ETV Bharat / state

ಗಣೇಶ ಪ್ರತಿಷ್ಠಾಪನೆ: ತ್ವರಿತ ಅನುಮತಿಗೆ ಬಿಬಿಎಂಪಿ ಆಯುಕ್ತರಿಂದ ಸೂಚನೆ

ಗಣೇಶ ಮೂರ್ತಿಗಳ ನಿಮಜ್ಜನ ಮಾಡುವಾಗ ಮೂರ್ತಿಗಳಿಗೆ ಯಾವುದೇ ರೀತಿಯ ವಿಘ್ನ, ಲೋಪವಾಗದಂತೆ ನೋಡಿಕೊಳ್ಳಲು ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಾಡಿಕೊಳ್ಳಿ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
author img

By

Published : Aug 26, 2022, 3:20 PM IST

ಬೆಂಗಳೂರು: ನಗರದಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಬರುವ ಅರ್ಜಿಗಳನ್ನು ಪರಿಶೀಲಿಸಿ ತ್ವರಿತವಾಗಿ ಅನುಮತಿ ನೀಡಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ನಗರದಲ್ಲಿ ಗಣೇಶ ಚತುರ್ಥಿ ಆಚರಣೆ ಸಂಬಂಧ ನಡೆದ ವರ್ಚುವಲ್ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಗಣೇಶೋತ್ಸವ ಆಚರಣೆಗೆ ಅನುಕೂಲವಾಗುವ ದೃಷ್ಟಿಯಿಂದ ಬಿಬಿಎಂಪಿ, ಬೆಸ್ಕಾಂ, ಪೊಲೀಸ್ ಹಾಗೂ ಅಗ್ನಿಶಾಮಕ ಇಲಾಖೆಯನ್ನೊಳಗೊಂಡ ಅಧಿಕಾರಿಗಳು 63 ಉಪ ವಿಭಾಗಗಳಲ್ಲಿ ಏಕಗವಾಕ್ಷಿ ಪದ್ದತಿಯಲ್ಲಿ ಅನುಮತಿ ನೀಡುವ ವ್ಯವಸ್ಥೆ ಕಲ್ಪಿಸಿದ್ದು ಮೂರ್ತಿ ಪ್ರತಿಷ್ಠಾಪನೆಗೆ ಬಂದಂತಹ ಅರ್ಜಿಗಳನ್ನು ಪರಿಶೀಲಿಸಿ ತ್ವರಿತವಾಗಿ ಅನುಮತಿ ನೀಡಲು ಅವರು ಸೂಚಿಸಿದ್ದಾರೆ.

ನಗರದಲ್ಲಿ ಗಣೇಶ ಮೂರ್ತಿಗಳನ್ನು ನಿಮಜ್ಜನ ಮಾಡುವ ಪ್ರಮುಖ ಕಲ್ಯಾಣಿಗಳಾದ ಹಲಸೂರು, ಯಡಿಯೂರು, ಸ್ಯಾಂಕಿ, ಹೆಬ್ಬಾಳ ಸೇರಿದಂತೆ ಇನ್ನಿತರ ಪ್ರಮುಖ ಕಲ್ಯಾಣಿಗಳನ್ನು ಸ್ವಚ್ಛ ಮಾಡಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಕಲ್ಯಾಣಿಗಳ ಬಳಿ ಪ್ರತ್ಯೇಕ ತಂಡಗಳನ್ನು ನಿಯೋಜಿಸಿ ಹಾಗೂ ನುರಿತ ಈಜುಗಾರರಿರಬೇಕು ಎಂದು ಹೇಳಿದರು.

ಹೆಚ್ಚುವರಿ ಸಿಬ್ಬಂದಿ ನಿಯೋಜನೆ : ನಿಮಜ್ಜನ ಮಾಡುವ ವೇಳೆ ಮೂರ್ತಿಗಳಿಗೆ ಯಾವುದೇ ರೀತಿಯ ವಿಘ್ನ, ಲೋಪವಾಗದಂತೆ ನೋಡಿಕೊಳ್ಳಲು ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಾಡಿಕೊಳ್ಳಿ. ನಿಮಜ್ಜನ ಸ್ಥಳದಲ್ಲಿ ಭದ್ರತಾ ದೃಷ್ಟಿಯಿಂದ ಪಾಲಿಕೆ ಅಧಿಕಾರಿಗಳು, ಮಾರ್ಷಲ್​ಗಳ ನಿಯೋಜನೆ, ಬ್ಯಾರಿಕೇಡಿಂಗ್, ದೀಪಗಳ ಅಳವಡಿಕೆ, ಸಿಸಿ ಟಿವಿ, ಕ್ರೇನ್ ಸೇರಿದಂತೆ ಇನ್ನಿತರೆ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಂಡು ಯಾವುದೇ ರೀತಿಯ ಸಮಸ್ಯೆ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಅವರು ನಿರ್ದೇಶಿಸಿದರು.

ಮೊಬೈಲ್​ ಟ್ಯಾಂಕರ್ ವ್ಯವಸ್ಥೆ ಕಲ್ಪಿಸಿ: ಕಲ್ಯಾಣಿಗಳ ವ್ಯವಸ್ಥೆ ಇಲ್ಲದಿರುವ ಕಡೆ ಹೆಚ್ಚುವರಿಯಾಗಿ ತಾತ್ಕಾಲಿಕ ಮೊಬೈಲ್ ಟ್ಯಾಂಕರ್​ಗಳ ವ್ಯವಸ್ಥೆ ಮಾಡಿಕೊಳ್ಳಬೇಕು. ಗಣೇಶ ಮೂರ್ತಿಗಳನ್ನು ನಿಮಜ್ಜನೆ ಮಾಡಲು ತೆರಳುವ ಮಾರ್ಗದಲ್ಲಿ ವಿದ್ಯುತ್ ದೀಪಗಳು ಸರಿಯಾಗಿರುವಂತೆ ನೋಡಿಕೊಳ್ಳಬೇಕು. ನಿಮಜ್ಜನ ಸ್ಥಳದಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ಘನತ್ಯಾಜ್ಯ ವಿಭಾಗದಿಂದ ತ್ವರಿತವಾಗಿ ವಿಲೇವಾರಿ ಮಾಡಲು ಗಿರಿನಾಥ್ ತಿಳಿಸಿದರು.

ಸಭೆಯಲ್ಲಿ ಎಲ್ಲಾ ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರು, ಆಡಳಿತದ ವಿಭಾಗದ ಉಪ ಆಯುಕ್ತರು, ಮುಖ್ಯ ಅಭಿಯಂತರರು ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಗಣೇಶನಿಗೂ ಸಾವರ್ಕರ್​​ಗೂ ಏನು ಸಂಬಂಧ?: ಡಿ. ಕೆ ಶಿವಕುಮಾರ್ ಪ್ರಶ್ನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.