ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಸೈಲೆಂಟಾಗಿ ತನ್ನ ಛಾಪು ಮೂಡಿಸಿದ ಹುಬ್ಬಳ್ಳಿ - ಧಾರವಾಡ ಪೊಲೀಸ್ ಕಮಿಷನರ್ ಲಾಬೂರಾಮ್ ಆರೋಗ್ಯದಲ್ಲಿ ಏರುಪೇರಾಗಿತ್ತು. ಧಾರವಾಡದ ಎಸ್ ಡಿ ಎಂ ಆಸ್ಪತ್ರೆಯಿಂದ ನಗರದಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ನಿನ್ನೆಯೇ ಏರ್ಲಿಫ್ಟ್ ಮಾಡಿ ಚಿಕಿತ್ಸೆ ಕೊಡಲಾಗ್ತಿದೆ.
ಮಣಿಪಾಲ್ ಆಸ್ಪತ್ರೆಯ ಮೂಲಗಳ ಪ್ರಕಾರ, ಸದ್ಯ ಆರೋಗ್ಯದಲ್ಲಿ ಕೊಂಚ ಚೇತರಿಕೆ ಇದ್ದು, ತೀವ್ರಾ ನಿಗಾ ಘಟಕದಲ್ಲಿ ಇರಿಸಲಾಗಿದೆ. ಲಾಬೂರಾಮ್ ನಗರದ ಉತ್ತರ ವಿಭಾಗ ಡಿಸಿಪಿಯಾಗಿ ಬಹಳಷ್ಟು ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.
ಈ ಹಿಂದೆ ಇವರಿಗೆ ಜ್ವರ ಮತ್ತು ಗಂಟಲಿನ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ, ಧಾರವಾಡದಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆದರೆ, ಬೆಂಗಳೂರಿನಲ್ಲಿ ಗೊತ್ತಿರುವ ವೈದ್ಯರಿಂದ ಚಿಕಿತ್ಸೆ ಕೊಡಿಸಲು ಮಣಿಪಾಲ್ ಆಸ್ಪತ್ರೆಗೆ ಏರ್ಲಿಫ್ಟ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಪೊಲೀಸ್ ಕಮಿಷನರ್ ಲಾಬೂರಾಮ್ ಆರೋಗ್ಯದಲ್ಲಿ ಏರುಪೇರು; ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ - Treatment for laburam at Manipal Hospital
ಹುಬ್ಬಳ್ಳಿ - ಧಾರವಾಡ ಪೊಲೀಸ್ ಕಮಿಷನರ್ ಲಾಬೂರಾಮ್ ಆರೋಗ್ಯದಲ್ಲಿ ಏರುಪೇರಾದ ಕಾರಣ, ಧಾರವಾಡದ ಎಸ್. ಡಿ. ಎಂ ಆಸ್ಪತ್ರೆಯಿಂದ ಮಣಿಪಾಲ್ ಆಸ್ಪತ್ರೆಗೆ ಏರ್ಲಿಫ್ಟ್ ಮಾಡಲಾಗಿದೆ.