿ ಬಸ್ ಮಾಲೀಕರು, ಖಾಸಗಿ ಟ್ಯಾಕ್ಸಿ ಮಾಲೀಕರ ಜೊತೆ ಮಾತುಕತೆ ನಡೆಯಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.