ಬೆಂಗಳೂರು: ಮೋಜು ಜೀವನ ನಡೆಸಲು ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಅಂತಾರಾಜ್ಯ ಖದೀಮರನ್ನು ಸುದ್ದುಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ಕೇರಳ ಮೂಲದ ಅಭಿಜಿತ್ ಹಾಗೂ ರಶೀದ್ ಬಂಧಿತ ಆರೋಪಿಗಳು. ನೆರೆಯ ಆಂಧ್ರಪ್ರದೇಶದಿಂದ ನಗರಕ್ಕೆ ಗಾಂಜಾ ತಂದು, ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾಫ್ಟ್ವೇರ್ ನೌಕರರನ್ನು ಗುರಿಯಾಗಿಸಿಕೊಂಡು ಮಾರಾಟ ಮಾಡುತ್ತಿದ್ದರು. ಸುದ್ದಗುಂಟೆಪಾಳ್ಯ ಠಾಣಾ ವ್ಯಾಪ್ತಿಯ ಸ್ಕಾರ್ಪಿಯೊ ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಬಂಧಿತರಿಂದ 5.5 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿಕೊಂಡಿದ್ದಾರೆ. ಆರೋಪಿಗಳು ಈ ಹಿಂದೆ ಗಾಂಜಾ ಮಾರಾಟ ಮಾಡಿ ಅಕ್ರಮವಾಗಿ ಹಣ ಸಂಪಾದನೆ ಮಾಡಿ ಮೋಜು ಜೀವನ ನಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.