ಚಿತ್ರದುರ್ಗ: ಕೆಎಸ್‌ಆರ್‌ಟಿಸಿ ಕಾರ್ಮಿಕರ ಮುಷ್ಕರ ಹಿನ್ನೆಲೆ ತಮ್ಮ ನಿಗದಿತ ಸ್ಥಳಗಳಿಗೆ ಹೋಗಲಾಗದೆ ಪ್ರಯಾಣಿಕರು ಪರದಾಡುವಂತಾಗಿದೆ. ಸಂಜೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ನಡೆಸಬಹುದು ಎಂಬ ಲೆಕ್ಕಾಚಾರದಲ್ಲಿ ಬಸ್ ನಿಲ್ದಾಣಕ್ಕೆ ಬಂದ ಜನರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಹಾವೇರಿ, ಧಾರವಾಡ, ಬೆಳಗಾವಿ, ತುಮಕೂರು, ಬೆಂಗಳೂರು ಸೇರಿದಂತೆ ವಿವಿಧ ಭಾಗಗಳಿಗೆ ತೆರಳಲು ಕಳೆದ ಎರಡು ಗಂಟೆಯಿಂದ 50ಕ್ಕೂ ಅಧಿಕ ಪ್ರಯಾಣಿಕರು ಪರದಾಟ ನಡೆಸುತ್ತಿದ್ದಾರೆ. ಭಾನುವಾರದ ರಜೆ ಹಿನ್ನೆಲೆ ಬೆರಳೆಣಿಕೆಯಷ್ಟು ಖಾಸಗಿ ಬಸ್‌ಗಳು ಆಗಮಿಸುತ್ತಿವೆ.
LIVE UPDATE: ಕೊನೆಯ ಸುತ್ತಿನ ಮಾತುಕತೆ ಮುಗಿಸಿ, ಸಮಸ್ಯೆಗೆ ಕೊನೆ ಹಾಡುತ್ತೇವೆ - ಡಿಸಿಎಂ ಸವದಿ - ಸಾರಿಗೆ ಸಿಬ್ಬಂದಿ
17:12 December 13
ಸಾರಿಗೆ ಮುಷ್ಕರ: ಚಿತ್ರದುರ್ಗದಲ್ಲಿ ಪ್ರಯಾಣಿಕರ ಪರದಾಟ
16:52 December 13
ಕೂಡಲೇ ಮುಷ್ಕರ ಕೈಬಿಟ್ಟು, ಕರ್ತವ್ಯಕ್ಕೆ ಹಾಜರಾಗಿ: ಸಾರಿಗೆ ನೌಕರರಿಗೆ ಕಟೀಲ್ ಮನವಿ
ಬೆಂಗಳೂರು: ರಾಜ್ಯದಲ್ಲಿನ ಜನರು ಕೋವಿಡ್ ಸಂಕಷ್ಟವನ್ನು ಅನುಭವಿಸುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ನಾಲ್ಕು ಸಾರಿಗೆ ಸಂಸ್ಥೆಗಳ ನೌಕರರು ಮತ್ತು ಬಿಎಂಟಿಸಿ ನೌಕರರು ಮುಷ್ಕರವನ್ನು ಕೂಡಲೇ ಕೈಬಿಡಬೇಕು. ಸರ್ಕಾರದ ಮಾತುಕತೆ ಆಹ್ವಾನವನ್ನು ಮನ್ನಿಸಿ ಬೇಡಿಕೆಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮನವಿ ಮಾಡಿದ್ದಾರೆ.
ಈ ಕುರಿತು ಕಟೀಲ್ ಪತ್ರಿಕಾ ಹೇಳಿಕೆ ಹೊರಡಿಸಿರುವ ಕಟೀಲ್, ಮುಷ್ಕರದಿಂದ ಜನಸಾಮಾನ್ಯರಿಗೆ ತೀವ್ರ ಅನಾನುಕೂಲವಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಬಹುತೇಕ ಬೇಡಿಕೆಗಳನ್ನು ಮನ್ನಿಸಲು ಒಪ್ಪಿರುವುದನ್ನು ಗಮನಿಸಿ ಕೂಡಲೇ ಮುಷ್ಕರ ಕೈಬಿಟ್ಟು, ಕರ್ತವ್ಯಕ್ಕೆ ಹಾಜರಾಗಬೇಕು ಎಂದು ವಿನಂತಿಸಿದ್ದಾರೆ.
16:40 December 13
ಬಳ್ಳಾರಿ: ಸಾರಿಗೆ ನೌಕರರ ಮುಷ್ಕರದ ನಡುವೆಯೂ ಕೆಲಸಕ್ಕೆ ಹಾಜರಾದ ಸಿಬ್ಬಂದಿ
ಬಳ್ಳಾರಿ: ರಾಜ್ಯ ಸಾರಿಗೆ ನೌಕರರ ಮುಷ್ಕರದ ನಡುವೆಯೂ ಕೆಲಸಕ್ಕೆ ಹಾಜರಾಗಿದ್ದ ಸಿಬ್ಬಂದಿಯನ್ನ ಹೊರಗಡೆ ಎಳೆದ ಘಟನೆ ನಗರದ ಬಸ್ ನಿಲ್ದಾಣದಲ್ಲಿ ನಡೆದಿದೆ. ರಾಜ್ಯವ್ಯಾಪಿ ಸಾರಿಗೆ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿರುವ ಬೆನ್ನಲ್ಲೇ ಒಂದಿಷ್ಟು ಮಂದಿ ಸಾರಿಗೆ ನೌಕರರು ಕೆಲಸಕ್ಕೆ ಹಾಜರಾಗಿದ್ದರು. ಅದನ್ನು ಗಮನಿಸಿದ ಪ್ರತಿಭಟನಾನಿರತರು, ಸಾರಿಗೆ ನೌಕರರು ಕೆಲಸಕ್ಕೆ ಹಾಜರಾಗಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಎರಡು ಗುಂಪುಗಳ ನಡುವೆ ವಾಗ್ವಾದ ನಡೆಯಿತು. ಬಳಿಕ ಪೊಲೀಸರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.
16:40 December 13
ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಬಸ್ ನಿಲ್ದಾಣ ಖಾಲಿ ಖಾಲಿ
ಬಳ್ಳಾರಿ: ಜಿಲ್ಲೆಯ ಕಂಪ್ಲಿ ತಾಲೂಕಿನಲ್ಲಿ 3 ನೇ ದಿನ ಸಾರಿಗೆ ನೌಕರರ ಮುಷ್ಕರದಿಂದಾಗಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಸಂಪೂರ್ಣ ಖಾಲಿ ಖಾಲಿಯಾಗಿತ್ತು. ಕಂಪ್ಲಿ, ಹೊಸಪೇಟೆ, ಬಳ್ಳಾರಿ ನಗರದ ಇನ್ನಿತರೆ ಸುತ್ತಮುತ್ತಲಿನ ಹಳ್ಳಿಗಳಿಗೆ ಸಾರ್ವಜನಿಕರು ಟ್ಯಾಕ್ಸಿ, ಮಿನಿ ಆಟೋ, ಬೈಕ್ಗಳಲ್ಲಿ ಪ್ರಯಾಣ ಮಾಡುತ್ತಿದ್ದಾರೆ.
16:31 December 13
ಸಾರಿಗೆ ಸಚಿವರ ವಿರುದ್ಧ ಏಕವಚನದಲ್ಲಿ ಆಕ್ರೋಶ ಹೊರಹಾಕಿದ ಪ್ರತಿಭಟನಾನಿರತರು
ದೊಡ್ಡಬಳ್ಳಾಪುರ: ಸಾರಿಗೆ ಸಚಿವ ಲಕ್ಷಣ ಸವದಿ ವಿರುದ್ಧ ಏಕವಚನದಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾನಿರತರು, ನಾವು ಸತ್ತರೆ ಸರ್ಕಾರಿ ನೌಕರರಾಗಿ ಸಾಯುತ್ತೇವೆ. ಸರ್ಕಾರಿ ನೌಕರರನ್ನಾಗಿ ಮಾಡುವವರೆಗೂ ಉಪವಾಸ ಸತ್ಯಾಗ್ರಹ ಮಾಡುತ್ತೇವೆ. ಕುಟುಂಬದವರೊಂದಿಗೆ ಡಿಪೋ ಮುಂದೆ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದರು.
16:23 December 13
ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವುದು ಕಷ್ಟದ ಕೆಲಸ: ಬಸವರಾಜ ಹೊರಟ್ಟಿ
ಧಾರವಾಡ: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವುದು ಕಷ್ಟದ ಕೆಲಸ. ಆದರೆ ಸರ್ಕಾರದ ಎಲ್ಲ ಸೌಲಭ್ಯ ಕೊಡಬಹುದು. ನೌಕರರು ಬೇಡಿಕೆ ಇಟ್ಟು ರಸ್ತೆಗಿಳಿದು ಹೋರಾಟ ಮಾಡುತ್ತಿದ್ದಾರೆ. ಇದು ಸರ್ಕಾರದ ವೈಫಲ್ಯ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ.
16:10 December 13
ಗದಗದಲ್ಲಿ ಸಾರಿಗೆ ನೌಕರರ ಪ್ರತಿಭಟನೆ
ಗದಗ: ಗದಗದಲ್ಲೂ ಸಾರಿಗೆ ನೌಕರರು, ಕಾರ್ಮಿಕ ಸಂಘಟನೆಯ ಕಾರ್ಯಕರ್ತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟಿಸಿದರು. ಜಿಲ್ಲೆಯಲ್ಲಿ ಉಪವಾಸ ಸತ್ಯಾಗ್ರಹಕ್ಕೆ ಒಪ್ಪಿಗೆ ನೀಡಿಲ್ಲ. ಆದರೆ ನಾಳೆಯಿಂದ ಉಪವಾಸ ಸತ್ಯಾಗ್ರಹ ಮಾಡೇ ಮಾಡುತ್ತೇವೆ. ಬೇಡಿಕೆ ಈಡೇರುವವರೆಗೂ ಹೋರಾಟ ಹಿಂಪಡೆಯುವುದಿಲ್ಲ ಎಂದು ಪ್ರತಿಭಟನಾನಿರತರು ಹೇಳಿದರು.
16:05 December 13
ಹಾವೇರಿ ಜಿಲ್ಲೆಯಾದ್ಯಂತ ಸಾರಿಗೆ ನೌಕರರ ಮುಷ್ಕರ
ಹಾವೇರಿ ಜಿಲ್ಲೆಯಾದ್ಯಂತ ಸಾರಿಗೆ ನೌಕರರ ಮುಷ್ಕರ ಮುಂದುವರೆದಿದೆ. ಮೂರನೇಯ ದಿನವಾದ ಇಂದು ಸಹ ನೌಕರರು ಕರ್ತವ್ಯಕ್ಕೆ ಹಾಜರಾಗದೆ ಪ್ರತಿಭಟನೆ ನಡೆಸಿದರು. ಜಿಲ್ಲಾ ಕೇಂದ್ರ ಬಸ್ ನಿಲ್ದಾಣದಲ್ಲಿ ಗಾಂಧೀಜಿ ಭಾವಚಿತ್ರವಿಟ್ಟು ಪ್ರತಿಭಟನೆ ನಡೆಸಿದರು. ತಮ್ಮ ಹೋರಾಟಕ್ಕೆ ಬೆಂಬಲಿಸಿದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಸರ್ಕಾರ ಆದಷ್ಟು ಬೇಗ ನಮ್ಮ ಬೇಡಿಕೆ ಈಡೇರಿಸಲಿ ಎಂದು ಮನವಿ ಮಾಡಿದರು.
15:51 December 13
ಚಿತ್ರದುರ್ಗ: ಪೊಲೀಸರ ವಿರೋಧದ ನಡುವೆಯೂ ಕೆಎಸ್‌ಆರ್‌ಟಿಸಿ ನೌಕರರ ಪ್ರತಿಭಟನೆ
ಚಿತ್ರದುರ್ಗ: ಪೊಲೀಸರ ವಿರೋಧದ ನಡುವೆಯೂ ಕೆಎಸ್‌ಆರ್‌ಟಿಸಿ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ 100 ಕ್ಕೂ ಅಧಿಕ ಕೆಎಸ್‌ಆರ್‌ಟಿಸಿ ನೌಕರರು ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
15:46 December 13
ಸರ್ಕಾರ ತನ್ನ ಅಹಂ, ಪ್ರತಿಷ್ಠೆ ಬದಿಗಿಟ್ಟು ಸಾರಿಗೆ ನೌಕರರಿಗೆ ನ್ಯಾಯ ದೊರಕಿಸಲಿ: ನಜೀರಸಾಬ್ ಮೂಲಿಮನಿ
ಕುಷ್ಟಗಿ (ಕೊಪ್ಪಳ): ಸಾರಿಗೆ ಸಂಸ್ಥೆಯಲ್ಲಿ ಕೆಲಸ ಮಾಡುವ ನಿರ್ವಾಹಕರು, ಚಾಲಕರು ರೈತಾಪಿ ಮಕ್ಕಳು ಆಗಿರುವುದರಿಂದಲೇ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರು ಸಾರಿಗೆ ನೌಕರರ ಪ್ರತಿಭಟನೆ ನೇತೃತ್ವವಹಿಸಿದ್ದಾರೆ ಎಂದು ರೈತ ಸಂಘದ ಕೊಪ್ಪಳ ಜಿಲ್ಲಾಧ್ಯಕ್ಷ ನಜೀರಸಾಬ್ ಮೂಲಿಮನಿ ಹೇಳಿದರು.
ಕುಷ್ಟಗಿಯಲ್ಲಿ ಸಾರಿಗೆ ನೌಕರರ ಮೂರನೇ ದಿನದ ಪ್ರತಿಭಟನೆಗೆ ಬೆಂಬಲಿಸಿ ಮಾತನಾಡಿದ ಅವರು, ಕೋಡಿಹಳ್ಳಿ ಚಂದ್ರಶೇಖರ ಅವರ ಹೋರಾಟ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವವರೆಗೆ ನಿಲ್ಲದು. ಸರ್ಕಾರ ತನ್ನ ಅಹಂ, ಪ್ರತಿಷ್ಠೆ ಬದಿಗಿಟ್ಟು ಸಾರಿಗೆ ನೌಕರರಿಗೆ ನ್ಯಾಯ ದೊರಕಿಸಿಕೊಡಲಿ. ಸಾರ್ವಜನಿಕರಿಗೆ ಸಾರಿಗೆ ಸೇವೆಯಲ್ಲಿ ತೊಂದರೆ ಕೊಡಬೇಡಿ. ನೌಕರರ ಬೇಡಿಕೆ ಈಡೇರಿಸಿರಿ ಎಂದರು.
15:24 December 13
ಕೋಡಿಹಳ್ಳಿ ಬಣದ ಸಾರಿಗೆ ನೌಕರರ ಜೊತೆ ಡಿಸಿಎಂ ಸವದಿ ಸಭೆ
ಬೆಂಗಳೂರು: ಬನಶಂಕರಿ ಬಳಿ ಪ್ರತಿಭಟನೆ ಮಾಡುತ್ತಿರುವ ಮುಖಂಡರ ಜೊತೆ ವಿಕಾಸಸೌಧದಲ್ಲಿ ಡಿಸಿಎಂ ಸವದಿ ಸಭೆ ನಡೆಸುತ್ತಿದ್ದಾರೆ. ಸಿಎಂ ಭೇಟಿ ಬಳಿಕ ಡಿಸಿಎಂ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವ ಆರ್.ಅಶೋಕ್ ಸಮ್ಮುಖದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಜೊತೆ ಗುರುತಿಸಿಕೊಂಡಿದ್ದ ಸಾರಿಗೆ ಕಾರ್ಮಿಕ ಸಂಘಟನೆ ಮುಖಂಡರೊಂದಿಗೆ ಪ್ರತ್ಯೇಕ ಸಭೆ ನಡೆಸುತ್ತಿದ್ದಾರೆ.
