ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಕಾಣಿಸಿಕೊಂಡ ಪಕ್ಷೇತರ ಶಾಸಕ ನಾಗೇಶ್ ಮತ್ತು ಆರ್.ಶಂಕರ್ ತೀವ್ರ ಅಚ್ಚರಿ ಮೂಡಿಸಿದ್ದಾರೆ.
ಬೆಂಗಳೂರಿನ ಸೆವೆನ್ ಮಿನಿಸ್ಟರ್ಸ್ ಕ್ವಾರ್ಟ್ರಸ್ ನಲ್ಲಿ ರಮೇಶ್ ಜಾರಕಿಹೊಳಿ ಭೇಟಿಯಾದ ಪಕ್ಷೇತರರಿಗೆ ಶಾಸಕ ಮಹೇಶ್ ಕುಮಠಳ್ಳಿ ಸಾಥ್ ನೀಡಿದ್ದಾರೆ.
ನಿನ್ನೆ ಡಿ.ಕೆ.ಶಿವಕುಮಾರ್ ಕಾಣಿಸಿಕೊಂಡ ಮುಳಬಾಗಿಲು ಶಾಸಕ ನಾಗೇಶ್ ಇಂದು ಮತ್ತೊಂದು ಪಾಳಯದಲ್ಲಿ ಕಾಣಿಸಿಕೊಂಡಿದ್ದು ಕುತೂಹಲ ಕೆರಳಿಸಿದ್ದಾರೆ.
ಸಿದ್ದರಾಮಯ್ಯ ಜೊತೆ ದೆಹಲಿಯಲ್ಲಿ ಕಾಣಿಸಿಕೊಂಡಿದ್ದ ಆರ್.ಶಂಕರ್, ಇತ್ತ ಕುಮಾರ ಕೃಪಾ ಅತಿಥಿಗೃಹದಲ್ಲಿ ಕಾಂಗ್ರೆಸ್ ಸಭೆ ನಡೆಯುತ್ತಿರುವ ಹೊತ್ತಲ್ಲೇ ರಮೇಶ್ ನಿವಾಸದಲ್ಲಿ ಕಾಣಿಸಿಕೊಂಡು ಹುಬ್ಬೇರಿಸಿದ್ದಾರೆ. ಜೊತೆಗೆ ಮೈತ್ರಿ ನಾಯಕರ ಎದೆಬಡಿತವನ್ನೂ ಮತ್ತಷ್ಟು ಹೆಚ್ಚಿಸಿದ್ದಾರೆ.