ಬೆಂಗಳೂರು: ಚಾಮರಾಜಪೇಟೆಯ ಈದ್ಗಾ ಮೈದಾದನಲ್ಲಿ ಗಣೇಶ ಪ್ರತಿಷ್ಠಾಪನೆಗೆ ಎರಡು ಸಮಿತಿಗಳು ಪೈಪೋಟಿ ನಡೆಸಿವೆ. ಬೆಂಗಳೂರು ಮಹಾನಗರ ಗಣೇಶೋತ್ಸವ ಸಮಿತಿ ಹಾಗೂ ಚಾಮರಾಜಪೇಟೆ ನಾಗರಿಕ ಒಕ್ಕೂಟದಿಂದ ಗಣೇಶ ಪ್ರತಿಷ್ಠಾಪನೆಗಾಗಿ ಅರ್ಜಿ ಸಲ್ಲಿಸಲಾಗಿದೆ.
ಈಗಾಗಲೇ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಬೇಕೇ ಬೇಡವೇ ಎಂಬುದರ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದ್ದು, ಈ ಎಲ್ಲದರ ನಡುವೆ ಮೈದಾನದ ಬಗ್ಗೆ ನಾಳೆ ಸುಪ್ರೀಂಕೋರ್ಟ್‌ನಲ್ಲಿ ವಕ್ಫ್ ಬೋರ್ಡ್ ವತಿಯಿಂದ ಅರ್ಜಿ ಸಲ್ಲಿಸಲಾಗುವುದು ಎನ್ನುತ್ತಿರುವುದು ಮತ್ತಷ್ಟು ಗೊಂದಲಕ್ಕೆ ಕಾರಣವಾಗಲಿದೆ.
ಸುಪ್ರೀಂ ತೀರ್ಪು ಸರ್ಕಾರದ ಪರವಾಗಿ ಬಂದರೆ ಈದ್ಗಾ ಮೈದಾನದಲ್ಲಿ ಯಾರು ಗಣೇಶ ಪ್ರತಿಷ್ಠಾಪನೆ ಮಾಡಬೇಕೆಂಬುದರ ಬಗ್ಗೆ ಸರ್ಕಾರ ತೀರ್ಮಾನಿಸಲಿದೆ. ಈ ಎಲ್ಲದರ ಬಗ್ಗೆ ವರದಿ ಪಡೆದು ಕಂದಾಯ ಸಚಿವ ಆರ್ ಅಶೋಕ್ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಎಲ್ಲದರ ಮಧ್ಯೆ ಈದ್ಗಾ ಮೈದಾನಕ್ಕೆ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ಅಲ್ಲಿಗೆ ಬಂದು ಹೋಗುವವರ ಚಲನವಲನಗಳ ಮೇಲೆ ನಿಗಾ ಇರಿಸಲಾಗಿದೆ.
ಇದನ್ನೂ ಓದಿ : ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್ ನೀಡಿದ ಹೈಕೋರ್ಟ್