ಬೆಳಗ್ಗೆ ಸಚಿವ ಆರ್.ಅಶೋಕ್ ಮತ್ತು ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಈ ಸಂಘಟನೆ ಮುಖಂಡರೊಂದಿಗೆ ಸಭೆ ನಡೆಸಿದ್ದರು. ಇದೀಗ ಪ್ರತಿಭಟನೆ ನೇತೃತ್ವವಹಿಸಿದ್ದ ಮುಖಂಡರನ್ನು ನಂದೀಶ್ ರೆಡ್ಡಿ ವಿಕಾಸಸೌಧಕ್ಕೆ ಕರೆತಂದಿದ್ದು, ಮೂವರು ಸಚಿವರ ಜೊತೆ ಡಿಸಿಎಂ ಸವದಿ ಅವರ ಕಚೇರಿಯಲ್ಲಿ ಸಭೆ ನಡೆಯುತ್ತಿದೆ.
15:14 December 13
ಚಿತ್ರದುರ್ಗ: ಪ್ರತಿಭಟನೆ ನಡೆಸಲು ಬಂದ ಸಾರಿಗೆ ನೌಕರರಿಗೆ ಪೊಲೀಸರಿಂದ ತಡೆ
ಚಿತ್ರದುರ್ಗ: ಪ್ರತಿಭಟನೆ ನಡೆಸಲು ಓಬ್ಬವ್ವ ವೃತ್ತಕ್ಕೆ ಬಂದಿದ್ದ ಸಾರಿಗೆ ನೌಕರರನ್ನ ಪೊಲೀಸರು ತಡೆದ ಘಟನೆ ಚಿತ್ರದುರ್ಗ ನಗರದಲ್ಲಿ ನಡೆದಿದೆ. ಪ್ರತಿಭಟನೆ ನಡೆಸಲು 150 ಕ್ಕೂ ಅಧಿಕ ಜನ ಜಿಲ್ಲಾಧಿಕಾರಿ ಕಚೇರಿಯತ್ತ ಬರುತ್ತಿದ್ದಂತೆ, ಜಿಲ್ಲಾಡಳಿತದ ಅನುಮತಿ ಪಡೆದುಕೊಂಡು ಪ್ರತಿಭಟನೆ ನಡೆಸುವಂತೆ ಕಾರ್ಮಿಕರಿಗೆ ಡಿವೈಎಸ್ಪಿ ಪಾಂಡುರಂಗ ತಿಳಿಸಿದರು. ಬಳಿಕ ಸಾರಿಗೆ ಸಿಬ್ಬಂದಿಗಳು ಶಾಂತಿಯುತವಾಗಿ ಹೋರಾಟ ಮಾಡುತ್ತೇವೆ, ಅನುಮತಿ ನೀಡಿ ಎಂದು ಮನವಿ ಮಾಡಿದರು.
15:07 December 13
‘ಸಾರಿಗೆ ನೌಕರರ ಬೇಡಿಕೆಗಳನ್ನು ಸರ್ಕಾರ ತಕ್ಷಣ ಪರಿಹರಿಸಬೇಕು’
ಬೆಂಗಳೂರು: ರಸ್ತೆ ಸಾರಿಗೆ ಸಂಸ್ಥೆಗೆ ನೌಕರರೇ ಜೀವಾಳ. ನಾವು ಅವರೊಂದಿಗೆ ನಿಲ್ಲುತ್ತೇವೆ. ಮುಷ್ಕರ ನಿರತ ನೌಕರರ ಮೇಲೆ ಸರ್ಕಾರವು ಯಾವುದೇ ಕ್ರಮ ಕೈಗೊಳ್ಳಬಾರದು. ತಕ್ಷಣವೇ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆಯ ವಿನಯ್ ಶ್ರೀನಿವಾಸ ತಿಳಿಸಿದ್ದಾರೆ.
14:25 December 13
‘ಸಾರಿಗೆ ನೌಕರರ ಕೆಲ ಬೇಡಿಕೆ ಈಡೇರಿಕೆಗೆ ಸಿಎಂ ಅಸ್ತು’
ಬೆಂಗಳೂರು: ಸಾರಿಗೆ ಮುಷ್ಕರ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಹೋರಾಟಗಾರರ ಕೆಲ ಬೇಡಿಕೆ ಈಡೇರಿಕೆಗೆ ನಿರ್ಧಾರ ಕೈಗೊಂಡು ಅಂತಿಮ ಸುತ್ತಿನ ಮಾತುಕತೆಗೆ ನಿರ್ಧರಿಸಲಾಗಿದೆ. ಅದರಂತೆ ಡಿಸಿಎಂ ಸವದಿ ನೇತೃತ್ವದಲ್ಲಿ ಸಚಿವರ ತಂಡ ವಿಕಾಸಸೌಧಕ್ಕೆ ತೆರಳಿದ್ದು, ಸದ್ಯದಲ್ಲೇ ಯೂನಿಯನ್ ಮುಖಂಡರ ಜೊತೆ ಕೊನೆ ಸುತ್ತಿನ ಮಾತುಕತೆಯನ್ನು ನಡೆಸಲಿದೆ.
ಸಿಎಂ ಜೊತೆಗಿನ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಲಕ್ಷ್ಮಣ ಸವದಿ, ನಮ್ಮ ಸಾರಿಗೆ ನೌಕರರ ಪ್ರಮುಖರನ್ನು ಕರೆದು ಎರಡು ಸುತ್ತಿನ ಮಾತುಕತೆಯನ್ನು ಮುಗಿಸಲಾಗಿದೆ. ಸರ್ಕಾರ ಕೂಡ ಕೆಲವೊಂದು ಬೇಡಿಕೆಗೆ ಸಹಮತ ಕೊಟ್ಟಿದೆ. ಸಿಬ್ಬಂದಿ ಸುಮಾರು 10 ಬೇಡಿಕೆಗಳನ್ನು ಕೇಳಿದ್ದರು. ಅದರಲ್ಲಿ ಈಡೇರಿಕೆ ಮಾಡುವ ಕುರಿತು ನಮ್ಮ ಹಣಕಾಸು ಇತಿಮಿತಿಯೊಳಗೆ ನಾವು ಕೂಡ ಒಂದು ಹೆಜ್ಜೆ ಮುಂದೆ ಹೋಗಿ, ಅವರು ಕೂಡ ಒಂದು ಹೆಜ್ಜೆ ಹಿಂದೆ ಸರಿದು ಎಲ್ಲಾ ಚರ್ಚೆ ಆಗಿದೆ. ಅದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಮನವರಿಕೆ ಮಾಡಿಕೊಡಲಾಗಿದೆ. ಸಿಎಂ ಒಪ್ಪಿಗೆ ಪಡೆದು ಕೊನೆಯ ಸುತ್ತಿನ ಮಾತುಕತೆ ನಡೆಸಿ ಅರ್ಧ ಗಂಟೆಯಲ್ಲಿ ಸಾರಿಗೆ ನೌಕರರ ಮುಷ್ಕರಕ್ಕೆ ಅಂತ್ಯವನ್ನು ಹಾಡುವ ನಿರ್ಣಯವನ್ನು ಮಾಡಿದ್ದೇವೆ. ಯೂನಿಯನ್ ಮುಖಂಡರ ಸಮಕ್ಷಮದಲ್ಲಿ ವಿಧಾನಸೌಧದಲ್ಲಿ ಪ್ರಕಟಣೆಯನ್ನು ಕೊಟ್ಟು ಇಂದು ಮುಷ್ಕರದ ಸಮಸ್ಯೆಯನ್ನು ಮುಗಿಸುವ ತೀರ್ಮಾನಕ್ಕೆ ನಾವೆಲ್ಲ ಬಂದಿದ್ದೇವೆ ಎಂದರು.
