ಬೆಂಗಳೂರು: ಡ್ರಗ್ಸ್ ಮಾಫಿಯಾ ಬೆಳಕಿಗೆ ಬಂದ ದಿನದಿಂದ ಸಿಸಿಬಿ ಅಧಿಕಾರಿಗಳು ಎಲ್ಲೆಡೆ ಅಲರ್ಟ್ ಆಗಿದ್ದಾರೆ. ಆದರೂ ಬೆಂಗಳೂರಿನಲ್ಲಿ ಡ್ರಗ್ಸ್ ಹಾವಳಿ ನಿಲ್ಲುತ್ತಿಲ್ಲ.
ನಗರದಲ್ಲಿ ಕೆಲ ಯುವಕರು ಮಾದಕ ವಸ್ತುಗಳಿಗೆ ಅಡಿಕ್ಟ್ ಆಗಿ ಪೊಲೀಸರ ಕಣ್ಣತಪ್ಪಿಸಿ ಮಾದಕ ವಸ್ತು ತಂದು ಸೇವನೆ ಹಾಗೂ ಪೆಡ್ಲಿಂಗ್ ಮಾಡುತ್ತಿದ್ದಾರೆ. ಸದ್ಯ ಸಿಸಿಬಿ ಪೊಲೀಸರು ಇಬ್ಬರು ಡ್ರಗ್ಸ್ ಪೆಡ್ಲರ್ಗಳನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಗಣಪತಿ ಫೋಟೋ ಸ್ಟ್ಯಾಂಪ್ನಲ್ಲಿ ಬರುತ್ತಿತ್ತು ಡ್ರಗ್ಸ್: ಸಿಕ್ಕಿಬಿದ್ದ ಆರೋಪಿಗಳು
ರಾಹುಲ್ ಹಾಗೂ ದರ್ಶನ್ ಬಂಧಿತ ಆರೋಪಿಗಳು. ತನಿಖೆಯಲ್ಲಿ ಈ ಆರೋಪಿಗಳು ಡಾರ್ಕ್ನೆಟ್ ಮೂಲಕ ಡ್ರಗ್ಸ್ ಆಮದು ಮಾಡಿಕೊಂಡು, ತಮಗೆ ಬೇಕಾದ ಗಿರಾಕಿಗಳಿಗೆ ಅಧಿಕ ಹಣಕ್ಕೆ ಮಾರಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಓದಿ: ಜೈಲಿನಲ್ಲಿದ್ದುಕೊಂಡೇ ಡೀಲ್: ವಿಚಾರಣಾಧೀನ ಕೈದಿಗಳಿಬ್ಬರಿಂದ ವ್ಯಾಪಾರಿಗೆ ಹಣಕ್ಕಾಗಿ ಬೆದರಿಕೆ ಕರೆ!
ಸದ್ಯ ಬಂಧಿತರಿಂದ 50 ಲಕ್ಷ ಮೌಲ್ಯದ ಮಾದಕ ವಸ್ತುವನ್ನು ವಶಕ್ಕೆ ಪಡೆದಿರುವ ಸಿಸಿಬಿ ಪೊಲೀಸರು, ಆರೋಪಿಗಳ ಹಿನ್ನೆಲೆ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.