ETV Bharat / state

ಬೆಂಗಳೂರು - ಧಾರವಾಡ ವಂದೇ ಭಾರತ್‌ ರೈಲು ಪ್ರಾಯೋಗಿಕ ಓಡಾಟ ಪ್ರಾರಂಭ

ಉತ್ತರ ಕರ್ನಾಟಕ ಭಾಗದ ಜನರ ಬಹುನಿರೀಕ್ಷಿತ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ಪ್ರಾಯೋಗಿಕ ಓಡಾಟ ಇಂದು ಬೆಳಗ್ಗೆಯಿಂದ ಆರಂಭವಾಗಿದೆ.

Vande Bharat Express
ಬೆಂಗಳೂರು - ಧಾರವಾಡ ವಂದೇ ಭಾರತ್‌ ರೈಲು
author img

By

Published : Jun 19, 2023, 9:01 AM IST

ಬೆಂಗಳೂರು - ಧಾರವಾಡ ವಂದೇ ಭಾರತ್‌ ರೈಲು ಪ್ರಾಯೋಗಿಕ ಓಡಾಟ

ಬೆಂಗಳೂರು : ಇನ್ನೇನು ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಬೆಂಗಳೂರು - ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಲೋಕಾರ್ಪಣೆ ಆಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಇದೀಗ ಬೆಂಗಳೂರು-ಧಾರವಾಡ ರೈಲು ನಿಲ್ದಾಣಗಳ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಪ್ರಾಯೋಗಿಕ ಓಡಾಟ ಇಂದು ಬೆಳಗ್ಗೆಯಿಂದ ಆರಂಭವಾಗಿದೆ. ಇಂದು ಬೆಳಗ್ಗೆ 5:45 ಕ್ಕೆ ಬೆಂಗಳೂರಿನಿಂದ ಈ ರೈಲು ಪ್ರಯಾಣ ಬೆಳಸಿತು.

ಬೆಂಗಳೂರಿಂದ 6 ಗಂಟೆ 55 ನಿಮಿಷಗಳ ಅಂತರದಲ್ಲಿ ಈ ರೈಲು ಧಾರವಾಡ ತಲುಪಲಿದೆ ಎಂದು ನಿರೀಕ್ಷಿಸಲಾಗಿದೆ. ಬೆಂಗಳೂರು ನಗರದಿಂದ ಬೆಳಗ್ಗೆ 5.45ಕ್ಕೆ ಹೊರಟು ಮಧ್ಯಾಹ್ನ 12.40ಕ್ಕೆ ಧಾರವಾಡ ತಲುಪಲಿದೆ. ಧಾರವಾಡದಿಂದ ಮಧ್ಯಾಹ್ನ 1.15ಕ್ಕೆ ಹೊರಟು ರಾತ್ರಿ 8:10ಕ್ಕೆ ಬೆಂಗಳೂರು ನಗರ ತಲುಪುವ ನಿರೀಕ್ಷೆಯಿದೆ.

ಇದನ್ನೂ ಓದಿ : ಮುಂದಿನ 3 ವರ್ಷಗಳಲ್ಲಿ ಹೊಸ ತಲೆಮಾರಿನ 400 ವಂದೇ ಭಾರತ್‌ ರೈಲುಗಳ ಸೇವೆ

ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಜೂನ್​​ 26ರಂದು ಅಧಿಕೃತವಾಗಿ ಚಾಲನೆ ನೀಡುವ ಮುನ್ನವೇ ಇಂದು ಪ್ರಾಯೋಗಿಕ ಚಾಲನೆ ನೀಡಲಾಗಿದೆ. ಎಂಟು ಬೋಗಿಗಳುಳ್ಳ ಮಿನಿ ವಂದೇ ಭಾರತ್‌ ಇದಾಗಿದೆ. ಹಾಗೆಯೇ, ಧಾರವಾಡ - ಬೆಂಗಳೂರು ಮಧ್ಯ ಸಂಚರಿಸುವ ರೈಲು ಮಧ್ಯಾಹ್ನ 12-10ಕ್ಕೆ ಹುಬ್ಬಳ್ಳಿಗೆ ಆಗಮಿಸಿ 12-15ಕ್ಕೆ ಧಾರವಾಡಕ್ಕೆ ಪ್ರಯಾಣ ಬೆಳೆಸಲಿದೆ.

ಇದನ್ನೂ ಓದಿ : ಜೂನ್​ 26 ರಂದು ಬೆಂಗಳೂರು - ಧಾರವಾಡ ವಂದೇ ಭಾರತ್‌ ರೈಲಿಗೆ ಪ್ರಧಾನಿ ಚಾಲನೆ

ವಾರದಲ್ಲಿ 6 ದಿನ ಸಂಚಾರ : ಈ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದಿಂದ ಹುಬ್ಬಳ್ಳಿಯ ಶ್ರೀಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣದ ಮೂಲಕ ಧಾರವಾಡ ರೈಲು ನಿಲ್ದಾಣದವರೆಗೆ ಅಂದ್ರೆ 487.47 ಕಿಲೋ ಮೀಟರ್​ ಸಂಚರಿಸಲಿದೆ. ಮಂಗಳವಾರವನ್ನು ಹೊರತುಪಡಿಸಿ ಉಳಿದ ವಾರದ 6 ದಿನಗಳ ಕಾಲ ಪ್ರಯಾಣಿಕರಿಗೆ ಸೇವೆ ನೀಡಲಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಸಿಕಂದರಾಬಾದ್​ - ತಿರುಪತಿ ವಂದೇ ಭಾರತ್​ ಎಕ್ಸ್​ಪ್ರೆಸ್​ಗೆ ಪ್ರಧಾನಿ ಮೋದಿ ಹಸಿರು ನಿಶಾನೆ

ಸಿಕಂದರಾಬಾದ್ - ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು : ಇನ್ನು ಕಳೆದ ಏಪ್ರಿಲ್​ ತಿಂಗಳ 8 ನೇ ತಾರೀಖಿನಂದು ಹೈದರಾಬಾದ್​ಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಸಿಕಂದರಾಬಾದ್ - ತಿರುಪತಿಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದ್ದರು. ಆಂಧ್ರಪ್ರದೇಶ ಮತ್ತು ತೆಲಂಗಾಣ ನಡುವಿನ ಎರಡನೇ ವಂದೇ ಭಾರತ್​ ರೈಲು ಇದಾಗಿದ್ದು, 3 ತಿಂಗಳ ಅಂತರದಲ್ಲಿ 2ನೇ ಸೆಮಿ ಹೈಸ್ಪೀಡ್ ಎಕ್ಸ್‌ಪ್ರೆಸ್ ರೈಲು ಕಾರ್ಯಾರಂಭಗೊಂಡಿದೆ.

ಇದನ್ನೂ ಓದಿ : ಫೋಟೋ ತೆಗೆದುಕೊಳ್ಳಲು ವಂದೇ ಭಾರತ್​ ರೈಲು ಹತ್ತಿ ಒಳಗೆ ಸಿಲುಕಿಕೊಂಡ ವ್ಯಕ್ತಿ .. ವಿಡಿಯೋ ವೈರಲ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.