ETV Bharat / state

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಬಂದಿದ್ದ ಇಬ್ಬರು ಬಾಂಗ್ಲಾದೇಶ ಪ್ರಜೆಗಳ ಬಂಧನ - ಇಬ್ಬರು ಅಕ್ರಮ ಬಾಂಗ್ಲಾ ಪ್ರಜೆಗಳ ಬಂಧನ

ಅಕ್ರಮವಾಗಿ ಬೆಂಗಳೂರಿಗೆ ಬಂದಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

bengaluru
ದೇವನಹಳ್ಳಿ
author img

By

Published : Apr 10, 2023, 10:08 AM IST

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ) : ಅಕ್ರಮವಾಗಿ ಭಾರತೀಯ ಪಾಸ್‌ಪೋರ್ಟ್ ಮಾಡಿಕೊಂಡು ಬಾಂಗ್ಲಾದೇಶದಿಂದ ಬೆಂಗಳೂರಿಗೆ ಬಂದಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಲಿಯಾಕತ್ ಆಲಿ ಮತ್ತು ರಿಜಾಉಲ್ ಶೇಕರ್ ಬಂಧಿತರು.

ಆರೋಪಿಗಳು ಏಪ್ರಿಲ್​ 2 ರಂದು ಸಿಂಗಾಪುರ್‌ನಿಂದ ಬೆಂಗಳೂರಿಗೆ ಇಂಡಿಗೋ ವಿಮಾನದಲ್ಲಿ ಬಂದಿದ್ದರು. ಈ ಮಾಹಿತಿ ಮೇರೆಗೆ ಇಬ್ಬರನ್ನು ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಬಂಧಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸ್​ ವಿಚಾರಣೆಯಲ್ಲಿ ಆರೋಪಿಗಳಾದ ರಿಯಾಕತ್ ಆಲಿಯು ಲಿಯಾಕತ್ ಶೇಖ್ ಮತ್ತು ರಿಜಾಉಲ್ ಶೇಕ್ ಎಂಬಾತ ರೀಗನ್ ಶೇಖ್ ಎಂಬ ಹೆಸರಿನಲ್ಲಿ ಭಾರತೀಯ ಪಾಸ್​ಪೋರ್ಟ್ ಪಡೆದು ಬೆಂಗಳೂರಿಗೆ ಬಂದಿರುವುದು ಗೊತ್ತಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಚಿಕ್ಕಮಗಳೂರು : ಅಸ್ಸೋಂ ಕೂಲಿ ಕಾರ್ಮಿಕರಿಂದ ತೋಟದ ಮಾಲೀಕನ ಮೇಲೆ ಹಲ್ಲೆಗೆ ಯತ್ನ ಆರೋಪ

ಕಳೆದ ವರ್ಷದ ಜೂನ್​ ತಿಂಗಳಿನಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾ ನಿವಾಸಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು. ಎನ್ ಆರ್ ಪುರ ತಾಲೂಕಿನ ಸಿಂಸೆಯ ಭೋವಿ ಕಾಲೋನಿಯಲ್ಲಿ ಪೊಲೀಸರು ದಾಳಿ ನಡೆಸಿ ಅಬ್ದುಲ್, ರಹುಲ್, ಮೋಮಿನ್ ಅಲಿ, ಸಲೀಂ ಎಂಬ ನಾಲ್ಕು ಜನ ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದಿದ್ದರು. ಪಶ್ಚಿಮ ಬಂಗಾಳದಿಂದ ಕೂಲಿಗಾಗಿ ಭಾರತಕ್ಕೆ ಈ ನಾಲ್ವರು ಆಗಮಿಸಿದ್ದು, ಸುಮಾರು ಎರಡ್ಮೂರು ವರ್ಷಗಳಿಂದ‌ ಚಿಕ್ಕಮಗಳೂರಿನಲ್ಲಿಯೇ ಕೆಲಸ ಮಾಡುತ್ತಿದ್ದರು. ಪೊಲೀಸರು ತಪಾಸಣೆ ನಡೆಸಿ ದಾಖಲೆ ಪರಿಶೀಲಿಸಿದಾಗ ಬಾಂಗ್ಲಾದೇಶದ ಪ್ರಜೆಗಳು ಎಂದು ತಿಳಿದು ಬಂದಿತ್ತು.

ಇದನ್ನೂ ಓದಿ : ಕಾಫಿನಾಡಲ್ಲಿ ನಾಲ್ವರು ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ; ಪೊಲೀಸರ ವಶಕ್ಕೆ

ಇನ್ನು ನಕಲಿ ಆಧಾರ್ ಕಾರ್ಡ್ ಮತ್ತು ಗುರುತಿನ ಚೀಟಿ, ಪಾಸ್‌ಪೋರ್ಟ್ ಸೃಷ್ಟಿಸಿಕೊಂಡು ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಗೆ 2019 ರ ಏಪ್ರಿಲ್​ 25 ರಂದು ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ಪ್ರಕಟಿಸಿತ್ತು. ಬಾಂಗ್ಲಾದೇಶದ ನಹೀಮ್ ಎಂಬಾತ ತಾನು ಭಾರತೀಯ ಎಂಬ ಸುಳ್ಳು ಮಾಹಿತಿ ನೀಡಿ, ಬೆಂಗಳೂರು ನಗರದಲ್ಲಿ ನೆಲೆಸಿದ್ದ. ಇದಕ್ಕೆ ಪೂರಕ ಎಂಬಂತೆ ನಕಲಿ ಗುರುತಿನ ಚೀಟಿ, ಆಧಾರ್ ಕಾರ್ಡ್ ಮತ್ತು ಪಾಸ್‌ಪೋರ್ಟ್‌ ಸೃಷ್ಟಿಸಿಕೊಂಡಿದ್ದ. ಎಫ್​ಆರ್​ಆರ್​ಒ ಅಧಿಕಾರಿಗಳು ನೀಡಿದ ಮಾಹಿತಿ ಆಧರಿಸಿ 2017ರಲ್ಲಿ ನಹೀಮ್​ನನ್ನು ಬಂಧಿಸಿದ್ದ ಹಲಸೂರು ಪೊಲೀಸರು ವಿಚಾರಣೆ ಪೂರ್ಣಗೊಳಿಸಿ ಕೋರ್ಟ್​ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ 10ನೇ ಎಸಿಎಂಎಂ ಕೋರ್ಟ್,​ ಆರೋಪಿಗೆ 3 ವರ್ಷ ಜೈಲು ಶಿಕ್ಷೆ ಹಾಗೂ 5 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿತ್ತು.

ಇದನ್ನೂ ಓದಿ : ಬೆಂಗಳೂರಲ್ಲಿ ಪತ್ನಿ ಹತ್ಯೆಗೈದಿದ್ದ ಆರೋಪಿ ಅಕ್ರಮ ಬಾಂಗ್ಲಾದೇಶದ ವಲಸಿಗ: ಪೊಲೀಸರಿಂದ ಮಾಹಿತಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.