13:56 December 13
ಅರೆಬೆತ್ತಲೆಯಾಗಿ ತಲೆ ಮೇಲೆ ಇಟ್ಟಿಗೆ ಹೊತ್ತ ಸಿಬ್ಬಂದಿ:
ಬೆಳಗಾವಿ: ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸುತ್ತಿರುವ ಸಾರಿಗೆ ಸಿಬ್ಬಂದಿ ಅರೆಬೆತ್ತಲೆಯಾಗಿ ತಲೆ ಮೇಲೆ ಇಟ್ಟಿಗೆ ಹೊತ್ತುಕೊಂಡು ಊರುಳು ಸೇವೆ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.
ಕಳೆದ ಎರಡು ದಿನಗಳಿಂದ ವಿಭಿನ್ನವಾಗಿ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತಿರುವ ಸಾರಿಗೆ ನೌಕರರಿಗೆ ಇಂದು ಕುಟುಂಬಸ್ಥರು ಸಾಥ್ ನೀಡಿದ್ದಾರೆ. ಸಾರಿಗೆ ನೌಕರರು ತಲೆ ಮೇಲೆ ಇಟ್ಟಿಗೆ ಹೊತ್ತುಕೊಂಡು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
13:56 December 13
ಬಸ್ ಚಾಲಕನ ಪರದಾಟ:
ಬೆಳಗಾವಿ: ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಸ್ ಚಾಲಕರೊಬ್ಬರು ತಮ್ಮೂರಿಗೆ ತೆರಳಲು ಪರದಾಟ ನಡೆಸಿದ ಘಟನೆ ನಡೆದಿದೆ. ಇಲ್ಲಿನ ಗಾಂಧಿ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಹೂವಿನ ಮಾರುಕಟ್ಟೆ ಬಳಿ ಹಾಯ್ದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಚಾಲಕರೊಬ್ಬರು ಊರಿಗೆ ತೆರಳಲು ವಾಹನಗಳಿಲ್ಲದೆ ಪರದಾಡಿದರು. ಕಳೆದ ಎರಡು ದಿನಗಳಿಂದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಇವರು, ಕುಟುಂಬಸ್ಥರೊಬ್ಬರಿಗೆ ಆರೋಗ್ಯದಲ್ಲಿ ಸಮಸ್ಯೆ ಕಂಡುಬಂದ ಹಿನ್ನೆಲೆ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮನೆಗೆ ತೆರಳಲು ಮುಂದಾದರು. ಆದರೆ ಊರಿಗೆ ತೆರಳಲು ಬಸ್ ಇಲ್ಲ, ಜೊತೆಗೆ ಯಾವೊಂದು ವಾಹನವನ್ನು ಸಹ ನಿಲ್ಲಿಸುತ್ತಿಲ್ಲ.
12:59 December 13
ಮಹಾರಾಷ್ಟ್ರ, ಗೋವಾ ಪ್ರಯಾಣಿಕರ ಪರದಾಟ:
ಬೆಳಗಾವಿ: ಸಾರಿಗೆ ನೌಕರರ ಪ್ರತಿಭಟನೆ ಹಿನ್ನೆಲೆ ಮಹಾರಾಷ್ಟ್ರ ಮತ್ತು ಗೋವಾ ಸಾರಿಗೆ ಬಸ್‌ಗಳನ್ನು ಸ್ಥಗಿತಗೊಳಿಸಲಾಗಿದೆ. ಪರಿಣಾಮ ಹೊರ ರಾಜ್ಯಗಳಿಗೆ ತೆರಳಬೇಕಾದ ಪ್ರಯಾಣಿಕರು ಬಸ್ಗಳಿಲ್ಲದೆ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಪರದಾಡುತ್ತಿದ್ದಾರೆ. ದಿಢೀರ್ ಆಗಿ ಮಹಾರಾಷ್ಟ್ರ ಮತ್ತು ಗೋವಾ ಬಸ್ ಸಂಚಾರ ಸ್ಥಗಿತಗೊಳಿಸಿದ್ದರಿಂದ ಪ್ರಯಾಣಿಕರು ಸಿಕ್ಕ ಸಿಕ್ಕ ವಾಹನಗಳಲ್ಲಿ ಪ್ರಯಾಣಿಸುತ್ತಿದ್ದಾರೆ.
12:44 December 13
ಬಸ್‌ಗಾಗಿ ಕಾದು ಸುಸ್ತಾದ ಪ್ರಯಾಣಿಕರು:
ಚಿಕ್ಕೋಡಿ: ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಚಿಕ್ಕೋಡಿಯಲ್ಲಿ ಬಸ್ ಸಂಚಾರ ಸ್ತಬ್ಧವಾಗಿದೆ. ಬಸ್‌ಗಾಗಿ ಕಾದು ಸುಸ್ತಾದ ಪ್ರಯಾಣಿಕರು ಖಾಸಗಿ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಅಂತಾರಾಜ್ಯ ಬಸ್ ಸಂಚಾರ ಕೂಡ ಸ್ಥಗಿತಗೊಳಿಸಲಾಗಿದೆ. ಪ್ರತಿನಿತ್ಯ ಕೆಲಸಕ್ಕೆಂದು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ, ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಸರ್ಕಾರಿ ಅಧಿಕಾರಿಗಳು, ಕೂಲಿ ಕಾರ್ಮಿಕರು ಹಾಗೂ ಪ್ರಯಾಣಿಕರು ಪರದಾಡುವಂತಾಗಿದೆ. ಚಿಕ್ಕೋಡಿ ವಿಭಾಗದಲ್ಲಿ ಒಟ್ಟು 570 ಬಸ್‌ಗಳು ಪ್ರತಿನಿತ್ಯ ಸಂಚರಿಸುತ್ತಿದ್ದವು.
12:28 December 13
ಚಿಕ್ಕಮಗಳೂರು: ಸಾರಿಗೆ ನೌಕರರ ಮುಷ್ಕರಕ್ಕೆ ಚಿಕ್ಕಮಗಳೂರು ಕೆಎಸ್‌ಆರ್‌ಟಿಸಿ ಸಿಬ್ಬಂದಿ ಬೆಂಬಲ ನೀಡಿದ್ದಾರೆ. ಇಂದು ಬೆಳಗ್ಗೆಯಿಂದಲೇ ಯಾವುದೇ ಬಸ್‌ಗಳನ್ನು ರಸ್ತೆಗಿಳಿಸದೆ ಮುಷ್ಕರ ಮುಂದುವರೆಸಿದ್ದಾರೆ.
12:27 December 13
ಬಾಗಲಕೋಟೆಯಲ್ಲಿ ಬಸ್ ಸಂಚಾರ ಸ್ಥಗಿತ:
ಬಾಗಲಕೋಟೆ: ಜಿಲ್ಲೆಯಾದ್ಯಂತ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ತಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಕೈ ಬಿಡುವುದಿಲ್ಲ ಎಂದು ನೌಕರರು ಎಚ್ಚರಿಸಿದ್ದಾರೆ. ಕಳೆದ ಮೂರು ದಿನಗಳಿಂದ ಬಸ್ ಸಂಚಾರ ಸ್ಥಗಿತಗೊಂಡಿದ್ದು, ಬಸ್ ನಿಲ್ದಾಣ ಬಿಕೋ ಎನ್ನುತ್ತಿದೆ. ಪ್ರತಿಭಟನಾಕಾರರು ಬಸ್ ನಿಲ್ದಾಣದಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು.
12:26 December 13
ಮೈಸೂರಿನಲ್ಲಿ ಮುಂದುವರೆದ ಸಾರಿಗೆ ನೌಕರರ ಮುಷ್ಕರ:
ಮೈಸೂರು: ಗ್ರಾಮಾಂತರ ಹಾಗೂ ನಗರ ಸಾರಿಗೆ ಚಾಲಕ ಮತ್ತು ನಿರ್ವಾಹಕರು, ಕೆಲಸಕ್ಕೆ ಗೈರಾಗಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆ ಮೈಸೂರಿನ ಗ್ರಾಮಾಂತರ ಹಾಗೂ ನಗರ ಬಸ್ ಸಂಚಾರವನ್ನು ಶನಿವಾರದಿಂದ ಸ್ಥಗಿತಗೊಳಿಸಲಾಗಿದೆ. ಸಾರಿಗೆ ನೌಕರರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುವ ಮೂಲಕ ಮುಷ್ಕರ ಬೆಂಬಲ ನೀಡಿದ್ದಾರೆ. ಈ ವೇಳೆ ನಿನ್ನೆ ಹೃದಯಾಘಾತದಿಂದ ಮೃತಪಟ್ಟ ಚಾಲಕನಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
12:02 December 13
ಮುಷ್ಕರದ ನಡುವೆ ಬಸ್ ಸಂಚಾರ:
ದಾವಣಗೆರೆ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಾರಿಗೆ ನೌಕರರ ಮುಷ್ಕರ ಮುಂದುವರೆದಿದ್ದು, ಈ ಮಧ್ಯೆಯೇ ದಾವಣಗೆರೆ ಡಿಪೋ ಮೂಲಕ ಹರಿಹರಕ್ಕೆ ಬಸ್ ಬಿಡಲಾಯಿತು. ಕೆಎಸ್ಆರ್ಸಿ ನೌಕರರ ಮುಷ್ಕರದ ನಡುವೆ ಬಸ್ ಸಂಚಾರ ಆರಂಭವಾಗಿದ್ದು, ದಾವಣಗೆರೆಯ ಕೆಎಸ್‌ಆರ್‌ಟಿಸಿ ಬಸ್ ಡಿಪೋದಿಂದ ಅಧಿಕಾರಿಗಳ ಸಮ್ಮುಖದಲ್ಲಿ ಬಸ್ ಸಂಚಾರ ಆರಂಭಿಸಲಾಯಿತು. ದಾವಣಗೆರೆ-ಹರಿಹರಕ್ಕೆ ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚರಿಸುತ್ತಿದ್ದು, ಪ್ರತಿಭಟನಾನಿರತರು ಸಂಚಾರಕ್ಕೆ ಅಡೆತಡೆ ಮಾಡಬಹುದೆಂದು ಅಧಿಕಾರಿಗಳು ಕೂಡ ಬಸ್ನಲ್ಲಿ ಸಂಚಾರಿಸಿದರು.
12:02 December 13
ಊಟಕ್ಕಾಗಿ ಪರದಾಡುತ್ತಿರುವ ಸಾರಿಗೆ ಸಿಬ್ಬಂದಿ:
ಗದಗ : ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬೇರೆ ಜಿಲ್ಲೆಯ ಕೆಲ ಸಿಬ್ಬಂದಿ ಕಳೆದ ಮೂರು ದಿನಗಳಿಂದ ಗದಗದಲ್ಲೇ ಸಿಲುಕಿದ್ದು, ಪರದಾಡುತ್ತಿದ್ದಾರೆ. ಕಾರವಾರ, ಮಂಗಳೂರು, ಮೈಸೂರು ಸೇರಿದಂತೆ ಬೇರೆ ಬೇರೆ ಜಿಲ್ಲೆಯ ಡಿಪೋಗಳಿಂದ ನಗರಕ್ಕೆ ಬಂದಿರುವ ಚಾಲಕ, ನಿರ್ವಾಹಕರು ಕೇಂದ್ರ ನಿಲ್ದಾಣದ ವಸತಿ ಗೃಹದಲ್ಲಿ ವಾಸ್ತವ್ಯ ಮಾಡಿದ್ದಾರೆ. ನೌಕರರಿಗೆ ಸಮರ್ಪಕವಾಗಿ ಉಪಹಾರ, ಊಟ ಸಿಗದೆ ಪರದಾಡುತ್ತಿದ್ದಾರೆ. ಬಸ್ ನಿಲ್ದಾಣದಲ್ಲಿರುವ ಮಳಿಗೆಗಳು ಕಳೆದ ಮೂರು ದಿನಗಳಿಂದ ಮುಚ್ಚಿದ್ದು, ಹೊರ ಜಿಲ್ಲೆಗಳಿಂದ ಒಟ್ಟು 10 ಜನ ಮರಳಿ ತಮ್ಮ ಮೂಲ ಸ್ಥಳಗಳಿಗೆ ಹೋಗಲಾಗದೆ ಪರದಾಡುತ್ತಿದ್ದಾರೆ.
12:01 December 13
ಬನಶಂಕರಿ ಬಸ್ ನಿಲ್ದಾಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್:
ಬೆಂಗಳೂರು: ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆ ಬನಶಂಕರಿ ಬಸ್ ನಿಲ್ದಾಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಬಸ್ ನಿಲ್ದಾಣದ ಮುಂಭಾಗ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದೆ. ಒಂದು ವೇಳೆ ಪ್ರತಿಭಟನಾಕಾರರು ಬಸ್ ನಿಲ್ದಾಣದ ಒಳಗೆ ಬಂದರೆ ಅವರನ್ನು ತಡೆಯಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.
11:43 December 13
ಉಪವಾಸ ಸತ್ಯಾಗ್ರಹ ಆರಂಭ:
ಕಲಬುರಗಿ: ಕಲಬುರಗಿಯಲ್ಲಿ ಸಾರಿಗೆ ನೌಕರರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಕೇಂದ್ರ ಬಸ್ ನಿಲ್ದಾಣದಲ್ಲಿ ಗಾಂಧಿ, ಅಂಬೇಡ್ಕರ್ ಫೋಟೋ ಇಟ್ಟುಕೊಂಡು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ನೂರಾರು ಸಾರಿಗೆ ನೌಕರರು ಈ ಸತ್ಯಾಗ್ರಹದಲ್ಲಿ ಭಾಗಿಯಾಗಿದ್ದು, ಬೇಡಿಕೆ ಈಡೇರಿಸುವ ವರೆಗೆ ಮುಷ್ಕರ ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
11:42 December 13
ಬಸ್ ಸಂಚಾರ ಸಂಪೂರ್ಣ ಸ್ಥಗಿತ:
ಬಳ್ಳಾರಿ: ರಾಜ್ಯ ಸಾರಿಗೆ ನೌಕರರು ಕರೆ ನೀಡಿದ್ದ ಮುಷ್ಕರಕ್ಕೆ ಗಣಿನಾಡು ಬಳ್ಳಾರಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಳ್ಳಾರಿಯ ಹೊಸ ಹಾಗೂ ನಗರ ಸಾರಿಗೆ ಬಸ್ ನಿಲ್ದಾಣ ಸಂಪೂರ್ಣ ಸ್ತಬ್ಧವಾಗಿದೆ. ಖಾಸಗಿ ವಾಹನಗಳತ್ತ ಪ್ರಯಾಣಿಕರು ಮುಖ ಮಾಡುತ್ತಿದ್ದಾರೆ.
11:42 December 13
ಸಾರಿಗೆ ನೌಕರರ ಮುಷ್ಕರಕ್ಕೆ ಕುಟುಂಬಸ್ಥರ ಸಾಥ್:
ಬೆಳಗಾವಿ: ಕಳೆದ ಎರಡು ದಿನಗಳಿಂದ ಸಾರಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆಗೆ ಕುಟುಂಬಸ್ಥರು ಸಾಥ್ ನೀಡಿದ್ದಾರೆ. ತಮ್ಮ ಮಕ್ಕಳನ್ನು ಭುಜದ ಮೇಲೆ ಕೂರಿಸಿಕೊಂಡು ವಿಭಿನ್ನವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಪೊಲೀಸರ ಎಚ್ಚರಿಕೆಗೆ ಕ್ಯಾರೇ ಎನ್ನದ ಸಿಬ್ಬಂದಿ ಕುಟುಂಬ ಸಮೇತರಾಗಿ ಬಸ್ ನಿಲ್ದಾಣಕ್ಕೆ ಆಗಮಿಸಿ, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಮ್ಮ ನೋವನ್ನು ಸರ್ಕಾರ ಕೇಳುತ್ತಿಲ್ಲ, ನಮ್ಮ ಬೇಡಿಕೆಗೆ ಸರ್ಕಾರ ಸ್ಪಂದಿಸಬೇಕು. ಖಾಸಗಿ ಬಸ್‌ಗಳನ್ನು ಓಡಿಸಿದ್ರೆ ಬಸ್ ಚಕ್ರಕ್ಕೆ ತಲೆಕೊಡಲು ಸಿದ್ಧವಾಗಿದ್ದೇವೆ. ಕುಟುಂಬ ಸಮೇತರಾಗಿ ಎಲ್ಲದಕ್ಕೂ ತಯಾರಾಗಿಯೇ ಪ್ರತಿಭಟನೆಗೆ ಬಂದಿದ್ದೇವೆ ಎಂದು ಎಚ್ಚರಿಕೆ ನೀಡಿದರು.
