ETV Bharat / state

ಬಾಡಿಗೆ ಕಟ್ಟಡಗಳಲ್ಲಿರುವ ಸರ್ಕಾರಿ ಕಚೇರಿಗಳಿಗಾಗಿ 25 ಮಹಡಿಗಳ ಟ್ವಿನ್ ಟವರ್: ಕಾರಜೋಳ - ಕರ್ನಾಟಕ ರಾಜಕೀಯ ಸುದ್ದಿ

ಟ್ವಿನ್ ಟವರ್ ನಿರ್ಮಾಣದಿಂದ ಬಾಡಿಗೆ ಕಟ್ಟಡಗಳಲ್ಲಿರುವ ಎಲ್ಲಾ ಸರ್ಕಾರಿ ಕಚೇರಿಗಳು ಒಂದೇ ಸೂರಿನಡಿ ಬರಲಿವೆ. ಈ ಕಟ್ಟಡದಿಂದ ಸಾರ್ವಜನಿಕರು ಸುಲಲಿತವಾಗಿ ಏಕಕಾಲದಲ್ಲೇ ತಮಗೆ ಅಗತ್ಯವಿರುವ ಕಚೇರಿಗಳಿಗೆ ಭೇಟಿಯಾಗಿ ವಿವಿಧ ಸೇವೆಗಳನ್ನು ಪಡೆಯಲು ಅನುಕೂಲವಾಗುತ್ತದೆ ಎಂದು ಡಿಸಿಎಂ ತಿಳಿಸಿದರು.

DCM Karjol
ಡಿಸಿಎಂ ಕಾರಜೋಳ
author img

By

Published : Aug 27, 2020, 5:00 PM IST

ಬೆಂಗಳೂರು : ನಗರದಲ್ಲಿ ಬಾಡಿಗೆ ಕಟ್ಟಡಗಳಲ್ಲಿರುವ ಸರ್ಕಾರಿ ಕಚೇರಿಗಳನ್ನು ಒಂದೇ ಸೂರಿನಡಿ ತರುವ ಉದ್ದೇಶದಿಂದ ಆನಂದ್ ರಾವ್ ಸರ್ಕಲ್ ಬಳಿ 25 ಮಹಡಿಗಳ ಟ್ವಿನ್ ಟವರ್ ನಿರ್ಮಿಸು ಪ್ರಸ್ತಾವನೆಯನ್ನು ಸಿದ್ದಪಡಿಪಡಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಈ ಪ್ರಸ್ತಾವನೆಯ ಪ್ರಾತ್ಯಕ್ಷಿಕೆಯ ಮೂಲಕ ಚರ್ಚಿಸಿದ ಅವರು, ರಾಷ್ಟ್ರೀಯ ಕಟ್ಟಡ ನಿರ್ಮಾಣ ನಿಗಮ (ಎನ್‍ಬಿಸಿಸಿ)ವು ಪ್ರಸ್ತಾವನೆಯನ್ನು ಸಿದ್ಧಪಡಿಸಿದೆ. ಎನ್​ಬಿಸಿಸಿಯು ಡಿಪಿಎಆರ್ ಅನ್ನು ಸಿದ್ಧಪಡಿಸಲಿದೆ. ಪ್ರಸ್ತುತವಾಗಿ ಸಿದ್ಧಪಡಿಸಿರುವ ಪ್ರಸ್ತಾವನೆಯು ಎಫ್​ಎಆರ್ 2.5 ಅನುಪಾತದಲ್ಲಿದೆ. ಆ ಪ್ರದೇಶದಲ್ಲಿ ಮೆಟ್ರೋ ಕಾಮಗಾರಿಗಳು ಎಫ್​ಎಆರ್ 4.0 ಅನುಪಾತದಲ್ಲಿ ಇರುವುದರಿಂದ ಅದೇ ಮಾದರಿಯಲ್ಲಿ ಟ್ವಿನ್ ಟವರ್​ ಅನ್ನು ನಿರ್ಮಿಸಬೇಕಿದೆ. ಈ ಪ್ರಸ್ತಾವನೆಯನ್ನು ಎಫ್‍ಎಆರ್ 4.0 ಅನುಪಾತದೊಂದಿಗೆ ಮರು ವಿನ್ಯಾಸಗೊಳಿಸುವಂತೆ ಸೂಚಿಸಿದರು.

ಒಡಂಬಡಿಕೆ ಕರಡು ಪ್ರತಿಯನ್ನು ಸಿದ್ಧಪಡಿಸಿ ಆರ್ಥಿಕ ಇಲಾಖೆ ಹಾಗೂ ಕಾನೂನು ಇಲಾಖೆಯ ಸಹಮತಿಯೊಂದಿಗೆ ಅನುಮೋದನೆ ಪಡೆಯಬೇಕು. ಈ ಪ್ರಸ್ತಾವನೆಯ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಮುಂದಿನ 15 ದಿನಗಳೊಳಗೆ ಸಚಿವ ಸಂಪುಟದ ಅನುಮೋದನೆ ಪಡೆಯಲು ಕ್ರಮ ಕೈಗೊಳ್ಳಬೇಕು. ಒಡಂಬಡಿಕೆಯ ಕರಡನ್ನು ಸಚಿವ ಸಂಪುಟದ ಅನುಮೋದನೆ ಪಡೆಯುವಂತೆ ಕ್ರಮ ಕೈಗೊಳ್ಳಬೇಕು. ಈ ಟ್ವಿನ್ ಟವರ್ ನಿರ್ಮಾಣದಿಂದ ಬಾಡಿಗೆ ಕಟ್ಟಡಗಳಲ್ಲಿರುವ ಎಲ್ಲಾ ಸರ್ಕಾರಿ ಕಚೇರಿಗಳು ಒಂದೇ ಸೂರಿನಡಿ ಬರಲಿದೆ. ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ಸಹಕಾರಿಯಾಗಲಿದೆ. ಇದರಿಂದ ಸಾರ್ವಜನಿಕರು ಸುಲಲಿತವಾಗಿ ಏಕಕಾಲದಲ್ಲೇ ತಮಗೆ ಅಗತ್ಯವಿರುವ ಕಚೇರಿಗಳಿಗೆ ಭೇಟಿಯಾಗಿ ಸೇವೆಯನ್ನು ಪಡೆಯಲು ಅನುಕೂಲವಾಗುತ್ತದೆ ಎಂದು ಡಿಸಿಎಂ ಹೇಳಿದರು.

ಎನ್​ಬಿಸಿಸಿಯ ಡಿಜಿಎಂ ವೇಣುಗೋಪಾಲ್ ಹಾಗೂ ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಗುರುಪ್ರಸಾದ್ ಪ್ರಸ್ತಾವನೆ ಕುರಿತು ವಿಸ್ತೃತವಾಗಿ ವಿವರಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.