ಬೆಂಗಳೂರು : ಕೋವಿಡ್ ಸಾಂಕ್ರಾಮಿಕ ರೋಗದ 2ನೇ ಅಲೆಯ ತೀವ್ರತೆಯ ಹಿನ್ನೆಲೆ ಸಾರಿಗೆ ನಿಗಮಗಳು ನಷ್ಟದ ಸುಳಿಗೆ ಸಿಲುಕಿವೆ. ತಿಂಗಳ ಸಂಬಳಕ್ಕೂ ಸರ್ಕಾರದ ಅನುದಾನವನ್ನೇ ಅವಲಂಬಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಇದೀಗ ಸರ್ಕಾರ ಸಾರಿಗೆ ನೌಕರರ ಸಂಬಳಕ್ಕಾಗಿ 60.82 ಕೋಟಿ ಹಣ ಬಿಡುಗಡೆ ಮಾಡಿದೆ. ನೌಕರರ ಸಂಬಳ ಬಿಡುಗಡೆ ಮಾಡಿ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಸತ್ಯವತಿ ಆದೇಶಿಸಿದ್ದಾರೆ.
ಕೆಎಸ್ಆರ್ಟಿಸಿ, ವಾಯವ್ಯ, ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಗಳ ಸಿಬ್ಬಂದಿ ಜುಲೈ ತಿಂಗಳ ಶೇ.25 ರಷ್ಟು ಸಂಬಳಕ್ಕಾಗಿ ರೂ. 60.82 ಕೋಟಿ ಹಣವನ್ನು ಬಿಡುಗಡೆ ಮಾಡಿದೆ.
ಯಾವ್ಯಾವ ನಿಗಮಕ್ಕೆ ಎಷ್ಟು ಅನುದಾನ?
ಕೆಎಸ್ಆರ್ಟಿಸಿ- 27.74 ಕೋಟಿ
ವಾಯುವ್ಯ ಸಾರಿಗೆ - 17.48 ಕೋಟಿ
ಕಲ್ಯಾಣ ಕರ್ನಾಟಕ ಸಾರಿಗೆ- 15.61 ಕೋಟಿ ಹಣ ಬಿಡುಗಡೆ ಮಾಡಿದೆ.