11:42 December 13
ಡಿಸಿಎಂ ಸವದಿ ನೇತೃತ್ವದಲ್ಲಿ ಮಹತ್ವದ ಸಭೆ ಆರಂಭ
ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ವಿಕಾಸಸೌಧದಲ್ಲಿ ಸಾರಿಗೆ ಸಚಿವ ಸವದಿ ನೇತೃತ್ವದಲ್ಲಿ ಮಹತ್ವದ ಸಭೆ ಆರಂಭವಾಗಿದೆ.
ಸಭೆಯಲ್ಲಿ ಸಿಐಟಿಯು, ಎಐಟಿಸಿ, ನೌಕರರ ಮಹಾ ಮಂಡಳಿ, ಬಿಎಂಎಸ್ ಪ್ರತಿನಿಧಿಗಳು, ನಾಲ್ಕು ಸಾರಿಗೆ ನಿಗಮಗಳ ಎಂಡಿಗಳು ಭಾಗವಹಿಸಿದ್ದಾರೆ.
ಲಾಕ್‌ಡೌನ್ ಹಿನ್ನೆಲೆ ಸರ್ಕಾರ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಈ ಸಂದರ್ಭ ಸಾರಿಗೆ ನೌಕರರನ್ನು ಸರ್ಕಾರಿ ಉದ್ಯೋಗಿಗಳನ್ನಾಗಿ ಮಾಡಲು ಅಸಾಧ್ಯ. ಇದರಿಂದ ಸರ್ಕಾರದ ಮೇಲೆ ಭಾರೀ ಹೊರೆ ಬೀಳಲಿದೆ. ಹಾಗಾಗಿ ಅವರ ಪ್ರಮುಖ ಬೇಡಿಕೆಯಾದ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವುದು ಸಾಧ್ಯವಿಲ್ಲ ಎಂಬುದನ್ನು ನೌಕರರ ಒಕ್ಕೂಟಕ್ಕೆ ಮನವರಿಕೆ ಮಾಡುತ್ತಿದ್ದಾರೆ.
ಕೋವಿಡ್ ಕರ್ತವ್ಯ ವೇಳೆ ಮೃತಪಟ್ಟ ಸಾರಿಗೆ ನೌಕರರಿಗೆ 30 ಲಕ್ಷ ರೂ. ಪರಿಹಾರ ನೀಡುವ ಬೇಡಿಕೆಯನ್ನು ಪರಿಗಣಿಸಬಹುದು. ಉಳಿದಂತೆ ನೌಕರರ ಇತರೆ ಸಮಸ್ಯೆಗಳನ್ನು ಪರಿಹರಿಸುವ ಕೆಲಸ ಮಾಡುತ್ತೇವೆ ಎಂದು ಸಾರಿಗೆ ನೌಕರರ ಸಂಘಟನೆಗಳಿಗೆ ಮನವರಿಕೆ ಮಾಡಲು ಯತ್ನಿಸುತ್ತಿದ್ದಾರೆ.
11:05 December 13
9 ಮಂದಿ ಪ್ರತಿಭಟನಾನಿರತರ ಬಂಧನ:
ಬೆಂಗಳೂರು: ಬಿಎಂಟಿಸಿ ಬಸ್ ಸಂಚಾರಕ್ಕೆ ಮುಂದಾಗಿದ್ದ ನೌಕರರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿಯನ್ನು ಇಂದು ಅರೆಸ್ಟ್ ಮಾಡಲಾಗಿದೆ.
ನಿನ್ನೆ ಮೆಜೆಸ್ಟಿಕ್ ಬಳಿ ಬಸ್ ಓಡಿಸಲು ಮುಂದಾಗಿದ್ದ ಚಾಲಕನ ಮೇಲೆ ಹಲ್ಲೆ ನಡೆಸಲಾಗಿತ್ತು. ಈ ಕುರಿತು ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ಹಲ್ಲೆ ಹಾಗೂ ಬೆದರಿಕೆ ಹಾಕಿದ ಆರೋಪದಡಿ 9 ಜನರ ಮೇಲೆ ಕೇಸ್ ದಾಖಲಾಗಿದೆ.
10:58 December 13
ಪ್ರಯಾಣಿಕರನ್ನು ಹೊರದಬ್ಬಿದ ಸಿಬ್ಬಂದಿ:
ಕಲಬುರಗಿ: ಬಸ್ ಬರಬಹುದೆಂದು ಕಾದು ಕುಳಿತಿದ್ದ ಪ್ರಯಾಣಿಕರನ್ನು ಸಾರಿಗೆ ಇಲಾಖೆ ಸಿಬ್ಬಂದಿ ಒತ್ತಾಯಪೂರ್ವಕವಾಗಿ ಹೊರದಬ್ಬಿದ ಘಟನೆ ಕಲಬುರಗಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ.
ಸುಮ್ಮನೆ ಕುಳಿತಿದ್ದ ಪ್ರಯಾಣಿಕರನ್ನು ಎದ್ದು ಹೋಗುವಂತೆ ಹೇಳಿ, ಸಾರಿಗೆ ಸಿಬ್ಬಂದಿ ಹಲ್ಲೆ ಮಾಡಿದ್ದಾರೆಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಸ್ ಬರೋದಿಲ್ಲ, ಎದ್ದು ನಡೆಯಿರಿ ಎಂದು ಸಿಬ್ಬಂದಿ ಗಡಸು ಧ್ವನಿಯಲ್ಲಿ ಮಾತನಾಡಿ ಹೊರದಬ್ಬಿದ್ದಾರೆ.
ಬಸ್ ನಿಲ್ದಾಣದಲ್ಲಿ ನಮಗೆ ಕುಳಿತುಕೊಳ್ಳಲು ಸಿಬ್ಬಂದಿ ಅವಕಾಶ ಕೊಟ್ಟಿಲ್ಲ ಎಂದು ಆರೋಪಿಸಿದ ಪ್ರಯಾಣಿಕರು, ಸಾರಿಗೆ ಸಿಬ್ಬಂದಿ ಈ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
10:44 December 13
ಮುಷ್ಕರದ ನಡುವೆಯೂ ಬೆಂಗಳೂರಿನಿಂದ ಮಂಗಳೂರಿಗೆ ಹೊರಟ ಬಸ್:
ಬೆಂಗಳೂರು: ಸಾರಿಗೆ ನೌಕರರ ಮುಷ್ಕರದಿಂದಾಗಿ ಭಾಗಶಃ ನೌಕರರು ಕೆಲಸಕ್ಕೆ ಗೈರು ಹಾಜರಾಗಿದ್ದಾರೆ. ಇತ್ತ ಮುಷ್ಕರದ ನಡುವೆಯೂ ರಾಜ್ಯದ ಹಲವು ಜಿಲ್ಲೆಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ಆರಂಭವಾಗಿದೆ. ಬೆಳಗ್ಗೆ 8 ಗಂಟೆಯವರೆಗೆ ಮಂಗಳೂರಿಗೆ 61 ಬಸ್‌ಗಳು, ಪುತ್ತೂರಿಗೆ 3, ಶಿವಮೊಗ್ಗ 2 ಸೇರಿದಂತೆ ಒಟ್ಟು 66 ಬಸ್‌ಗಳನ್ನು ಬಿಡಲಾಗಿದೆ. ಪ್ರಯಾಣಿಕರಿಗೆ ಅನುಗುಣವಾಗಿ ಸುರಕ್ಷಿತ ಕ್ರಮದೊಂದಿಗೆ ಬಸ್ ಬಿಡಲಾಗುತ್ತಿದೆ. ಬೆಂಗಳೂರಿನಲ್ಲಿ ಸಹ ಬಿಎಂಟಿಸಿ ಬಸ್‌ಗಳು ಸಂಚಾರ ಆರಂಭಿಸಿವೆ.
