ಬೆಂಗಳೂರು: ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಗ್ಯ ಸ್ಥಿರವಾಗಿದ್ದು, ತಜ್ಞರ ತಂಡ ವೈದ್ಯಕೀಯ ಪರಿಶೀಲನೆ ನಡೆಸಿ ಚಿಕಿತ್ಸೆ ನೀಡುತ್ತಿದೆ.
ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಎಂ ಯಡಿಯೂರಪ್ಪ, ಬೆಳಗ್ಗೆ ಆಸ್ಪತ್ರೆಯಲ್ಲೇ ವಾಯುವಿಹಾರ ಮಾಡಿದರು. ನಂತರ ಇಂದಿನ ದಿನಪತ್ರಿಕೆಗಳ ಮೇಲೆ ಕಣ್ಣಾಡಿಸಿದರು. ಉಪಹಾರ ಸೇವನೆ ನಂತರ ಕೆಲಕಾಲ ಪುಸ್ತಕಗಳ ಪುಟ ತಿರುವಿ ಹಾಕಿದರು.
ಓದಿ: ಸಚಿವರು, ಶಾಸಕರ ಸಭೆಯಲ್ಲಿ ವರ್ಚುವಲ್ ಮೂಲಕ ಭಾಗಿಯಾಗಲಿರುವ ಸಿಎಂ ಬಿಎಸ್ವೈ
ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದಲ್ಲಿ ಬೆಂಗಳೂರು ಕೊರೊನಾ ನಿಯಂತ್ರಣ ಕುರಿತು ಸಚಿವರು, ಶಾಸಕರು, ಸಂಸದರ ಸಭೆ ನಡೆಯಲಿದ್ದು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಲು ಆಸ್ಪತ್ರೆಯಲ್ಲಿ ಎಲ್ಲಾ ತಯಾರಿ ಮಾಡಿಕೊಂಡಿದ್ದಾರೆ. ವಿಡಿಯೋ ಸಂವಾದಕ್ಕೆ ಪೂರಕ ಪರಿಕರಗಳನ್ನು ಸಿದ್ಧಪಡಿಸಲಾಗಿದೆ. ಈಗಾಗಲೇ ಕೊರೊನಾ ಸ್ಥಿತಿಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿರುವ ಸಿಎಂ ವರ್ಚುಯಲ್ ಮೂಲಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ.