ನೆಲಮಂಗಲ: ಎರಡು ಬೈಕ್ಗಳ ನಡುವೆ ಅಪಘಾತ ನಡೆದು, ಒಂದೇ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ತಂದೆ-ಮಗಳು ಸಾವನ್ನಪ್ಪಿದರೆ, ತಾಯಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡಕಮಾರನಹಳ್ಳಿಯ ಫ್ಲೈಓವರ್ ಮೇಲೆ ಇಂದು ಬೆಳಗ್ಗೆ ಘಟನೆ ನಡೆದಿದೆ. ತಂದೆ ಅಮಿತ್( 32), ಮಗಳು ಅನ್ವಿತಾ(5) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಾಯಿ ಕುಸುಮ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೃತ ಅಮಿತ್ ಗ್ರಾಫಿಕ್ಸ್ ಡಿಸೈನರ್ ಆಗಿದ್ದು ಚಿಕ್ಕಪೇಟೆಯಲ್ಲಿ ಕೆಲಸ ಮಾಡುತ್ತಿದ್ದರು. ಸಂಕ್ರಾಂತಿ ಹಬ್ಬಕ್ಕೆ ಎಂದು ಸಂಬಂಧಿಕರ ಮನೆಗೆ ಹೋಗಿದ್ದರು ಇಂದು ವಾಪಸ್ ಬೆಂಗಳೂರಿಗೆ ಬರುವಾಗ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಎಸ್ಪಿ ಪುರುಷೋತ್ತಮ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ: ವಿದ್ಯಾರ್ಥಿ ಸಾವು - ರಾಯಚೂರು:- ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡಿರುವ ದುರ್ಘಟನೆ ರಾಯಚೂರು ವಿಶ್ವವಿದ್ಯಾಲಯ ಬಳಿ ನಡೆದಿದೆ. ಯರಗೇರಾ ಗ್ರಾಮದ ಮಹಮ್ಮದ್ ಫರಹನ್(19) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದ್ದು, ಹಿಂಬದಿ ಸವಾರ ಹಾಜಿ ಹುಸೇನ್ಗೆ ಗಂಭೀರಗಾಯಗಳಾಗಿವೆ. ರಾಯಚೂರಿನಿಂದ ಯರಗೇರಾ ಕಡೆ ದ್ವಿಚಕ್ರ ವಾಹನದಲ್ಲಿ ಈ ಇಬ್ಬರು ತೆರಳುತ್ತಿದ್ದರು. ಇದೇ ವೇಳೆ ರಾಯಚೂರಿನಿಂದ ಮಂತ್ರಾಲಯಕ್ಕೆ ಹೋಗುತ್ತಿದ್ದ ಸಾರಿಗೆ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಕೆಳಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೂಡಲೇ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೇ ಮಹ್ಮದ್ ಫರಹನ್ ಎಂಬಾತನ ತಲೆಗೆ ತೀವ್ರವಾಗಿ ಪೆಟ್ಟಾದ ಕಾರಣ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಯರಗೇರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ ಅಪಘಾತ ಒಂದೇ ಕುಟುಂಬದ ನಾಲ್ವರ ಸಾವು: ನಿನ್ನೆ ಭೀಕರ ರಸ್ತೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಚಾಮರಾಜನಗರದ ಕೊಳ್ಳೆಗಾಲದಲ್ಲಿ ನಡೆದಿತ್ತು. ಹಬ್ಬಕ್ಕೆ ಬಟ್ಟೆ ಖರೀದಿಸಲು ಸಂತೋಷ್ ಕುಟುಂಬ ಬೈಕ್ನಲ್ಲಿ ತೆರಳುತ್ತಿತ್ತು. ಈ ವೇಳೆ ನಿಯಂತ್ರಣ ತಪ್ಪಿ ಜಿನಕನಹಳ್ಳಿ ಸಮೀಪ ಭತ್ತ ಕತ್ತರಿಸುವ ಯಂತ್ರಕ್ಕೆ ಇವರು ಪ್ರಯಾಣಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ನಿಂದ ನಾಲ್ವರೂ ಕೆಳಕ್ಕೆ ಬಿದ್ದಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟರೆ. ಇನ್ನೊಂದು ಮಗು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಸಾವನ್ನಪ್ಪಿತ್ತು. ಮೃತರನ್ನು ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದ ಸಂತೋಷ (37), ಸೌಮ್ಯ (27) ಹಾಗು ಮಕ್ಕಳಾದ ಸಾಕ್ಷಿ (4), ಅಭಿ (9) ಎಂದು ಪತ್ತೆಹಚ್ಚಲಾಗಿತ್ತು.
ಇದನ್ನೂ ಓದಿ: ಚಾರ್ಮಾಡಿ ಘಾಟ್ನಲ್ಲಿ ಅಪಘಾತ: ಸಾವಿರ ಅಡಿ ಪ್ರಪಾತಕ್ಕೆ ಬಿದ್ದ ಲಾರಿ, ಪವಾಡ ಸದೃಶ ರೀತಿಯಲ್ಲಿ ಚಾಲಕ ಪಾರು