10:43 December 13
ಮಾವನ ಅಂತ್ಯಸಂಸ್ಕಾರಕ್ಕೆ ಹೋಗಲು ಸೊಸೆಯ ಪರದಾಟ:
ಹುಬ್ಬಳ್ಳಿ: ಮುಷ್ಕರ ಹಿನ್ನೆಲೆ ಬಡ, ಮಧ್ಯಮ ವರ್ಗದ ಜನರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಮಾವನ ಅಂತ್ಯ ಸಂಸ್ಕಾರಕ್ಕೆ ಹೋಗಲು ಸಾಧ್ಯವಾಗದ ಹಿನ್ನೆಲೆ ಹುಬ್ಬಳ್ಳಿ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಕಣ್ಣೀರು ಹಾಕಿದ ಘಟನೆ ನಡೆದಿದೆ.
ಕೊಪ್ಪಳದ ಕುಷ್ಟಗಿ ಮೂಲದ ದೇವಮ್ಮ ಎಂಬುವರು ಬಸ್‌ಗಾಗಿ ಪರದಾಟ ನಡೆಸಿದರು. ಕೂಲಿ ಕೆಲಸಕ್ಕೆಂದು ದೇವಮ್ಮ ಮಂಗಳೂರಿನಲ್ಲಿ ವಾಸವಾಗಿದ್ದರು. ಆದ್ರೆ ಮಾವ ಮೃತಪಟ್ಟಿರುವ ಸುದ್ದಿ ಕೇಳಿ ಐದು ವರ್ಷದ ಮಗುವಿನೊಂದಿಗೆ ಮಂಗಳೂರಿನಿಂದ ಹುಬ್ಬಳ್ಳಿಗೆ ಬಸ್ನಲ್ಲಿ ನಿನ್ನೆ ಸಾಯಂಕಾಲ ಬಂದು ಇಳಿದಿದ್ದಾರೆ. ಆದರೆ ಸಾರಿಗೆ ಸಿಬ್ಬಂದಿ ಮುಷ್ಕರ ನಡೆಸುತ್ತಿರುವ ಹಿನ್ನೆಲೆ ಕೊಪ್ಪಳದ ಕಡೆ ಯಾವುದೇ ಬಸ್ ವ್ಯವಸ್ಥೆ ಇಲ್ಲದಿರುವುದರಿಂದ ಮಹಿಳೆ ಕಣ್ಣೀರಿಟ್ಟಿದ್ದಾರೆ.
10:42 December 13
ಯೋಧರಿಗೂ ತಟ್ಟಿದ ಪ್ರತಿಭಟನೆ ಬಿಸಿ:
ಬೆಳಗಾವಿ: ಸಾರಿಗೆ ಇಲಾಖೆ ಸಿಬ್ಬಂದಿಗಳು ನಡೆಸುತ್ತಿರುವ ಮುಷ್ಕರದ ಬಿಸಿ ದೇಶ ಕಾಯುವ ಸೈನಿಕರಿಗೆ ತಟ್ಟಿದೆ. ಬೆಳಗಾವಿಯ ಮರಾಠಾ ಲೈಟ್ ಇನ್ಫೆಂಟ್ರಿಗೆ ಹಾಜರಾಗಬೇಕಿರುವ ಯೋಧರು ಬಸ್‌ಗಾಗಿ ಪರದಾಡಿದರು. ಬಳ್ಳಾರಿಯಿಂದ 9 ಸಾವಿರ ಬಾಡಿಗೆ ನೀಡಿ ಕ್ಯಾಬ್ ಮೂಲಕ ಬೆಳಗಾವಿಗೆ ಇಬ್ಬರು ಯೋಧರು ಬಂದಿದ್ದಾರೆ. ಇಲ್ಲಿನ ಮರಾಠಾ ಲೈಟ್ ಇನ್ಫೆಂಟ್ರಿಗೆ ಹೋಗಿ ರಿಪೋರ್ಟ್ ಮಾಡಿಕೊಂಡು ನಂತರ ಜಮ್ಮು ಗೆ ತೆರಳಬೇಕಿದ್ದ ಇವರು ಸಾವಿರಾರು ಹಣ ವ್ಯಯಿಸಿ ಕುಂದಾನಗರಿಗೆ ಆಗಮಿಸಿದ್ದಾರೆ.
ಪ್ರತಿಭಟನೆಯಿಂದಾಗಿ ತೊಂದರೆಯಾಗುತ್ತಿದ್ದು, ಇನ್ನೂ ಹಲವು ಯೋಧರು ಬೆಳಗಾವಿಗೆ ಬರಬೇಕಿದೆ. ಸರ್ಕಾರಿ ಬಸ್‌ಗಳು ಆರಂಭವಾದ್ರೆ ಕಡಿಮೆ ಹಣದಲ್ಲಿ ಬರಬಹುದು. ಬಸ್‌ಗಳ ಸಂಚಾರ ಆರಂಭಿಸಿ ಅನುಕೂಲ ಮಾಡಿಕೊಡಿ ಎಂದು ಮನವಿ ಮಾಡಿದರು.
10:18 December 13
ಬಸ್ ಸಂಚಾರ ಸ್ತಬ್ಧ:
ಹೊಸಪೇಟೆ: ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆ ಹೊಸಪೇಟೆಯಲ್ಲಿ ಬಸ್ ಸಂಚಾರ ಸ್ತಬ್ಧವಾಗಿದೆ. ಬಸ್ ನಿಲ್ದಾಣ ಬಿಕೋ ಎನ್ನುತ್ತಿದೆ. ಮುಷ್ಕರ ಮುಂದುವರೆದ ಬಗ್ಗೆ ಕೆಲ ಪ್ರಯಾಣಿಕರಿಗೆ ಮಾಹಿತಿ ಇಲ್ಲದ ಹಿನ್ನೆಲೆ ಕೆಲವರು ನಿಲ್ದಾಣದತ್ತ ಆಗಮಿಸುತ್ತಿದ್ದಾರೆ. ಇನ್ನೂ ಕೆಲವರು ಖಾಸಗಿ ವಾಹನಗಳ ಮೊರೆ ಹೋಗುತ್ತಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
10:18 December 13
ಪ್ರತಿಭಟನಾಕಾರರನ್ನು ಬಸ್ ನಿಲ್ದಾಣದಿಂದ ಹೊರ ಹಾಕಿದ್ರ ಪೊಲೀಸ್?
ಬೆಳಗಾವಿ: ಕಳೆದ ಎರಡು ದಿನಗಳಿಂದ ಸಾರಿಗೆ ಇಲಾಖೆ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದು, ಇಂದು ಕೂಡ ಮುಷ್ಕರ ಮುಂದುವರೆದಿದೆ. ಆದ್ರೆ ನಿನ್ನೆ ಮಧ್ಯರಾತ್ರಿ ಅಹೋರಾತ್ರಿ ಧರಣಿ ನಡೆಸಲು ಮುಂದಾದ ಸಾರಿಗೆ ಸಿಬ್ಬಂದಿಯನ್ನು ಪೊಲೀಸರು ಬಸ್ ನಿಲ್ದಾಣದಿಂದ ಹೊರ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಪೊಲೀಸರ ನಿರ್ದೇಶನದಲ್ಲಿ ಸಿಬ್ಬಂದಿಯನ್ನು ಹೊರ ಹಾಕಲಾಗಿದೆ ಎಂದು ಕೆಲ ಸಿಬ್ಬಂದಿ ಆರೋಪಿಸುತ್ತಿದ್ದಾರೆ.
