ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಇದೆ ಎನ್ನಲಾದ ಗಾಂಜಾ ಜಾಲ ಬೆನ್ನತ್ತಿರುವ ಸಿಸಿಬಿ ತಂಡ ತನಿಖೆಯನ್ನು ಚುರುಕುಗೊಳಿಸಿದೆ. ಆದರೆ ಈ ವೇಳೆ ಚಿತ್ರನಟಿ ನಿವೇದಿತಾ ತುಳಸಿಗೆ ಗಾಂಜಾವನ್ನು ಹೋಲಿಕೆ ಮಾಡಿ ವಿವಾದಾತ್ಮಕ ಹೇಳಿಕೆ ನೀಡಿದ್ದರು.
"ಗಾಂಜಾ ಸೇವನೆ ತಪ್ಲಲ್ಲ. ಗಾಂಜಾ ಗಿಡ ತುಳಸಿ ಗಿಡಕ್ಕೆ ಸಮ" ಎಂದು ಹೇಳಿದ್ದರು. ಈ ಹೇಳಿಕೆ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ಆರೋಪಿಸಿ ಎ.ದೀಪಕ್ ಎಂಬುವರು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ನೀಡಿದ್ದ ದೂರು ಆಧರಿಸಿ ಎಫ್ಐಆರ್ ದಾಖಲಾಗಿದೆ.
ಇದನ್ನು ಓದಿ : ಸ್ಯಾಂಡಲ್ವುಡ್ ಡ್ರಗ್ಸ್ ಮಾಫಿಯಾ ಬಗ್ಗೆ ನಟಿ ನಿವೇದಿತಾ ಹೀಗಂತಾರೆ..
ಸದ್ಯ ನಟಿ ನಿವೇದಿತಾಗೆ ನೊಟೀಸ್ ನೀಡಿ ವಿಚಾರಣೆಗೆ ಕರೆಸಲು ಪೊಲೀಸರು ಮುಂದಾಗಿದ್ದಾರೆ.