ETV Bharat / state

'ನೀವು ಮಾನಸಿಕ ಸ್ಥಿಮಿತ ಕಳೆದುಕೊಂಡಂತಿದೆ, ಬೇಗ ಗುಣಮುಖರಾಗಿ': ಹೆಚ್‌ಡಿಕೆಗೆ ಸಿದ್ದರಾಮಯ್ಯ ತಿರುಗೇಟು - ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ

ಸಚಿವ ಚಲುವರಾಯಸ್ವಾಮಿ ವಿರುದ್ಧ ಬರೆದಿದ್ದಾರೆ ಎನ್ನಲಾದ ಪತ್ರದ ಸಲುವಾಗಿ ಸಿಎಂ ಸಿದ್ದರಾಮಯ್ಯ ಹಾಗು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಡುವೆ ಟ್ವೀಟ್ ವಾರ್ ನಡೆಯುತ್ತಿದೆ.

Tweet war between CM, former CM HDK
ಸಿಎಂ VS ಮಾಜಿ ಸಿಎಂ ಹೆಚ್​ಡಿಕೆ ಮಧ್ಯೆ ಟ್ವೀಟ್ ಸಮರ
author img

By

Published : Aug 8, 2023, 9:53 PM IST

ಬೆಂಗಳೂರು: ''ಚುನಾವಣಾ ಸೋಲಿನ ಆಘಾತದಿಂದ ನೀವು ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ಕಾಣುತ್ತಿದೆ'' ಎಂದು ಸಿಎಂ ಸಿದ್ದರಾಮಯ್ಯ ಮಾಜಿ ಸಿಎಂ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ. ಸಚಿವ ಚಲುವರಾಯಸ್ವಾಮಿ ವಿರುದ್ಧ ದೂರಿನ ಪತ್ರದ ಬಗ್ಗೆ ತಮ್ಮ ವಿರುದ್ಧ ಹೆಚ್​ಡಿಕೆ ಮಾಡಿದ ತೀಕ್ಷ್ಣ ಟ್ವಿಟ್​ಗೆ ಪ್ರತಿಕ್ರಿಯಿಸಿದ ಅವರು, ''ಹೆಚ್.ಡಿ. ಕುಮಾರಸ್ವಾಮಿ ಅವರೇ, ಇತ್ತೀಚೆಗೆ ನೀವು ನನ್ನ ವಿರುದ್ಧ ಮಾಡುತ್ತಿರುವ ವೈಯಕ್ತಿಕ ಮಟ್ಟದ ಆರೋಪಗಳು ಮತ್ತು ಬಳಸುತ್ತಿರುವ ಭಾಷೆಯನ್ನು ಗಮನಿಸಿದರೆ ಚುನಾವಣಾ ಸೋಲಿನ ಆಘಾತದಿಂದಾಗಿ ನೀವು ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ಕಾಣುತ್ತಿದೆ'' ಎಂದು ಕಟುವಾಗಿ ಟೀಕಿಸಿದ್ದಾರೆ. ''ಶೀಘ್ರವಾಗಿ ಗುಣಮುಖರಾಗಿ ಎಂದಷ್ಟೇ ನಾನು ಹಾರೈಸಬಲ್ಲೆ. ಇನ್ನು ನೀವು ಪ್ರಸ್ತಾಪಿಸಿರುವ ಶಾಸಕರ ಪತ್ರದ ನಕಲಿ- ಅಸಲಿ ವಿಚಾರ ಶೀಘ್ರದಲ್ಲಿಯೇ ತನಿಖೆಯಿಂದ ಹೊರಬೀಳಲಿದೆ'' ಎಂದು ತಿಳಿಸಿದ್ದಾರೆ.

  • ಸನ್ಮಾನ್ಯ @hd_kumaraswamy ಅವರೇ,

    ಇತ್ತೀಚೆಗೆ ನೀವು ನನ್ನ ವಿರುದ್ಧ ಮಾಡುತ್ತಿರುವ ವೈಯಕ್ತಿಕ ಮಟ್ಟದ ಆರೋಪಗಳು ಮತ್ತು ಬಳಸುತ್ತಿರುವ ಭಾಷೆಯನ್ನು ಗಮನಿಸಿದರೆ ಚುನಾವಣಾ ಸೋಲಿನ ಆಘಾತದಿಂದಾಗಿ ನೀವು ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡಂತೆ ಕಾಣುತ್ತಿದೆ.
    ಶೀಘ್ರವಾಗಿ ಗುಣಮುಖರಾಗಿ ಎಂದಷ್ಟೇ ನಾನು ಹಾರೈಸಬಲ್ಲೆ.

