ETV Bharat / state

ತೌಕ್ತೆ ಎಫೆಕ್ಟ್: ಹಾನಿಗೊಳಗಾದ ಕರಾವಳಿ ಭಾಗದಲ್ಲಿ ಪರಿಹಾರ ಕಾರ್ಯಾಚರಣೆಗೆ ಸಿಎಂ ಸೂಚನೆ - CM BSY notice to district administration to take remedial action

ತೌಕ್ತೆ ಚಂಡಮಾರುತದಿಂದ ಹಾನಿಗೆ ಒಳಗಾದ ಪ್ರದೇಶಗಳಿಗೆ ಭೇಟಿ‌ ನೀಡಿ ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಸಿಎಂ ಬಿಎಸ್​ವೈ ಸೂಚನೆ ನೀಡಿದರು.

M BS Yediyurappa
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
author img

By

Published : May 16, 2021, 10:41 AM IST

ಬೆಂಗಳೂರು: ಕರಾವಳಿ ಭಾಗದಲ್ಲಿ ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ತಕ್ಷಣವೇ ಪರಿಹಾರ ಕಾರ್ಯಾಚರಣೆ ಕೈಗೊಳ್ಳುವಂತೆ ಜಿಲ್ಲಾಡಳಿತಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಕರಾವಳಿ ಭಾಗದಲ್ಲಿ ಉಂಟಾಗಿರುವ ಚಂಡಮಾರುತದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಕರಾವಳಿ ಭಾಗದ ಜಿಲ್ಲಾಧಿಕಾರಿಗಳು ಹಾಗೂ ಸಚಿವರಿಗೆ ಕರೆ ಮಾಡಿ ಪರಿಸ್ಥಿತಿಯ ಮಾಹಿತಿ ಪಡೆದುಕೊಂಡರು. ಕೋವಿಡ್ ನಡುವೆಯು ಹಾನಿಗೆ ಒಳಗಾದ ಪ್ರದೇಶಗಳಿಗೆ ಭೇಟಿ‌ ನೀಡಿ ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಸೂಚನೆ ನೀಡಿದರು.

ಪರಿಹಾರ ಕಾರ್ಯಕ್ಕೆ ಸರ್ಕಾರದಿಂದ ಏನೇ ತುರ್ತು ನೆರವು ಬೇಕಿದ್ದರೂ ಸಂಬಂಧಪಟ್ಟ ಸಚಿವರಿಗೆ ಅಥವಾ ನನಗೆ ನೇರವಾಗಿ ಕರೆ ಮಾಡುವಂತೆ ಸಿಎಂ ಯಡಿಯೂರಪ್ಪ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಓದಿ: 6 ಗಂಟೆಯಲ್ಲಿ ತೀವ್ರ ಸ್ವರೂಪ; ಮೇ 18 ರಂದು ಗುಜರಾತ್ ಕರಾವಳಿ ದಾಟಲಿರುವ ಸೈಕ್ಲೋನ್ ತೌಕ್ತೆ​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.