ಬೆಂಗಳೂರು: ರಾಜರಾಜೇಶ್ವರಿ ನಗರದ ಕ್ಷೇತ್ರದ ಪರಾಜಿತ ಅಭ್ಯರ್ಥಿ ಹಾಗೂ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ತುಳಸಿ ಮುನಿರಾಜುಗೌಡರನ್ನು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ.
ಸದ್ಯ ಮುನಿರತ್ನ ಅನರ್ಹ ಶಾಸಕರಾಗಿದ್ದು ಡಿ.5 ರ ಚುನಾವಣೆ ಎದುರಿಸುತ್ತಿಲ್ಲ. ಕಾನೂನು ತೊಡಕು ಮುಗಿದ ನಂತರ ಚುನಾವಣೆ ನಡೆಯಲಿದ್ದು ಆಗ ಬಿಜೆಪಿಯಿಂದ ಕಣಕ್ಕಿಳಿಯಲಿದ್ದಾರೆ. ಆ ಸಂದರ್ಭದಲ್ಲಿ ಬಂಡಾಯವೇಳಬಾರದು ಎನ್ನುವ ಕಾರಣಕ್ಕೆ ಈಗಲೇ ಟಿಕೆಟ್ ಆಕಾಂಕ್ಷಿಯಾಗಿದ್ದ ಪರಾಜಿತ ಅಭ್ಯರ್ಥಿ ತುಳಸಿ ಮುನಿರಾಜುಗೌಡಗೆ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡಿ ಸಿಎಂ ಬಿಎಸ್ ಯಡಿಯೂರಪ್ಪ ಭವಿಷ್ಯದ ಬಂಡಾಯಕ್ಕೆ ಕಡಿವಾಣ ಹಾಕಿದ್ದಾರೆ ಎನ್ನಲಾಗಿದೆ.