ETV Bharat / state

ಎಲ್ಲಾ ನಿಮ್ಮ ಉಪಕಾರ ಸಾರ್.. ಉತ್ತರ ಭಾರತದಲ್ಲಿನ 'ಅಗ್ನಿ'ಪಥದಿಂದ ಪಾರಾಗಿ ಬಂದವರಿಂದ ಸಚಿವರಿಗೆ ಕೃತಜ್ಞತೆ - ಅಗ್ನಿಪಥ್​ ನೇಮಕಾತಿ ವಿರೋಧಿಸಿ ಪ್ರತಿಭಟನೆ

ಉತ್ತರ ಭಾರತದ ಪ್ರಸಿದ್ಧ ಪುಣ್ಯಕ್ಷೇತ್ರಗಳಾದ ಕಾಶಿ, ವಾರಣಾಸಿ ಸೇರಿದಂತೆ ವಿವಿಧ ಸ್ಥಳಗಳಿಗೆ ತೆರಳಿದ್ದ ವೇಳೆ ಆ ಭಾಗದಲ್ಲಿ ಅಗ್ನಿಪಥ್ ವಿರೋಧಿಸಿ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದಿದ್ದವು. ಇದರಿಂದ ಆತಂಕಕ್ಕೆ ಈಡಾಗಿದ್ದ ಪ್ರವಾಸಿಗರನ್ನು ಅಬಕಾರಿ ಸಚಿವ ಗೋಪಾಲಯ್ಯ ನೇತೃತ್ವದಲ್ಲಿ 164 ಪ್ರವಾಸಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ ಕರೆತರಲಾಗಿದೆ.

ಅಬಕಾರಿ ಸಚಿವ ಗೋಪಾಲಯ್ಯ
ಅಬಕಾರಿ ಸಚಿವ ಗೋಪಾಲಯ್ಯ
author img

By

Published : Jun 22, 2022, 7:40 PM IST

Updated : Jun 22, 2022, 8:04 PM IST

ಬೆಂಗಳೂರು: ದೇಶಾದ್ಯಂತ ಅಗ್ನಿಪಥ್​ ನೇಮಕಾತಿ ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಈ ವೇಳೆ ಬಹುತೇಕ ಕಡೆ ಪ್ರತಿಭಟನೆಗಳು ಭುಗಿಲೆದ್ದು, ಹಿಂಸಾರೂಪಕ್ಕೆ ತಿರುಗಿವೆ. ಉತ್ತರ ಭಾರತದ ಪ್ರಸಿದ್ಧ ಪುಣ್ಯ ಕ್ಷೇತ್ರಗಳಿಗೆ ತೆರಳಿದ್ದ ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಭಾಗಗಳ 150ಕ್ಕೂ ಅಧಿಕ ಪ್ರವಾಸಿಗರು ತಾಯ್ನಾಡಿಗೆ ಸುರಕ್ಷಿತವಾಗಿ ಮರಳಿದ್ದು, ಅವರ ಕಣ್ಣಲ್ಲಿ ಇಂದು ಕೃತಜ್ಞತಾ ಭಾವ ಕಂಡುಬಂತು.

ಸಚಿವರಿಗೆ ಕೃತಜ್ಞತೆ ಸಲ್ಲಿಸಿದ ಪ್ರವಾಸಿಗರು
ಸಚಿವರಿಗೆ ಕೃತಜ್ಞತೆ ಸಲ್ಲಿಸಿದ ಪ್ರವಾಸಿಗರು

ಉತ್ತರ ಭಾರತದ ಪ್ರಸಿದ್ಧ ಪುಣ್ಯಕ್ಷೇತ್ರಗಳಾದ ಕಾಶಿ, ವಾರಣಾಸಿ ಸೇರಿದಂತೆ ವಿವಿಧ ಸ್ಥಳಗಳಿಗೆ ತೆರಳಿದ್ದ ವೇಳೆ ಆ ಭಾಗದಲ್ಲಿ ಅಗ್ನಿಪಥ್ ವಿರೋಧಿಸಿ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದಿದ್ದವು. ಇದರಿಂದ ಆತಂಕಕ್ಕೆ ಈಡಾಗಿದ್ದ ಪ್ರವಾಸಿಗರನ್ನು ಸರ್ಕಾರ ಅಬಕಾರಿ ಸಚಿವ ಗೋಪಾಲಯ್ಯ ನೇತೃತ್ವದಲ್ಲಿ 164 ಪ್ರವಾಸಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ ಕರೆತಂದಿದೆ.

ವಯೋವೃದ್ಧರು ಸೇರಿದಂತೆ ಸುರಕ್ಷಿತವಾಗಿ ಬುಧವಾರ ಬೆಂಗಳೂರಿಗೆ ಆಗಮಿಸಿದ 164ಕ್ಕೂ ಅಧಿಕ ಪ್ರವಾಸಿಗರು ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಗಪುರದಲ್ಲಿ ಶಾಸಕರೂ ಆದ ಅಬಕಾರಿ ಸಚಿವ ಕೆ. ಗೋಪಾಲಯ್ಯ ಕಚೇರಿಗೆ ಮಧ್ಯಾಹ್ನ ಆಗಮಿಸಿದರು.

ಉತ್ತರ ಭಾರತದಲ್ಲಿನ ಅಗ್ನಿಪಥದಿಂದ ಪಾರಾಗಿ ಬಂದವರ ಜತೆ ಅಬಕಾರಿ ಸಚಿವರಿದ್ದಾರೆ

ಜಿಲ್ಲೆಗಳಿಗೆ ಬಸ್ ವ್ಯವಸ್ಥೆ: ಈ ವೇಳೆ ಸಚಿವ ಗೋಪಾಲಯ್ಯ ಅವರು ಎಲ್ಲ ಪ್ರಯಾಣಿಕರನ್ನು ಬರಮಾಡಿಕೊಂಡು ಯೋಗಕ್ಷೇಮ ವಿಚಾರಿಸಿ, ಉಪಹಾರದ ವ್ಯವಸ್ಥೆ ಕಲ್ಪಿಸಿದರು. ನಂತರ ಎಲ್ಲರಿಗೂ ತಮ್ಮ ಜಿಲ್ಲೆಗಳಿಗೆ ತೆರಳಲು ಬಸ್‌ಗಳ ವ್ಯವಸ್ಥೆ ಮಾಡಿದರು.

ಕೈ ಮುಗಿದು ಕೃತಜ್ಞತೆ ಸಲ್ಲಿಕೆ: ಊರಿಗೆ ಹೊರಟು ನಿಂತ ಪ್ರವಾಸಿಗರು ಸಚಿವ ಕೆ. ಗೋಪಾಲಯ್ಯರಿಗೆ ಕೈ ಮುಗಿದು ಕೃತಜ್ಞತೆ ಸಲ್ಲಿಸಿ ತಮ್ಮ ಈ ಉಪಕಾರವನ್ನು ಎಂದೂ ಮರೆಯುವುದಿಲ್ಲ ಎಂದು ಸಾರ್.. ಎಂದು ಸ್ಮರಿಸಿದರು.

ಓದಿ: ಬೊಕ್ಕಸಕ್ಕೆ ಭಾರವಾಗಿರುವ ಇಲಾಖೆಗಳಲ್ಲಿರುವ ನಿಗಮಗಳ ವಿಲೀನಕ್ಕೆ ತೀರ್ಮಾನ: ಸಚಿವ ಆರ್​. ಅಶೋಕ್

Last Updated : Jun 22, 2022, 8:04 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.