    ಇನ್ನು ನೀವು… https://t.co/dXtacPzEHE

    — Siddaramaiah (@siddaramaiah) August 8, 2023 " class="align-text-top noRightClick twitterSection" data=" ">

ಟ್ವೀಟ್ ವಾರ್: ನಿನ್ನೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ''ಚಲುವರಾಯಸ್ವಾಮಿ ವಿರುದ್ಧ ಮಂಡ್ಯ ಜಿಲ್ಲೆಯ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂಬರ್ಥದಲ್ಲಿ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪತ್ರ ನಕಲಿ ಎಂಬುದು ಬಯಲಾಗಿದೆ. ಅಂತಹ ಅಧಿಕಾರಿಗಳು ಯಾರೂ ಜಿಲ್ಲೆಯಲ್ಲಿ ಇಲ್ಲ ಎಂದು ಮಂಡ್ಯದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ. ಹೀಗಿದ್ದರೂ ಈ ಸಂಬಂಧ ಪರಿಶೀಲನೆ ನಡೆಸಿ, ಅಗತ್ಯ ಕಂಡುಬಂದಲ್ಲಿ ತನಿಖೆ ನಡೆಸುತ್ತೇವೆ. ಬಿಜೆಪಿ ರಾಜ್ಯ ನಾಯಕರೇ ಇಂತಹ ನಕಲಿ ಪತ್ರವನ್ನು ಇಟ್ಟುಕೊಂಡು ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ನೀವೇ ಇದರ ಸೃಷ್ಟಿಕರ್ತರೋ? ಅಥವಾ ನಿಮ್ಮ ಬ್ರದರ್​ರೋ?'' ಎಂದು ಹೆಚ್.ಡಿ.ಕುಮಾರಸ್ವಾಮಿಗೆ ಟಾಂಗ್ ನೀಡಿದ್ದರು.

ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್: ಇದಕ್ಕೆ ಇಂದು ಬೆಳಿಗ್ಗೆ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ತಿರುಗೇಟು ನೀಡಿ, ''ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ. ಸಚಿವರ ಸುಲಿಗೆಯನ್ನೇ ಸಮರ್ಥನೆ ಮಾಡಿಕೊಳ್ಳುವ 'ಸಿದ್ದಕಲೆ' ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ'' ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

  • ನಿಮ್ಮ ರಾಜಕೀಯ ಬದುಕಿಗೆ ಬ್ಲ್ಯಾಕ್'ಮೇಲೇ ಬಂಡವಾಳ. ಗೃಹ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ 'ಅಪ್ಪಯ್ಯ ಮತ್ತು ಅತೀಂದ್ರನ ಆಟಾಟೋಪ' ಕಂಡು ಹೌಹಾರಿದವರು ಯಾರು? ವರ್ಗಾವಣೆ ಪಟ್ಟಿಗೆ ಅಲ್ಲಿ ಬಿದ್ದ ಟಿಕ್ಕುಗಳ ಲೆಕ್ಕ ಹೇಳಬೇಕಾ ಟಿಕ್ ಟಿಕ್ ಸಿದ್ದರಾಮಯ್ಯ?? 5/5

    — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 8, 2023 " class="align-text-top noRightClick twitterSection" data=" ">

''ನಕಲಿ ಪತ್ರ ಎಂದಾದರೆ ರಾಜ್ಯಪಾಲರ ಕಾರ್ಯಾಲಯ ನಕಲಿ ಪತ್ರದ ಮೇರೆಗೆ ಕ್ರಮ ಜರುಗಿಸಿ ಎಂದು ಷರಾ ಬರೆದಿದೆಯೇ? ಸುಳ್ಳಿನ ಪತ್ರಕ್ಕೆ ಮಾನ್ಯ ರಾಜ್ಯಪಾಲರು ಸ್ಪಂದಿಸಿದ್ದಾರೆಯೇ? ರಾಜಧರ್ಮದ ಪ್ರವಚನಕಾರರೇ ರಾಜಭವನದ ಪಾವಿತ್ರ್ಯವನ್ನೇ ಶಂಕಿಸುವುದು ತರವೇ? ಸ್ವಯಂ ಘೋಷಿತ ನಕಲಿ ಸಂವಿಧಾನ ತಜ್ಞನಿಗೆ ಇದು ಭೂಷಣವಲ್ಲ. ಕಂಡೋರ ಭುಜದ ಮೇಲೆ ಬಂದೂಕಿಟ್ಟು ಇನ್ನೊಬ್ಬರ ರಾಜಕೀಯ ಜೀವನ ಎತ್ತಿಬಿಡುವ ನಿಮ್ಮಂಥ 'ಎತ್ತುವಳಿ ಗಿರಾಕಿ'ಗೆ ನಕಲಿಪತ್ರಗಳ ಸೃಷ್ಟಿ ಬೆಣ್ಣೆ ಕಡಿದಷ್ಟೇ ಸಲೀಸು. ಮತ್ತೊಬ್ಬರ ಶ್ರಮದ ಬೆವರೇ ನಿಮ್ಮ ಸ್ವಾರ್ಥ ರಾಜಕಾರಣಕ್ಕೆ ಹವಿಸ್ಸು ಎಂದು ಹೇಳಿರುವ ಕುಮಾರಸ್ವಾಮಿ ಅವರು; ನಿಮ್ಮ ಸಚಿವರ ವಿರುದ್ಧ ನಿಮ್ಮ ಕಾಂಗ್ರೆಸ್ ಶಾಸಕರೇ ಬರೆದ ಪತ್ರವನ್ನೇ ನಕಲಿ ಎಂದು ಬಿಂಬಿಸಿದ 'ನಕಲಿರಾಮ'ನ ಉಪ್ಪುಹುಳಿ ಖಾರದ ಬಗ್ಗೆ ನನಗೆ ಗೊತ್ತಿಲ್ಲದ್ದೇನಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಉಗಿದು ಉಪ್ಪಾಕಿದ ಮೇಲೆ ಆ ನಕಲಿ ಪತ್ರ 'ಅಸಲಿ'ಯಾದ ಕಥೆಯ ಹಕೀಕತ್ತು ಏನಿರಬಹುದು ಸಿಎಂ ಸಾಹೇಬರೇ'' ಎಂದು ಪ್ರಶ್ನಿಸಿದ್ದಾರೆ.

