ETV Bharat / state

ಸಿದ್ದರಾಮಯ್ಯ ತಮ್ಮ ಊಸರವಳ್ಳಿ ರಾಜಕಾರಣದ ಬಣ್ಣ ಬಯಲು ಮಾಡಿಕೊಂಡಿದ್ದಾರೆ: ಹೆಚ್​ಡಿಕೆ - Kumaraswamy spark against Siddaramaiah

ಪಕ್ಷಾಂತರ ಮಾಡಿ ಅಧಿಕಾರ ಹಿಡಿದ ನೀವು ಆ ಪಕ್ಷದಲ್ಲಿ ಬಿತ್ತಿದ ಬೆಳೆ ಮತ್ತು ಕಳೆ ಏನೆಂಬುದನ್ನು ನಿಮ್ಮನ್ನ ಆಲಂಗಿಸಿಕೊಂಡ ಪಕ್ಷದವರು ಈಗ ಅನುಭವಿಸುತ್ತಿದ್ದಾರೆ. ನಿಮ್ಮ ಸ್ವಾರ್ಥ ರಾಜಕಾರಣ ಕುಟಿಲ ತಂತ್ರಗಳನ್ನು ಮರೆಮಾಚಿಕೊಳ್ಳಲು ಬೆಳೆದ ಪಕ್ಷಕ್ಕೆ ಮಗ್ಗುಲಲ್ಲಿ ಇದು ಬಾಕು ಹಾಕಿದವರ ಮಾರ್ಜಾಲ ಉಪದೇಶ ಯಾರಿಗೆ ಸಹ್ಯವಾದೀತು?..

Tweet war between H D Kumaraswamy and Siddaramaiah
ಹೆಚ್​ಡಿಕೆ, ಸಿದ್ದರಾಮಯ್ಯ
author img

By

Published : Sep 20, 2020, 3:26 PM IST

ಬೆಂಗಳೂರು: ಜೆಡಿಎಸ್ ಪಕ್ಷದ ವಿರುದ್ಧ ಶನಿವಾರ ಆಕ್ರೋಶ ಹೊರಹಾಕಿದ್ದ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿರುವ ಹೆಚ್​ಡಿಕೆ ಅಧಿಕಾರ ಲಾಲಸೆಯಿಂದ ಕಾಂಗ್ರೆಸ್​ಗೆ ಜಿಗಿದ ಸಿದ್ದರಾಮಯ್ಯ ಅವರು 'ಜೆಡಿಎಸ್ ಅವಕಾಶವಾದಿ ಪಕ್ಷ' ಎನ್ನುವ ಮೂಲಕ ತಮ್ಮ ಊಸರವಳ್ಳಿ ರಾಜಕಾರಣದ ನಿಜ ಬಣ್ಣ ಬಯಲು ಮಾಡಿಕೊಂಡಿದ್ದಾರೆ ಎಂದಿದ್ದಾರೆ. ಜೆಡಿಎಸ್ ಪಕ್ಷದಲ್ಲಿದ್ದಾಗ ಅಧಿಕಾರ, ಸ್ಥಾನ-ಮಾನಗಳನ್ನು ಅನುಭವಿಸಿ ತಮ್ಮ ಬೆಂಬಲಿಗರೊಂದಿಗೆ ಗಂಟು-ಮೂಟೆ ಕಟ್ಟಿಕೊಂಡು ಅಧಿಕಾರದ ಆಸೆಗಾಗಿ, ಅವಕಾಶವಾದಿ ಹಾದಿ ಹಿಡಿದ ಕೃತಘ್ನಗೇಡಿತನದ ಸಿದ್ದರಾಮಯ್ಯ ಅವರಿಂದ ನಮ್ಮ ಪಕ್ಷ ಸ್ವಾಭಿಮಾನದ ಪಾಠ ಕಲಿಯಬೇಕಿಲ್ಲ.

ನಮ್ಮ ಸ್ವಾಭಿಮಾನದ ಪ್ರಲಾಪ ಮಠದೊಳಗಿನ ಬೆಕ್ಕು ಮುಖವಾಡದಂತಿದೆ. ಕಾಂಗ್ರೆಸ್‌ ಮುಖ್ಯಮಂತ್ರಿಯಾಗಿದ್ದಾಗಲೇ ಬಹಿರಂಗವಾಗಿ ಕಾಂಗ್ರೆಸ್ ಪಕ್ಷ ನಿರ್ನಾಮ ವಾಗಬೇಕು. ಅದನ್ನು ಬುಡಸಹಿತ ಕಿತ್ತೊಗೆಯಬೇಕು ಎಂಬ ಮಾತನ್ನು ಉದ್ಧರಿಸಿದ ನೀವು ಎಂತಹ ಸ್ವಾರ್ಥ ಮತ್ತು ಎಡಬಿಡಂಗಿತನದ ರಾಜಕಾರಣ ಎಂಬುದು ಇಡೀ ನಾಡಿಗೆ ಗೊತ್ತಿದೆ ಎಂದು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.

