ಬೆಂಗಳೂರು: ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ಮೂರು ದಿನಗಳ ಕಾಲ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದ್ದ ಸಾರಿಗೆ ನೌಕರರಲ್ಲಿ ಕೆಲವರು ಕರ್ತವ್ಯ ನಿರತ ಸಿಬ್ಬಂದಿಗಳ ಮೇಲೆ ದೈಹಿಕ ಹಲ್ಲೆ ಮಾಡಿ, ಬಸ್ಗಳನ್ನು ಜಖಂಗೊಳಿಸಿದ ಹಾಗೂ ಎಫ್ಐಆರ್ ದಾಖಲಾದ ಕೆಲವೇ ಸಿಬ್ಬಂದಿಗಳ ಮೇಲೆ ಮಾತ್ರ ನಿಯಮಾನುಸಾರ ಕ್ರಮಕೈಗೊಳ್ಳಲಾಗಿದೆ. ಇನ್ನಾವುದೆ ಸಿಬ್ಬಂದಿ ಮೇಲೆ ಕ್ರಮಕೈಗೊಂಡಿರುವುದಿಲ್ಲ ಅಂತ ನಿಗಮ ಸ್ಪಷ್ಟಪಡಿಸಿದೆ.
ಕೋಲಾರ ವಿಭಾಗದಲ್ಲಿ 200 ನೌಕರರ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂಬುದು ಸತ್ಯಕ್ಕೆ ದೂರವಾದದ್ದು. ಕೆಎಸ್ಆರ್ಟಿಸಿ ವ್ಯಾಪ್ತಿಯಲ್ಲಿ ಒಟ್ಟು 13 ಸಿಬ್ಬಂದಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಮುಷ್ಕರ ಸಮಯದಲ್ಲಿ ನಾಲ್ಕು ದಿನಗಳ ವೇತನ ಕಡಿತದ ಬಗ್ಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಮಂಡಳಿ ಅಥವಾ ಸರ್ಕಾರದ ಮಟ್ಟದಲ್ಲಿ ಇದರ ಬಗ್ಗೆ ಚರ್ಚಿಸಿ ಕ್ರಮ ತೆಗೆದು ಕೊಳ್ಳಲಾಗುವುದು ಅಂತ ನಿಗಮದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.