ಬೆಂಗಳೂರು: ಚಲಿಸುತಿದ್ದ ಕ್ಯಾಂಟರ್ಗೆ ಹಿಂಬದಿಯಿಂದ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸಾವನ್ನಪ್ಪಿರುವ ದುರ್ಘಟನೆ ತಡರಾತ್ರಿ ರಾಜಾಜಿನಗರ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಧ್ಯರಾತ್ರಿ ಸುಮಾರು 12 ಗಂಟೆ ವೇಳೆ ಲಗ್ಗೆರೆಯಿಂದ ಗೊರಗುಂಟೆಪಾಳ್ಯ ಕಡೆಗೆ ರಾಜ್ಕುಮಾರ್ ಸಮಾಧಿ ಬಳಿ ಸುಮಾರು 25ರಿಂದ 30 ವರ್ಷದ ಅಸ್ಸೋಂ ಮೂಲದ ಕುಮಾರ್ ಲಿಂಬೂ ಮತ್ತು ಸುನಿಲ್ ಬಾಡಿಗೆ ಸ್ಕೂಟರ್ ಬುಕ್ ಮಾಡಿಕೊಂಡು ಬೈಕ್ನಲ್ಲಿ ಹೋಗುತ್ತಿದ್ದರು. ಇದೇ ವೇಳೆ ಮುಂದೆ ಹೋಗುತ್ತಿದ್ದ ಕ್ಯಾಂಟರ್ ವಾಹನಕ್ಕೆ ಹಿಂಬದಿಯಿಂದ ಸ್ಕೂಟರ್ ಡಿಕ್ಕಿ ಹೊಡೆದಿದೆ.
ಓದಿ: ಶಿವಮೊಗ್ಗದ ಆಟೋ ಕಾಂಪ್ಲೆಕ್ಸ್ನಲ್ಲಿ ಆಕಸ್ಮಿಕ ಬೆಂಕಿ: ರಿಪೇರಿಗೆಂದು ನಿಲ್ಲಿಸಿದ್ದ ವಾಹನಗಳು ಭಸ್ಮ
ಸ್ಕೂಟರ್ ಡಿಕ್ಕಿ ಹೊಡೆದ ರಭಸಕ್ಕೆ ಕುಮಾರ್ ಲಿಂಬು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸುನಿಲ್ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಘಟನೆ ಸಂಬಂಧ ರಾಜಾಜಿನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