''ನಿಮ್ಮ ರಾಜಕೀಯ ಬದುಕಿಗೆ ಬ್ಲ್ಯಾಕ್​ಮೇಲ್​ ಬಂಡವಾಳ ಆಗಿದೆ. ಗೃಹ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ 'ಅಪ್ಪಯ್ಯ ಮತ್ತು ಅತೀಂದ್ರನ ಆಟಾಟೋಪ' ಕಂಡು ಹೌಹಾರಿದವರು ಯಾರು? ವರ್ಗಾವಣೆ ಪಟ್ಟಿಗೆ ಅಲ್ಲಿ ಬಿದ್ದ ಟಿಕ್ಕುಗಳ ಲೆಕ್ಕ ಹೇಳಬೇಕಾ ಟಿಕ್ ಟಿಕ್ ಸಿದ್ದರಾಮಯ್ಯ?'' ಎಂದು ಎಚ್ಚರಿಕೆ ನೀಡಿದ್ದರು.

  • ಮಂಡ್ಯ ಜಿಲ್ಲೆಯ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂಬರ್ಥದಲ್ಲಿ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪತ್ರ ನಕಲಿಯಾದುದು ಎಂದು ಬಯಲಾಗಿದೆ.

    ಅಂತಹ ಅಧಿಕಾರಿಗಳು ಯಾರು ಜಿಲ್ಲೆಯಲ್ಲಿ ಇಲ್ಲ ಎಂದು ಮಂಡ್ಯದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.

    ಹೀಗಿದ್ದರೂ ಈ ಸಂಬಂಧ ಪರಿಶೀಲನೆ ನಡೆಸಿ, ಅಗತ್ಯ ಕಂಡುಬಂದಲ್ಲಿ… pic.twitter.com/kPR5TQColK

    — Siddaramaiah (@siddaramaiah) August 7, 2023 " class="align-text-top noRightClick twitterSection" data=" ">

ಸಿಎಂ ಸಿದ್ದರಾಮಯ್ಯ ಟ್ವೀಟ್ ತಿರುಗೇಟು: ಇದಕ್ಕೆ ಪ್ರತಿಯಾಗಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರತಿಕ್ರಿಯಿಸುತ್ತಾ, ''ಚುನಾವಣಾ ಸೋಲಿನ ಆಘಾತದಿಂದ ನೀವು ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ಕಾಣುತ್ತಿದೆ. ಇತ್ತೀಚೆಗೆ ನೀವು ನನ್ನ ವಿರುದ್ಧ ಮಾಡುತ್ತಿರುವ ವೈಯಕ್ತಿಕ ಮಟ್ಟದ ಆರೋಪಗಳು ಮತ್ತು ಬಳಸುತ್ತಿರುವ ಭಾಷೆಯನ್ನು ಗಮನಿಸಿದರೆ ಚುನಾವಣಾ ಸೋಲಿನ ಆಘಾತದಿಂದಾಗಿ ನೀವು ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ಕಾಣುತ್ತಿದೆ. ಶೀಘ್ರವಾಗಿ ಗುಣಮುಖರಾಗಿ ಎಂದಷ್ಟೇ ನಾನು ಹಾರೈಸಬಲ್ಲೆ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಇನ್ಮುಂದೆ ಬೆಂಗಳೂರಲ್ಲಿ ಫ್ಲೆಕ್ಸ್, ಹೋರ್ಡಿಂಗ್ಸ್ ಹಾಕಿದ್ರೆ 50 ಸಾವಿರ ರೂಪಾಯಿ ದಂಡ: ಡಿಸಿಎಂ ಡಿ ಕೆ ಶಿವಕುಮಾರ್​ ಎಚ್ಚರಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.