ETV Bharat / state

ತ್ರಿವಳಿ ತಲಾಕ್; ಸುಪ್ರೀಂ ಆದೇಶದ ನಂತರವೇ ವಿಚಾರಣೆ ಎಂದ ಹೈಕೋರ್ಟ್​ !

author img

By

Published : Aug 10, 2020, 11:22 PM IST

‘ಮುಸ್ಲಿಂ ಮಹಿಳೆಯರ (ಮದುವೆ ಮೇಲಿನ ಹಕ್ಕಿನ ರಕ್ಷಣೆ) ಕಾಯ್ದೆ-2019’ರ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಮಹ್ಮದ್ ಆರೀಫ್ ಜಮೀಲ್ ಸಲ್ಲಿಸಿರುವ ಪಿಐಎಲ್ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

highcourt news
ಹೈಕೋರ್ಟ್

ಬೆಂಗಳೂರು: ತ್ರಿವಳಿ ತಲಾಕ್ ನಿಷೇಧಿಸಿ ಜಾರಿಗೆ ತಂದಿರುವ ‘ಮುಸ್ಲಿಂ ಮಹಿಳೆಯರ (ಮದುವೆ ಮೇಲಿನ ಹಕ್ಕು ರಕ್ಷಣೆ) ಕಾಯ್ದೆ-2019’ ರ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿ ದೇಶದ ವಿವಿಧ ಹೈಕೋರ್ಟ್​​​ಗಳಲ್ಲಿ ಸಲ್ಲಿಸಿರುವ ಎಲ್ಲ ಅರ್ಜಿಗಳನ್ನು ತನ್ನಲ್ಲಿಗೆ ವರ್ಗಾಯಿಸಿಕೊಳ್ಳಲು ಆದೇಶಿಸುವಂತೆ ಕೋರಿ‌ ಸುಪ್ರೀಂಕೋರ್ಟ್​​​ಗೆ ಅರ್ಜಿ ಸಲ್ಲಿಸಲಾಗಿದೆ ಎಂದು ಕೇಂದ್ರ ಸರ್ಕಾರ ಹೈಕೋರ್ಟ್ ಗೆ ಮಾಹಿತಿ ನೀಡಿದೆ.‌

‘ಮುಸ್ಲಿಂ ಮಹಿಳೆಯರ (ಮದುವೆ ಮೇಲಿನ ಹಕ್ಕಿನ ರಕ್ಷಣೆ) ಕಾಯ್ದೆ-2019’ ರ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಮಹ್ಮದ್ ಆರೀಫ್ ಜಮೀಲ್ ಸಲ್ಲಿಸಿರುವ ಪಿಐಎಲ್ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರರ ಪರ ವಕೀಲ ರೆಹಮತ್ ಉಲ್ಲಾ ಕೊತ್ವಾಲ್ ವಾದಿಸಿ, 2019ರ ಆಗಸ್ಟ್ ಮೊದಲ ವಾರದಲ್ಲಿ ಈ ಅರ್ಜಿ ದಾಖಲಿಸಿದ್ದರೂ, ಈವರೆಗೆ ಅರ್ಜಿ ವಿಚಾರಣೆ‌ ನಡೆದಿಲ್ಲ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರದ ಪರ ಸಹಾಯಕ ಸಾಲಿಸಿಟರ್ ಜನರಲ್ ಸಿ. ಶಶಿಕಾಂತ್, ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ದೇಶದ ವಿವಿಧ ಹೈಕೋರ್ಟ್​ಗಳಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟಿಗೆ ವರ್ಗಾವಣೆ ಮಾಡಿಕೊಂಡು ವಿಚಾರಣೆ ನಡೆಸಲು ಕೋರಿ ಕೇಂದ್ರ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ‌ ಸಲ್ಲಿಸಿದೆ. ಈ ಅರ್ಜಿ ಇದೇ ತಿಂಗಳ ಕೊನೆಯಲ್ಲಿ ವಿಚಾರಣೆಗೆ ಬರಲಿದೆ. ಆದ್ದರಿಂದ ಹೈಕೋರ್ಟ್ ಈ ಅರ್ಜಿ ವಿಚಾರಣೆಯನ್ನು ಮುಂದೂಡಬೇಕು ಎಂದು ಕೋರಿದರು.

ಕೇಂದ್ರದ ಪರ ವಕೀಲರ ವಾದಕ್ಕೆ ಆಕ್ಷೇಪಿಸಿದ ಕೊತ್ವಾಲ್, ಹೈಕೋರ್ಟ್ ಅರ್ಜಿ ವಿಚಾರಣೆ ನಡೆಸಬಾರದು ಎಂದು ಸುಪ್ರೀಂಕೋರ್ಟ್ ಆದೇಶಿಸಿಲ್ಲ.‌ ಹೀಗಾಗಿ, ನಮ್ಮ‌ ಅರ್ಜಿ ವಿಚಾರಣೆ ನಡೆಸಲು ಹೈಕೋರ್ಟ್ ಗೆ ಯಾವುದೇ ಅಡ್ಡಿ ಇಲ್ಲ ಎಂದರು. ವಕೀಲರ ಹೇಳಿಕೆಗೆ ಪ್ರತಿಕ್ರಿಯಿಸಿದ ಪೀಠ, ಸುಪ್ರೀಂಕೋರ್ಟ್ ನಲ್ಲಿ ಕೇಂದ್ರದ ಅರ್ಜಿ ವಿಚಾರಣೆಗೆ ಬಾಕಿ ಇರುವುದರಿಂದ ಈ ಅರ್ಜಿ ಮುಂದೂಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟು, ವಿಚಾರಣೆ ಮುಂದೂಡಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.