ಬೆಂಗಳೂರು: ಪಾದರಾಯನಪುರದ 10ನೇ ಕ್ರಾಸ್ ರಸ್ತೆಯ ಪ್ರತ್ಯೇಕ ನಿವಾಸಗಳಲ್ಲಿ ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ನಿನ್ನೆ(ಮೇ 6) 48 ಜನರ ಪರೀಕ್ಷೆ ನಡೆಸಿದ್ದು, ಇಬ್ಬರಲ್ಲಿ ಕೊರೊನಾ ಸೋಂಕು ಕಂಡು ಬಂದಿದೆ. 35 ವರ್ಷದ ಮಹಿಳೆ ಹಾಗೂ 25 ವರ್ಷದ ಯುವಕನಲ್ಲಿ ಕೊರೊನಾ ದೃಢಪಟ್ಟಿದೆ.
ಈಗಾಗಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊರೊನಾ ಸೋಂಕಿತರು ಈ ಸ್ಥಳದಲ್ಲಿ ಸಂಚರಿಸಿದ್ದರಿಂದ ಸೋಂಕು ತಗುಲಿರಬಹುದು ಎಂದು ಪಾಲಿಕೆ ಆರೋಗ್ಯ ಅಧಿಕಾರಿಗಳು ಅಂದಾಜಿಸಿದ್ದಾರೆ.
ಈ ಮೂಲಕ ಪಾದರಾಯನಪುರದ ಕೊರೊನಾ ಸೋಂಕಿತರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ. 280ಕ್ಕೂ ಹೆಚ್ಚು ಜನರನ್ನು ಈಗಾಗಲೇ ಹೋಟೆಲ್ನಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಇಂದು 26 ಜನರ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪಾಲಿಕೆ ಆರೋಗ್ಯಾಧಿಕಾರಿ ಮನೋರಂಜನ್ ಹೆಗಡೆ ಮಾಹಿತಿ ನೀಡಿದರು.