10:03 December 13
ಖಾಕಿ ಭದ್ರತೆಯಲ್ಲಿ ಹೊರಟ ಬಿಎಂಟಿಸಿ ಬಸ್:
ಬೆಂಗಳೂರು: ಸಾರಿಗೆ ಬಸ್‌ಗಳು ಸಂಪೂರ್ಣ ಸ್ತಬ್ಧವಾದ ಹಿನ್ನೆಲೆ ಸದ್ಯಕ್ಕೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಖಾಕಿ ಸಂಪೂರ್ಣ ಜವಾಬ್ದಾರಿ ಹೊತ್ತಿದೆ. ಹೀಗಾಗಿ ಯಶವಂತಪುರದಿಂದ ನೆಲಮಂಗಲಕ್ಕೆ ಒಂದು ಬಸ್ಸನ್ನು ಪೊಲೀಸರ ನೇತೃತ್ವದಲ್ಲಿ ಬಿಡಲಾಯಿತು. ಪ್ರಯಾಣಿಕರನ್ನು ನೋಡಿಕೊಂಡು ಮತ್ತಷ್ಟು ಬಸ್ ಬಿಡಲು ನಿರ್ಧಾರ ಮಾಡಿದ್ದಾರೆ. ಕೆಲ ಬಸ್‌ಗಳು ಡಿಪೋದಲ್ಲೇ ನಿಂತಿವೆ.
10:02 December 13
ಡಿಪೋಗಳಿಗೆ ಖಾಕಿ ಭದ್ರತೆ:
ಬೆಂಗಳೂರು: ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆ ಇಂದು ಕೂಡ ಮುಂದುವರೆದಿದ್ದು, ಸರ್ಕಾರ ಸರಿಯಾಗಿ ಸ್ಪಂದಿಸದ ಕಾರಣ ಬಿಎಂಟಿಸಿ , ಕೆಎಸ್‌ಆರ್‌ಟಿಸಿ ಬಸ್ಸುಗಳು ಡಿಪೋದಲ್ಲೇ ನಿಂತಿವೆ.
ಇಂದು ಉಪವಾಸ ಸತ್ಯಾಗ್ರಹ ಮಾಡಲು ಹೋರಾಟಗಾರರು ನಿರ್ಧರಿಸಿದ್ದು, ಪೊಲೀಸರು ಕೂಡ ಫುಲ್ ಅಲರ್ಟ್ ಆಗಿದ್ದಾರೆ. ನಗರ ಆಯುಕ್ತ ಕಮಲ್ ಪಂತ್ ನೇತೃತ್ವದಲ್ಲಿ ಡಿಸಿಪಿ, ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್, ಮಹಿಳಾ ಸಿಬ್ಬಂದಿ ಅಲರ್ಟ್ ಆಗಲಿದ್ದಾರೆ. ನಗರದ ಪ್ರತಿ ಡಿಪೋ ಬಳಿ ಹೊಯ್ಸಳ ಹಾಗೂ ಪೊಲೀಸ್ ಸಿಬ್ಬಂದಿ ಗಸ್ತಿನಲ್ಲಿ ತಿರುಗುತ್ತಿದ್ದಾರೆ.
09:41 December 13
ಕರ್ತವ್ಯಕ್ಕೆ ಹಾಜರಾಗಲು ಇಂದು ಡೆಡ್‌ಲೈನ್:
ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದೆ. ಇಂದಿನಿಂದ ಮುಷ್ಕರ ತೀವ್ರಗೊಳಿಸಲು ನಿರ್ಧಾರ ಮಾಡಲಾಗಿದ್ದು, ಸಾರಿಗೆ ನೌಕರರು ಕುಟುಂಬ ಸಮೇತ ಉಪವಾಸ ಸತ್ಯಾಗ್ರಹ ಮಾಡಲಿದ್ದಾರೆ.
ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದು, ಬೆಂಗಳೂರಿನಲ್ಲಿ ಮೌರ್ಯ ಸರ್ಕಲ್ ಬಳಿ ಪ್ರತಿಭಟನೆ ನಡೆಯಲಿದೆ. ಇನ್ನೊಂದೆಡೆ ಸಾರಿಗೆ ನೌಕರರ ಮುಷ್ಕರ ಹಿನ್ನಲೆ ಇಂದು ಕರ್ತವ್ಯಕ್ಕೆ ಹಾಜರಾಗಲು ನೌಕರರಿಗೆ ಸರ್ಕಾರ ಡೆಡ್‌ಲೈನ್ ಕೊಟ್ಟಿದೆ. ಕರ್ತವ್ಯಕ್ಕೆ ಹಾಜರಾಗದಿದ್ದರೆ ನೌಕರರ ಮುಷ್ಕರ ಹತ್ತಿಕ್ಕಲು ಸರ್ಕಾರ ಯೋಜನೆ ರೂಪಿಸಿದ್ದು, ನಾಳೆಯಿಂದ ಖಾಸಗಿ ವಾಹನಗಳು ರಸ್ತೆಗಿಳಿಯಲಿವೆ. ಈ ಹಿನ್ನೆಲೆ ಇಂದು ಖಾಸಗಿ ಬಸ್, ಟ್ಯಾಕ್ಸಿ ಮಾಲೀಕರು ಜೊತೆ ಮಾತುಕತೆ ನಡೆಸಲಾಗುತ್ತದೆ ಎನ್ನಲಾಗಿದೆ.
09:40 December 13
ಮುಷ್ಕರಕ್ಕೆ ಬೆಂಬಲ ನೀಡಿದ ಸಂಘಟನೆಗಳು
ಹಾವೇರಿ: ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ಗಳಿಲ್ಲದೆ ಖಾಲಿ ಹೊಡೆಯುತ್ತಿದ್ದು, ಬೆರಳೆಣಿಕೆಯಷ್ಟು ಪ್ರಯಾಣಿಕರು ಮಾತ್ರ ಕಂಡುಬಂದರು. ಇಂದು 10 ಗಂಟೆಯ ನಂತರ ಸಾರಿಗೆ ಇಲಾಖೆ ನೌಕರರು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಲಿದ್ದು, ಮುಷ್ಕರಕ್ಕೆ ಕೆಲ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.
09:39 December 13
ಬಿಕೋ ಎನ್ನುತ್ತಿರುವ ಬಸ್ ನಿಲ್ದಾಣ:
ಕಲಬುರಗಿ: ಜಿಲ್ಲೆಯಲ್ಲಿ ಸಾರಿಗೆ ಸಿಬ್ಬಂದಿ ನಡೆಸುತ್ತಿರುವ ಮುಷ್ಕರ ಮೂರನೇ ದಿನಕ್ಕೆ ಮುಂದುವರೆದಿದ್ದು, ಬಸ್ ಸಂಚಾರವಿಲ್ಲದೆ ನಿಲ್ದಾಣಗಳಿ ಬಿಕೋ ಎನ್ನುತ್ತಿವೆ. ರೈಲಿನ ಮೂಲಕ ಕಲಬುರಗಿಗೆ ಆಗಮಿಸಿದ ಪ್ರಯಾಣಿಕರು ಬೇರೆ ಜಿಲ್ಲೆಗಳಿಗೆ ಹಾಗೂ ಗ್ರಾಮ ಪ್ರದೇಶಕ್ಕೆ ತೆರಳಲು ಬಸ್ ಇಲ್ಲದ ಹಿನ್ನೆಲೆ ಪರದಾಡುತ್ತಿದ್ದಾರೆ. ಕೆಲ ಪ್ರಯಾಣಿಕರು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದು, ಇನ್ನೂ ಕೆಲವರು ಆಟೋಗಳ ಮೊರೆ ಹೋಗುತ್ತಿದ್ದಾರೆ.
09:16 December 13
ಮೂರನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ:
ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಘೋಷಿಸಬೇಕು ಎಂದು ಆಗ್ರಹಿಸಿ ಸಾರಿಗೆ ಸಿಬ್ಬಂದಿ ನಡೆಸುತ್ತಿರುವ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯದಲ್ಲಿ ಪ್ರತಿಭಟನೆಯ ಕಾವು ಜೋರಾಗಿದ್ದು, ಬಸ್ ಸಂಚಾರವಿಲ್ಲದೆ ನಿಲ್ದಾಣಗಳು ಬಿಕೋ ಎನ್ನುತ್ತಿವೆ.