  • ತನುವಿನೊಳು ಕಪಟ
    ಮನದೊಳು ಮರ್ಕಟ
    ಆಚಾರ ಲಿಂಗವ ಭಂಗಗೊಳಿಸಿ
    ಸಂಗ ಕೇಳಿಯ ಮನದ
    ಮುಂದಣ ಆಸೆಯ ಮತಿಗೇಡಿ
    ನೀನು ಶರಣನೆಂದು ಕೊಂಡೊಡೆ
    ಲಿಂಗ - ಜಂಗಮ ಕೂಡಲ ಸಂಗನು ಮುನಿದು
    ತಲೆ ಹೋಳಾದೀತು.

    7/7

    — H D Kumaraswamy (@hd_kumaraswamy) September 20, 2020 " class="align-text-top noRightClick twitterSection" data=" ">

ಜೆಡಿಎಸ್ ಏನು ಕಲಿಯಬೇಕಾದ್ದಿಲ್ಲ. ಅಧಿಕಾರದ ನಿರ್ಮೋಹ, ಸ್ವಾಭಿಮಾನಕ್ಕೆ ಕಟ್ಟುಬಿದ್ದು ದೇವೇಗೌಡರು ಪ್ರಧಾನಿ ಹುದ್ದೆಯನ್ನೇ ತ್ಯಜಿಸಿ ಬಂದರು. ಅಧಿಕಾರ ಉಳಿಸಿಕೊಳ್ಳಬೇಕೆಂದ್ರೆ ಪ್ರಧಾನಿಯಾಗಿ ಮುಂದುವರಿಯಬಹುದಿತ್ತು. ದೇವೇಗೌಡರ ಸ್ವಾಭಿಮಾನಿ ರಾಜಕಾರಣವನ್ನು ಇಷ್ಟು ಬೇಗ ಮರೆತು ಬಿಟ್ಟೀರಾ? ಆತ್ಮವಂಚನೆ ರಾಜಕಾರಣಿಯಿಂದ ಜೆಡಿಎಸ್ ಕಲಿಯುವುದು ಏನೇನು ಇಲ್ಲ. ಜೆಡಿಎಸ್ ಅಧಿಕಾರದಲ್ಲಿದ್ದಾಗಲೇ ಜನರ ಕಷ್ಟಕಾರ್ಪಣ್ಯಗಳು ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿದೆ. ಅಧಿಕಾರದ ಮದ ಮತ್ತು ದುರಹಂಕಾರವನ್ನು ಎಂದೂ ಪ್ರದರ್ಶನ ಮಾಡಿಲ್ಲ ಎಂದು ಹರಿಹಾಯ್ದಿದ್ದಾರೆ.

ಪಕ್ಷಾಂತರ ಮಾಡಿ ಅಧಿಕಾರ ಹಿಡಿದ ನೀವು ಆ ಪಕ್ಷದಲ್ಲಿ ಬಿತ್ತಿದ ಬೆಳೆ ಮತ್ತು ಕಳೆ ಏನೆಂಬುದನ್ನು ನಿಮ್ಮನ್ನ ಆಲಂಗಿಸಿಕೊಂಡ ಪಕ್ಷದವರು ಈಗ ಅನುಭವಿಸುತ್ತಿದ್ದಾರೆ. ನಿಮ್ಮ ಸ್ವಾರ್ಥ ರಾಜಕಾರಣ ಕುಟಿಲ ತಂತ್ರಗಳನ್ನು ಮರೆಮಾಚಿಕೊಳ್ಳಲು ಬೆಳೆದ ಪಕ್ಷಕ್ಕೆ ಮಗ್ಗುಲಲ್ಲಿ ಇದು ಬಾಕು ಹಾಕಿದವರ ಮಾರ್ಜಾಲ ಉಪದೇಶ ಯಾರಿಗೆ ಸಹ್ಯವಾದೀತು? ಎಂದಿರುವ ಹೆಚ್​ಡಿಕೆ, ತನುವಿನೊಳು ಕಪಟ, ಮನದೊಳು ಮರ್ಕಟ, ಆಚಾರ ಲಿಂಗವ ಭಂಗಗೊಳಿಸಿ, ಸಂಗ ಕೇಳಿ ಮನದ ಮುಂದಣ ಆಸೆಯ ಮತಿಗೇಡಿ ನೀನು ಶರಣನೆಂದು ಕೊಂಡೋಡೆ ಲಿಂಗ - ಜಂಗಮ ಕೂಡಲಸಂಗನ ಮುನಿದು ತಲೆ ಹೋಳಾದೀತು ಎಂಬ ವಚನದ ಮೂಲಕ ತಮ್ಮ ಟ್ವೀಟ್ ಮುಗಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.